Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

admin

ನೇತಾಜಿ ಸುಭಾಷ್ ಚಂದ್ರ ಬೋಸ್‌ರ ತ್ಯಾಗ, ಹೋರಾಟ, ದೇಶಭಕ್ತಿಯ ಆದರ್ಶಗಳನ್ನು ಯುವಕರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

ಮೈಸೂರು : ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪುಣ್ಯಸ್ಮರಣೆಯ ಪ್ರಯುಕ್ತ ನೇತಾಜಿ ಸುಭಾಷ್ ಚಂದ್ರ ಬೋಸ್ ಯೂಥ್ ಮೋಟಿವೇಶನ್ ಟೀಮ್ ಮೈಸೂರು ವತಿಯಿಂದ ಮೈಸೂರಿನ ನೇತಾಜಿ ಸುಭಾಷ್ ಚಂದ್ರ ಬೋಸ್ ಸರ್ಕಲ್‌ನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಚಾಮುಂಡೇಶ್ವರಿ ಕ್ಷೇತ್ರದ ಅಧ್ಯಕ್ಷ ರವಿ , ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಭಾರತದ ಸ್ವಾತಂತ್ರ÷್ಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಮಹಾನ್ ದೇಶಭಕ್ತರು….

Read More

ವಾಕ್ ಮತ್ತು ಶ್ರವಣ ಸಂಸ್ಥೆ ಮತ್ತು ಅಕ್ಷಯ ಪಾತ್ರ ಸಹಯೋಗದಲ್ಲಿ ಶ್ರವಣ-ವಾಕ್ ದೋಷವುಳ್ಳ ಮಕ್ಕಳಿಗೆ ಉಪಹಾರ ಸೇವೆ

ಮೈಸೂರು: ನಗರದ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಮತ್ತು ಅಕ್ಷಯ ಪಾತ್ರ ಫೌಂಡೇಶನ್ ಸಹಯೋಗದೊಂದಿಗೆ ಶ್ರವಣ ಮತ್ತು ವಾಕ್ ದೋಷವುಳ್ಳವರು ಚಿಕಿತ್ಸೆಗಾಗಿ ಸಂಸ್ಥೆಗೆ ಆಗಮಿಸಿದಾಗ ಅವರಿಗೆ ಬೆಳಗಿನ ಉಪಹಾರ ವಿತರಿಸುವ ನೂತನ ಸೇವಾ ಕಾರ್ಯಕ್ರಮಕ್ಕೆ ನಗರದ ಖಾಸಗಿ ಹೋಟೆಲ್ ಆವರಣದಲ್ಲಿ ಜಿ.ಪಂ ಸಿಇಒ ಯುಕೇಶ್ ಕುಮಾರ್ ಚಾಲನೆ ನೀಡಿದರು.ಈ ವೇಳೆ ಇಸ್ಕಾನ್ ಸಂಸ್ಥೆಯ ಶ್ರೀ ಸ್ತೋಕ ಕೃಷ್ಣ ಸ್ವಾಮೀಜಿ ಮಾತನಾಡಿ, ಅಕ್ಷಯ ಪಾತ್ರ ಫೌಂಡೇಶನ್ ಸಂಸ್ಥೆಯು ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತ ಮಧ್ಯಾಹ್ನದ ಊಟ…

Read More

ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಯ ಆರ್‌ಐ ಮಂಜುನಾಥ್ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

ಮೈಸೂರು: ತಪ್ಪು ಮಾಡದೆ ಅಮಾನತುಗೊಂಡಿರುವ ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಯ ಅಮಾಯಕ ನಾಲ್ವರು ಅಧಿಕಾರಿಗಳನ್ನು ರಕ್ಷಿಸುವಂತೆ ಆಗ್ರಹಿಸಿ ಹಾಗೂ ಇದರ ಹಿಂದಿನ ಸೂತ್ರಧಾರಿ ಕಂದಾಯ ನಿರೀಕ್ಷಕ ಮಂಜುನಾಥ್‌ರನ್ನು ಕೂಡಲೆ ಬಂಧಿಸುವAತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಸಮಾಜ ರಕ್ಷಣಾ ಸೇನೆ, ನೇತೃತ್ವದಲ್ಲಿ ರಮ್ಮನಹಳ್ಳಿ ಗ್ರಾಮಸ್ಥರು ಮೈಸೂರಿನ ಜಿಲ್ಲಾಧಿಕಾರಿ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು.ರಮ್ಮನಹಳ್ಳಿ ಪಟ್ಟಣ ಪಚಾಯಿತಿ ವ್ಯಾಪ್ತಿಯ ಹಂಚ್ಯಾ ಗ್ರಾಮ ಸರ್ವೆ ನಂಬರ್ 292 ರ ಸರ್ಕಾರಿ ಖರಾಬು ಜಮೀನಿಗೆ ಸಂಬAಧಿಸಿದAತೆ ದುರುದ್ದೇಶಪೂರಿತವಾಗಿ ರಮ್ಮನಹಳ್ಳಿ ಪಂಚಾಯಿತಿ…

