Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

admin

ಮೈಸೂರು ಯೋಗೀಸ್ ಟ್ರಸ್ಟ್ವತಿಯಿಂದ ಕಂಪ್ಯೂಟರ್, ಮಕ್ಕಳ ಪುಸ್ತುಕಗಳ ಕೊಡುಗೆ ಹಸ್ತಾಂತರ

ಮೈಸೂರು ; ಮೈಸೂರು ಯೋಗೀಸ್ ಟ್ರಸ್ಟ್ವತಿಯಿಂದ ಶನಿವಾರ ನಗರದ ದೊಡ್ಡಪೇಟೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ,ಗೆ ಮೈಸೂರು ನಗರ ಇಲ್ಲಿಯ ಶೈಕ್ಷಣಿಕ ಅಭಿವೃದ್ಧಿಗಾಗಿ ಕಂಪ್ಯೂಟರ್ ಹಾಗೂ ಶಾಲಾ ಮಕ್ಕಳ ಗ್ರಂಥಾಲಯಕ್ಕೆ ಕೆಲವು ಉಪಯುಕ್ತ ಪುಸ್ತಕಗಳನ್ನು ಕೊಡುಗೆಯಾಗಿ ನೀಡಲಾಯಿತು.ಮೈಸೂರು ಯೋಗೀಸ್ ಟ್ರಸ್ಟ್ ಸಂಸ್ಥಾಪಕ ಯೋಗ ಪ್ರಕಾಶ್, ಲಯನ್ ಸುರೇಶ್, ಗೌರವ ಅಧ್ಯಕ್ಷ ಬಿ. ವಿ. ಮಂಜುನಾಥ್ ಅವರು ಶಾಲೆಯ ಮುಖ್ಯ ಉಪಾಧ್ಯಾಯ ರವೀಶ್ ಅವರಿಗೆ ಕಂಪ್ಯೂಟರ್ ಹಾಗೂ ಶಾಲಾ ಗ್ರಂಥಾಲಯಕ್ಕೆ ಪುಸ್ತಕಗಳನ್ನು ನ್ನು ಹಸ್ತಾಂತರಿಸಿದರು. ಈ ವೇಳೆ ವಿಶ್ವ…

Read More

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವೃತ್ತಿ ಮಾರ್ಗದರ್ಶನ ಎಂಬ ವಿನೂತನ ಕಾರ್ಯಕ್ರಮ ಜಾರಿ; ಎಚ್.ವಿ.ರಾಜೀವ್

ಮೈಸೂರು; ಎಚ್.ವಿ. ರಾಜೀವ್ ಸ್ನೇಹ ಬಳಗದ ವತಿಯಿಂದ ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಸಿಸುತ್ತಿರುವವರ ವಿದ್ಯಾರ್ಥಿಗಳು ಸದರಿ ವರ್ಷ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ 85%ಕ್ಕಿಂತ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವೃತ್ತಿ ಮಾರ್ಗದರ್ಶನ ಎಂಬ ವಿನೂತನ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ತಿಳಿಸಿದರು.ಶನಿವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಪ್ರತಿಭಾ ಪುರಸ್ಕಾರ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮಕ್ಕೆ ಅರ್ಜಿಯನ್ನು ಸಲ್ಲಸಲು…

Read More

ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವ0ತೆ ಆಗ್ರಹಿಸಿ ಪ್ರತಿಭಟನೆ

ಮೈಸೂರು: ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವ0ತೆ ಆಗ್ರಹಿಸಿ ಶನಿವಾರ ನಗರದಲ್ಲಿ ಕರ್ನಾಟಕ ರಾಜ್ಯ ನಾಯಕರ ಯುವ ಸೇನೆ ಸಂಘಟನೆಯಿ0ದ ಪ್ರತಿಭಟನೆ ನಡೆಸಲಾಯಿತು.ನಗರದ ಪುರಭವನದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಸಚಿವ ಸತೀಶ್ ಜಾರಕಿ ಹೊಳಿ ಅವರ ಭಾವಚಿತ್ರವನ್ನು ಹಿಡಿದು ಕೆಲಕಾಲ ಪ್ರತಿಭಟನಾ ಧರಣಿ ನಡೆಸಿದರು.ಸಾಮಾಜಿಕ ಜಾಲತಾಣದಲ್ಲಿ ಸತೀಶ್ ಜಾರಕಿಹೊಳಿ ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರೋಧವಾಗಿ ಸಹಿ ಸಂಗ್ರಹ ಮಾಡಿ ಸಿದ್ದರಾಮಯ್ಯ…

Read More

ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗೆ ವ್ಯಾಪಕ ಜಾಗೃತಿ ಅಗತ್ಯ : ಜಿಲ್ಲಾಧಿಕಾರಿ ಶ್ರೀರೂಪ 

