ಕೃಷಿ ಭೂಮಿಯ ಆರೋಗ್ಯವನ್ನು ಕಾಪಾಡಲು ಬಹುಬೆಳೆ ಪದ್ಧತಿ ಅಳವಡಿಸಿಕೊಳ್ಳುವುದು ಅತ್ಯಗತ್ಯ; ಪ್ರಧಾನ ವಿಜ್ಞಾನಿ ಡಾ. ಎಂ.ಜೆ. ಚಂದ್ರೇಗೌಡ
ಮೈಸೂರು; ಕೃಷಿ ಭೂಮಿಯ ಆರೋಗ್ಯವನ್ನು ಕಾಪಾಡಲು ಬಹುಬೆಳೆ ಪದ್ಧತಿ ಅಳವಡಿಸಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ಬೆಂಗಳೂರಿನ ಐಸಿಎಆರ್-ಅಟಾರಿ ವಲಯ-11ರ ಪ್ರಧಾನ ವಿಜ್ಞಾನಿ ಡಾ. ಎಂ.ಜೆ. ಚಂದ್ರೇಗೌಡ ಹೇಳಿದರು.ಮೈಸೂರಿನ ನಾಗನಹಳ್ಳಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಐಸಿಎಆರ್ ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರ, ಸುತ್ತೂರು ಕೃಷಿ ಭೂಮಿ ಉಳಿಸಿ ಅಭಿಯಾನ ಹಾಗೂ ಬದಲಾದ ಹವಾಮಾನಕ್ಕೆ ಸೂಕ್ತ ಬೆಳೆಗಳ ಆಯ್ಕೆ ಕುರಿತು ರೈತ-ವಿಜ್ಞಾನಿಗಳ ಸಂವಾದ ಭಾರತೀಯ ಕೃಷಿ ಅನುಸಂಧಾನ ಪರಿಷತ್, ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರ, ಸುತ್ಥೂರು, ಕೃಷಿ ಇಲಾಖೆ ಮೈಸೂರು,…