Read More

ಸಚಿವ ನಾಗೇಂದ್ರ ಪರ ನಗರಪಾಲಿಕೆ ಮಾಜಿ ಸದಸ್ಯ ಲೋಕೇಶ್ ಪಿಯಾರಿಂದ ಪಂಜಿನ ಮೆರವಣಿಗೆ

ಮೈಸೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್‌ನ ಮೈಸೂರು ನಗರಪಾಲಿಕೆಯ ಮಾಜಿ ಸದಸ್ಯ ಲೋಕೇಶ್ ಪಿಯಾ ತಮ್ಮ ಬೆಂಬಲಿಗರೊAದಿಗೆ ನಗರದಲ್ಲಿ ಪಂಜಿನ ಮೆರವಣಿಗೆ ಪ್ರತಿಭಟನೆ ನಡೆಸಿದರು.ಈ ವೇಳೆ ಮಾತನಾಡಿದ ಲೋಕೇಶ್ ಪಿಯಾ, ಸಚಿವ ಬಿ.ನಾಗೇಂದ್ರ ಅವರ ವಿರುದ್ಧ ಮಾಡಲಾಗುತ್ತಿರುವ ಆರೋಪಗಳು ಹಾಗೂ ಪ್ರತಿಭಟನೆಗಳಿಗೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ. ಅಭಿವೃದ್ಧಿ ಕಾರ್ಯಗಳು ಮತ್ತು ಜನಪರ ಕಾರ್ಯಕ್ರಮಗಳ ವಿಚಾರದಲ್ಲಿ ಸಚಿವರ ಪರವಾಗಿ ನಿಲ್ಲುವವರ ಸಂಖ್ಯೆ ಕಡಿಮೆಯಿಲ್ಲ ಎಂಬುದನ್ನು ತೋರಿಸುವ ಉದ್ದೇಶದಿಂದ…

Read More

ಇತಿಹಾಸದ ಕಾಲಗರ್ಭದಲ್ಲಿ ಮುಚ್ಚಿ ಹೋಗಿರುವ ಕಂದಕಗಳ ಪರಿಶೀಲನೆ ನಡೆಸಿ: ತಹಶೀಲ್ದಾರ್ ನಿಸರ್ಗ ಪ್ರಿಯಾ

ಪಿರಿಯಾಪಟ್ಟಣ: ಪಿರಿಯಾಪಟ್ಟಣದ ಇತಿಹಾಸದ ಕಾಲಗರ್ಭದಲ್ಲಿ ಮುಚ್ಚಿ ಹೋಗಿರುವ ಕೋಟೆ ಕಂದಕಗಳ ಬಗ್ಗೆ ಪರಿಶೀಲನೆ ನಡೆಸುವಂತೆ ತಹಸೀಲ್ದಾರ್ ನಿಸರ್ಗ ಪ್ರಿಯ ಸೂಚಿಸಿದರು. ಪಟ್ಟಣದ ಚನ್ನಕೇಶವ ದೇವಾಲಯದ ಬಳಿ ಪುರಾತತ್ವ ಇಲಾಖೆ ಮತ್ತು ಸರ್ವೆ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ ಸಂದರ್ಭ ಭೇಟಿ ನೀಡಿ ಮಾತನಾಡಿದರು  ದೂರುದಾರರು ಕಂದಕಗಳನ್ನು ಮುಚ್ಚಿ ಜಮೀನು ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ ಇವುಗಳನ್ನು ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಿ ಕ್ರಮ ವಹಿಸುವಂತೆ ಸರ್ವೇ ಇಲಾಖೆ ಎಡಿಎಲ್ ಆರ್ ಮುನಿಯಪ್ಪ ಅವರಿಗೆ ಸೂಚಿಸಿದರು.  ಈ ಸಂದರ್ಭದಲ್ಲಿ ಮಾತನಾಡಿದ…