ವರದಿ ಜಿ,ಬಂಗಾರು  ಚಾಮರಾಜನಗರ, ಜೂನ್ 12;  ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗಾಗಿ ಮಕ್ಕಳ ಪೋಷಕರು ಹಾಗೂ ಮಕ್ಕಳನ್ನು ದುಡಿಸಿಕೊಳ್ಳುವ ಮಾಲೀಕರಿಗೆ ವ್ಯಾಪಕ ಜಾಗೃತಿ ಮೂಡಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಅಧ್ಯಕ್ಷರು ಆಗಿರುವ ಶ್ರೀರೂಪ ಅವರು ತಿಳಿಸಿದರು.  ನಗರದ ವರನಟ ಡಾ. ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,…

Read More

ನಾನು ಬದುಕಿದ್ದೀನಿ, ಆರೋಗ್ಯವಾಗಿದ್ದೀನಿ; ಚಿತ್ರ ನಟ ದೊಡ್ಡಣ್ಣ

ಬೆಂಗಳೂರು; ಬೆಳ್ಳಂಬೆಳಗ್ಗೆ ಕಿಡಿಗೇಡಿಗಳು ನಾನು ಸತ್ತೋದೆ ಅನ್ನೋ ಸುದ್ದಿ ಹಬ್ಬಿಸಿದ್ದಾರೆ. ನಾನು ಬದುಕಿದ್ದೀನಿ, ಆರೋಗ್ಯವಾಗಿ ಇದೀನಿ ಎಂದು ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಹೇಳಿದರು.ಬೆಳಗ್ಗೆ ಏಳೋ ಮುಂಚೆನೇ ಯಾರೋ ಅವಿವೇವಿಕಿಗಳು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ಗಳನ್ನು ಹಾಕಿ ನಾನು ಸತ್ತುಹೋದೆ ಅಂತ ಸುದ್ದಿ ಹಬ್ಬಿಸಿದಾರೆ. ಅದೆಲ್ಲ ಶುದ್ಧ ಸುಳ್ಳು. ನನ್ನ ಆರೋಗ್ಯಚನಾಗಿದೆ, ಬೆಳಗ್ಗೆಯಿಂದ ಪಾಪ ನನ್ನ ಮಕ್ಕಳು, ಮೊಮ್ಮಕ್ಕಳು ಕಾಲ್ ಮಾಡ್ತಾನೇ ಇದಾರೆ. ದೇವರ ಆಶೀರ್ವಾದ ಇರೋವರೆಗೂ ಗಟ್ಟಿಯಾಗಿನೇ ಇರ್ತೀನಿ ಎಂದು ನುಡಿದರು. .ಬದುಕಿರೋ ಮನುಷ್ಯ ಸತ್ತುಹೋದ…

Read More

ಬಾಲಕಾರ್ಮಿಕ ಪದ್ಧತಿ ಸಾಮಾಜಿಕ ಪಿಡುಗು: ರವಿಶಂಕರ್

ಮೈಸೂರು: ಬಾಲಕಾರ್ಮಿಕ ಪದ್ಧತಿ ಸಾಮಾಜಿಕ ಪಿಡುಗಾಗಿದೆ, ಅದು ನಿರ್ಮೂಲನೆಯಾದಾಗ ಮಾತ್ರ ದೇಶ ಅಭಿವೃದ್ಧಿ ಸಾಧ್ಯ ಎಂದು ಲಕ್ಷಿ÷್ಮಪುರಂ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ರವಿಶಂಕರ್ ಹೇಳಿದರುಶುಕ್ರವಾರ ನಗರದ ಚಾಮುಂಡಿಪುರAನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಾಲ ಭೋಧಿನಿ ಶಾಲೆಯಲ್ಲಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಹಾಗೂ ಅಪೂರ್ವ ಸ್ನೇಹ ಬಳಗದ ವತಿಯಿಂದ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಳಲ್ಲಿ ಜಾಗೃತಿ ಮೂಡಿಸಿ ಮಾತನಾಡಿದ ಅವರು, ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲ…

Read More

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ನಮ್ಮೆಲ್ಲರ ಆದ್ಯ ಕರ್ತವ್ಯ; ನಾಗರಾಜು ಎಸ್. ಅಂಕಸದೊಡ್ಡಿ

ಮೈಸೂರು; ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಸಮಾಜದಲ್ಲಿ ಜಾಗೃತಿ ಮೂಡಿಸುವುದು ಮತ್ತು ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ನಾಗರಾಜು ಎಸ್. ಅಂಕಸದೊಡ್ಡಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್ ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಪೊಲೀಸ್ ಇಲಾಖೆ ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಮಕ್ಕಳ ಸಹಾಯವಾಣಿ 1098 ಹಾಗೂ ಸ್ವಯಂಸೇವಾ…

Read More

ಎಸ್.ಸಿ.ಬಸವರಾಜು ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಲು ಒತ್ತಾಯಿಸಿ ಜೂನ್ 15 ರಂದು ಪ್ರತಿಭಟನೆ; ದ್ಯಾವಪ್ಪ ನಾಯಕ

