ವಿಜಯ ವಿಠಲ ವಿದ್ಯಾಶಾಲೆಯಲ್ಲಿ ಇಂಟರ್ಯಾಕ್ಟ್ ಕ್ಲಬ್ ಪದಗ್ರಹಣ, ಉಚಿತ ನೇತ್ರ ತಪಾಸಣಾ ಶಿಬಿರ
ಮೈಸೂರು; ನಗರದ ವಿಜಯ ವಿಠಲ ವಿದ್ಯಾಶಾಲೆಯಲ್ಲಿ, 2026-27ನೇ ಸಾಲಿನ ಇಂಟರ್ಯಾಕ್ಟ್ ಕ್ಲಬ್‌ನ ಪದಗ್ರಹಣ ಸಮಾರಂಭವು ಶಾಲಾ ಆವರಣದಲ್ಲಿ ಯಶಸ್ವಿಯಾಗಿ ನಡೆಯಿತು.ಈ ಸಮಾರಂಭಕ್ಕೆ ರೋಟರಿ ಮೈಸೂರಿನ ಅಧ್ಯಕ್ಷ ಆರ್.ಟಿ.ಎನ್. ಎಂ. ಎನ್. ವೆಂಕಟೇಶ್ ಅವರು ಮುಖ್ಯ ಅತಿಥಿಗಳಾಗಿ ಮತ್ತು ಪದಗ್ರಹಣ ಅಧಿಕಾರಿಯಾಗಿ ಆಗಮಿಸಿದ್ದರು. ರೋಟರಿ ಮೈಸೂರಿನ ಯುವ ಸೇವಾ ವಿಭಾಗದ ನಿರ್ದೇಶಕರಾದ ಆರ್.ಟಿ.ಎನ್. ಡಾ. ನಂಜರಾಜೇ ಎಸ್. ಅರಸ್ ಅವರು ಗೌರವ ಅತಿಥಿಗಳಾಗಿ ಭಾಗವಹಿಸಿದ್ದರು. ಡಾ. ಅಗರ್ವಾಲ್ಸ್ ಕಣ್ಣಿನ ಆಸ್ಪತ್ರೆಯ ಕ್ಲಿನಿಕಲ್ ಸೇವೆಗಳ ಮುಖ್ಯಸ್ಥ ಡಾ. ಪವನ್ ವಿ….