Read More

ಗುಂಡೇಟಿಗೆ ಬಲಿಯಾದ ಮೂವರ ಅ0ತ್ಯಕ್ರಿಯೆ; ಮೃತರ ಕುಟುಂಬಗಳಿಗೆ ಶಾಸಕರಿಂದ ತಲಾ 15 ಲಕ್ಷರೂ ಪರಿಹಾರ ವಿತರಣೆ

• ಉದ್ದೇಶ ಪೂರ್ವಕವಾಗಿ ಮೂವರನ್ನು ಗುಂಡಿಟ್ಟು ಕೊಂದಿಲ್ಲ ಎಂದು ಸಾಬೀತುಪಡಿಸಲು ಅರಣ್ಯ ಇಲಾಖೆಯ ಅಧಿಕಾರಿಗಳ ಕಸರತ್ತು ಹನೂರು; ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಗ್ಯ ಬೀಟ್‌ನಲ್ಲಿ ನಡೆದ ಶೂಟೌಟ್ ಪ್ರಕರಣದಲ್ಲಿ ಮೃತಪಟ್ಟ ಮೂವರ ಕುಟುಂಬಗಳಿಗೆ ಹನೂರು ಕ್ಷೇತ್ರದ ಶಾಸಕ ಎಂ.ಆರ್.ಮAಜುನಾಥ್ ಅವರು ಇಂದು ಪರಿಹಾರ ವಿತರಿಸಿದ್ದಾರೆ.ಭಾನುವಾರ ಪ್ರತಿಭಟನಾನಿರತರಿಗೆ ನೀಡಿದ್ದ ಭರವಸೆಯಂತೆಹನೂರು ತಾಲೂಕಿನ ತೋಮಿಯಾರ್ ಪಾಳ್ಯ ಗ್ರಾಮದ ಕುಮಾರ್, ಗ್ರಾಮದ ಸಮೀಪವಿರುವ ಮರಿಯಮಂಗಲ ಗ್ರಾಮದ ಅಂತೋಣಿ ಸಾಮಿ ಹಾಗೂ ಪೀಟರ್ ಅವರ ಮನೆಗಳಿಗೆ ತೆರಳಿ ಸರ್ಕಾರದಿಂದ 5 ಲಕ್ಷ ರೂ….

Read More

ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭ ಮತ್ತು ಪ್ರಯೋಜನ ಪಡೆದುಕೊಳ್ಳಿ :ಕೆ.ಹರೀಶ್ ಗೌಡ

ಮೈಸೂರು: ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭ ಮತ್ತು ಪ್ರಯೋಜನಗಳನ್ನು ವಿದ್ಯಾರ್ಥಿನಿಯರು ಸರಿಯಾಗಿ ತಿಳಿದುಕೊಂಡು, ತಮ್ಮ ಜೀವನದಲ್ಲಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಕೆ.ಹರೀಶ್‌ಗೌಡ ಹೇಳಿದರು.ಸೋಮವಾರ ನಗರದ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಯುವನಿಧಿ ಹಾಗೂ ಶಕ್ತಿ ಯೋಜನೆಗಳ ಕುರಿತು ವಿದ್ಯಾರ್ಥಿನಿಯರಿಗೆ ಅರಿವು ಮೂಡಿಸುವ ವಿಶೇಷ ಸಂವಾದ ಮತ್ತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,ಗ್ರಾಮೀಣ ಪ್ರದೇಶಗಳಿಂದ ಬರುವ ವಿದ್ಯಾರ್ಥಿನಿಯರು ಕಾಲೇಜಿಗೆ ತಲುಪಲು ಎದುರಿಸುತ್ತಿರುವ ಸಾರಿಗೆ ಸಮಸ್ಯೆಯನ್ನು ಗಮನಿಸಿದ ಶಾಸಕರು,…

Read More

ಕಬಿನಿ ಜಲಾಶಯದಿಂದ ಒಳ ಹರಿವಿಗಿಂತ ಎರಡು ಪಟ್ಟು ನೀರನ್ನು ನದಿಗೆ ಹರಿಸುತ್ತಿರುವ ಅಧಿಕಾರಿಗಳು !

