ವಿವಿಧ ಕ್ಷೇತ್ರಗಳ 10 ಸಾಧಕರನ್ನು ಸನ್ಮಾನಿಸಲು ನಿರ್ಧಾರ- ತಹಸೀಲ್ದಾರ್ ಶ್ರೀನಿವಾಸ್
ಎಚ್ ಡಿ ಕೋಟೆ : ಈ ಬಾರಿಯ ಕನ್ನಡ ರಾಜ್ಯೋತ್ಸವದಲ್ಲಿ ಕನ್ನಡ ಭಾಷೆ, ನಾಡು-ನುಡಿಯ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮಗಳನ್ನು ಆಯೋಜಿಸುವುದರ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 10 ಸಾಧಕರನ್ನು ಸನ್ಮಾನಿಸಲಾಗುವುದು ಎಂದು ತಹಶೀಲ್ದಾರ್ ಶ್ರೀನಿವಾಸ್ ತಿಳಿಸಿದರು. ಪಟ್ಟಣದ ಆಡಳಿತ ಭವನದ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಗಡಿ ಭಾಗದಲ್ಲಿರುವ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಕನ್ನಡ ಭಾಷೆಯ ಬೆಳವಣಿಗೆ ಹಾಗೂ ಕನ್ನಡದ ಅಭಿಮಾನವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಗತ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ರಾಜ್ಯೋತ್ಸವದ ಅಂಗವಾಗಿ…