ರಾಜ್ಯದ ಬರ ಪರಿಸ್ಥಿತಿ ನಿರ್ವಹಣೆಗೆ ಕೇಂದ್ರ ಸರ್ಕಾರದಿಂದ ಬರಪರಿಹಾರ ನೀಡುವಂತೆ ಮನವಿ ಮಾಡಿದ್ದೇವೆ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
ಮೈಸೂರು: ಕೇಂದ್ರ ಸರ್ಕಾರದ ನಿಯಮಗಳಂತೆ ಬರ ಅಧ್ಯಯನ ನಡೆಸಿ, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ ಮಾಡಲಾಗಿದೆ. ಕೇಂದ್ರ ಸರ್ಕಾರಕ್ಕೆ ಬರ ಪರಿಹಾರ ನೀಡುವಂತೆ ಮನವಿ ಮಾಡಿದ್ದೇವೆ. ಕೇಂದ್ರ ಸರ್ಕಾರವೂ ಒಂದು ತಂಡವನ್ನು ಕಳುಹಿಸಿ ಪರಿಶೀಲನೆ ನಡೆಸಲಿದೆ. ಆ ಬಳಿಕ ಪರಿಹಾರದ ಹಣ ಬಿಡುಗಡೆ ಮಾಡಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು.ಶನಿವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ನಮ್ಮ ಮುಂದಿರುವ ಪ್ರಮುಖ ಆದ್ಯತೆ ಜನರಿಗೆ ಕುಡಿಯುವ ನೀರು ಪೂರೈಸುವುದಾಗಿದೆ. ಜಾನುವಾರುಗಳಿಗೂ ಕುಡಿಯುವ ನೀರು ಒದಗಿಸುವುದು…