*ಜಲಾಶಯದ ನೀರಿನ ಮಟ್ಟ 3 ಅಡಿ ಕುಸಿತು, ಇದೇ ರೀತಿ ನೀರು ಹರಿಸಿದರೆ ಒಂದೇ ವಾರದಲ್ಲಿ ಡ್ಯಾಂ ಖಾಲಿಮೈಸೂರು; ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿರುವ ಹಿನ್ನಲೆಯಲ್ಲಿ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದಿಂದ ಒಳಹರಿವಿಗಿಂತ ಎರಡು ಪಟ್ಟು ನೀರನ್ನು ಅಧಿಕಾರಿಗಳು ನದಿಗೆ ಹರಿಬಿಡುವ ಮೂಲಕ ತಮಿಳುನಾಡಿಗೆ ಹರಿಸುತ್ತಿದ್ದಾರೆ.ಕಾವೇರಿ ನೀರು ನಿರ್ವಹಣಾ ಸಮಿತಿ ತಮಿಳುನಾಡಿಗೆ ನಿತ್ಯವೂ ನೀರು 12 ಸಾವಿರ ಕ್ಯೂಸೆಕ್ ಅಚಿದರೆ 1 ಟಿಎಂಸಿ ನೀರನ್ನು ಹರಿಸುವಂತೆ ಈಗಾಗಲೇ…

Read More

ಪ್ಯಾರಾ ಲೀಗಲ್ ವಾಲಂಟಿಯರ್’ ಯೋಜನೆ ಜಿಲ್ಲೆಯಲ್ಲಿ ಅನುಷ್ಠಾನ : ಸಂಧ್ಯಾ ರಾವ್. ಪಿ

ಮೈಸೂರು: ಸಾಮಾನ್ಯ ಜನರಿಗೆ ಕಾನೂನಿನ ಅರಿವು ಮೂಡಿಸಲು ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಉಚಿತ ನ್ಯಾಯಾಂಗ ನೆರವು ತಲುಪಿಸಲು ‘ಪ್ಯಾರಾ ಲೀಗಲ್ ವಾಲಂಟಿಯರ್’ ಯೋಜನೆಯನ್ನು ಸಕ್ರಿಯವಾಗಿ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲು ತರಬೇತಿ ನೀಡಲಾಗುತ್ತಿದ್ದು, ಸ್ವಯಂ ಸೇವಕರು ತರಬೇತಿಯನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮೈಸೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಂಧ್ಯಾ ರಾವ್. ಪಿ ತಿಳಿಸಿದರು.ಸೋಮವಾರ ನಗರದ ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,…

Read More

ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಅಹೋರಾತ್ರಿ ಪ್ರತಿಭಟನಾ ಧರಣಿ

ಮೈಸೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಕೋಟ್ಯಾಂತರ ರೂ ಹಗರಣ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಸೋಮವಾರದಿಂದ ಮೈಸೂರಿನಲ್ಲಿ ಬಿಜೆಪಿಯಿಂದ ಅಹೋರಾತ್ರಿ ಪ್ರತಿಭಟನಾ ಧರಣಿ ನಡೆಸಲಾಗುತ್ತಿದೆ.ಮೈಸೂರಿನ ಸಿದ್ದರ್ಥಾ ನಗರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಸಚಿವ ನಾಗೇಂದ್ರ, ಕಾಂಗ್ರೆಸ್ ಸರ್ಕಾರದ ವಿರುದ್ಧ ನಾನಾ ಘೋಷಣೆಗಳನ್ನು ಕೂಗಿದರು.ಈ ವೇಳೆ ಮಾತನಾಡಿದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಕಾಂಗ್ರೆಸ್ ಸರ್ಕಾರ ಅಧಿಕಾರದಕ್ಕೆ ಬಂದಾಗಲೆಲ್ಲಾ ಬಹುದೊಡ್ಡ ಹಗರಣಗಳೇ ನಡೆಯುತ್ತಿವೆ….

Read More