ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿಯರಿಂದ ನೂರಾರು ಮಂದಿ ಭಕ್ತರಿಗೆ ತಪ್ತ ಮುದ್ರಾಧಾರಣೆ
ಮೈಸೂರು; ಆಷಾಢ ಮಾಸದ ಪ್ರಥಮ ಏಕಾದಶಿ ಪರ್ವಕಾಲ ಹಿನ್ನೆಲೆಯಲ್ಲಿ ತಪ್ತ ಮುದ್ರಾಧಾರಣೆ ಕಾರ್ಯಕ್ರಮವನ್ನು ಮೈಸೂರಿನ ಸರಸ್ವತಿಪುರಂ ಶ್ರೀ ಕೃಷ್ಣಧಾಮ ಮಠದಲ್ಲಿ ಶ್ರೀ ಕೃಷ್ಣ ಮಿತ್ರ ಮಂಡಳಿ ಹಾಗೂ ಶ್ರೀಕೃಷ್ಣ ಟ್ರಸ್ಟ್ ವತಿಯಿಂದ ಏರ್ಪಡಿಸಲಾಗಿತ್ತು. ಉಡುಪಿ ಪಲಿಮಾರು ಮಠದ ಸಂಸ್ಥಾನಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥಸ್ವಾಮೀಜಿಯವರು ಹಾಗೂ ಕಿರಿಯ ಶ್ರೀಗಳಾದ ವಿದ್ಯಾರಾಜೇಶ್ವರತೀರ್ಥಸ್ವಾಮ್ಭಿಜಿಯವರು ಭಕ್ತರಿಗೆ ಶಂಖ ಚಕ್ರಗಳ ಮುದ್ರಾಧಾರಣೆ ನೆರವೇರಿಸಿದರು. ಬೆಳಗ್ಗಿನಿಂದಲೇ ಸಹಸ್ರಾರು ಭಕ್ತರು ಶ್ರೀಗಳಿಂದ ಮುದ್ರಾಧಾರಣೆ ಮಾಡಿ ಮಾತನಾಡಿದ ಶ್ರೀ ವಿದ್ಯಾಧೀಶ ತೀರ್ಥಸ್ವಾಮೀಜಿ, ಆಷಾಢಮಾಸದ ಶುಕ್ಲ ಪಕ್ಷದ ಏಕಾದಶಿಯನ್ನು ಶಯನಿ…