ಜೆಎಸ್ಎಸ್ ಪಬ್ಲಿಕ್ ಶಾಲೆ ವಿದ್ಯಾರ್ಥಿಗೆ ಬೆಳ್ಳಿ ಪದಕ – ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಮೈಸೂರು; ರಾಯಚೂರಿನಲ್ಲಿ ಸಿಬಿಎಸ್ಇ ವತಿಯಿಂದ ಆಯೋಜಿಸಲಾದ ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮೈಸೂರಿನ ಜೆ ಎಸ್ ಎಸ್ ಪಬ್ಲಿಕ್ ಶಾಲೆಯ ೧೦ನೇ ತರಗತಿಯ ವಿದ್ಯಾರ್ಥಿ ಸಮರ್ಥ್ ಎಸ್., ಅತ್ಯುತ್ತಮ ಸಾಧನೆ ಮಾಡಿದ್ದಾರೆ.೧೭ ವರ್ಷದೊಳಗಿನ ವಿಭಾಗದ ೮೦೦ ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗೆದ್ದು ಶಾಲೆಗೆ ಕೀರ್ತಿ ತಂದಿದ್ದಾರೆ.ಅವರ ಈ ಅತ್ಯುತ್ತಮ ಸಾಧನೆಯ ಹಿನ್ನೆಲೆಯಲ್ಲಿ ಅವರು ರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ಮಟ್ಟದ ಕ್ರೀಡಾಕೂಟವು ಪಂಜಾಬ್ನ ಪಟಿಯಾಲದಲ್ಲಿ ಅ. ೧೫ ರಿಂದ ಅಕ್ಟೋಬರ್ ೨೦ ರವರೆಗೆ…