ಮೈಸೂರು; ಕಾಂಗ್ರೆಸ್ ಮುಖಂಡ ಎಸ್.ಸಿ. ಬಸವರಾಜು ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡುವಂತೆ ಒತ್ತಾಯಿಸಿ ಜೂನ್ 15 ರಂದು ಪ್ರತಿಭಟನೆ ನಡೆಸಲಾಗುವುದು ಎಂದು ವಾಲ್ಮೀಕಿ ನಾಯಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ದ್ಯಾವಪ್ಪ ನಾಯಕ ತಿಳಿಸಿದರು.ಶುಕ್ರವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ವಿಭಾಗದಲ್ಲಿ ನಾಯಕ ಸಮುದಾಯವು ಸುಮಾರು 9ರಿಂದ 10 ಲಕ್ಷ ಜನ ಸಂಖ್ಯೆಯಿದ್ದು, ಇಲ್ಲಿಯವರೆಗೆ ನಮ್ಮ ಸಮುದಾಯದ ಹೆಚ್ಚಿನ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತ ಬಂದಿದ್ದರೂ ಕೂಡ, ಇಂದಿನವರೆಗೂ…

Read More

ವಿದ್ಯುತ್ ಖಾಸಗಿ ಕಾರಣ ಕೈಬಿಡಲು ಸೆಸ್ಕಾಂ ಎಂಡಿಗೆ ರೈತರ ಒತ್ತಾಯ

ಮೈಸೂರು; ವಿದ್ಯುತ್ ಖಾಸಗಿಕರಣವನ್ನು ಕೈ ಬಿಡುವಂತೆ ಒತ್ತಾಯಿಸಿ ರೈತರು ಶುಕ್ರವಾರ ನಗರದ ಸೆಸ್ಕಾಂ ಎಂಡಿಗೆ ಮನವಿ ಸಲ್ಲಿಸಿದರು.ಈ ವೇಳೆ ಮಾತನಾಡಿದ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್,ಕರ್ನಾಟಕ ರಾಜ್ಯದ ವಿದ್ಯುತ್ ಪ್ರಸರಣ ನಿಗಮವನ್ನು ಖಾಸಗೀಕರಣ ಮಾಡುವುದು ಕೃಷಿ ಮತ್ತು ರೈತ ವರ್ಗಕ್ಕೆ ತುಂಬಲಾರದ ನಷ್ಟ ಉಂಟಾಗುತ್ತದೆ. ಮುಂದಿನ ದಿನಗಳಲ್ಲಿ ಖಾಸಗಿಕರಣದ ಒಡೆತದಿಂದ ಕೃಷಿ ಉತ್ಪನ್ನವು ಕುಂಠಿತವಾಗುವ ಸಾಧ್ಯತೆಗಳಿರುತ್ತವೆ. ಕಾರಣ ನಿಗದಿತ ಸಮಯಕ್ಕೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ. ವಿದ್ಯುತ್ ಪೂರೈಕೆಯು ಸರ್ಕಾರದ ಮೂಲ ಜವಾಬ್ದಾರಿಯಾಗಿದ್ದು, ಇದನ್ನು…

Read More

ಪ್ರತಿ ತಾಲೂಕು ಮಟ್ಟದಲ್ಲಿ ಕಡ್ಡಾಯವಾಗಿ ಜೀವವೈವಿಧ್ಯ ನಿರ್ವಹಣಾ ಸಮಿತಿ ಬಿಎಂಸಿ ಅಸ್ತಿತ್ವದಲ್ಲಿರಬೇಕು; ವಡ್ನಾಳ್ ಜಗದೀಶ್

*ಪರಿಸರ ಸಂರಕ್ಷಣೆ ಮಾಡುವ ಮೂಲಕ ಮುಂದಿನ ಪೀಳಿಗೆಗೆ ಹಸ್ತಾಂತರಿಸಬೇಕುಮೈಸೂರು; ನಾವು ಪರಿಸರದ ಸೌಲಭ್ಯವನ್ನು ಬಳಸಿ ಅನುಭವಿಸಿದ್ದೇವೆ, ಈ ಪರಿಸರವನ್ನು ಸಂರಕ್ಷಣೆ ಮಾಡಿ ಮುಂದಿನ ಪೀಳಿಗೆ ಹಸ್ತಾಂತರಿಸಬೇಕು ಎಂದು ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ವಡ್ನಾಳ್ ಜಗದೀಶ್ ಹೇಳಿದರು.ಶುಕ್ರವಾರ ಮೈಸೂರಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಜೀವವೈವಿಧ್ಯ ಸಂರಕ್ಷಣೆ ಹಾಗೂ ಜೀವವೈವಿಧ್ಯ ನಿರ್ವಹಣಾ ಸಮಿತಿಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ನಮ್ಮ ಪೂರ್ವಜರು ನಮಗಿಂತ ಅತ್ಯುತ್ತಮ ಮತ್ತು ಸ್ವಚ್ಛವಾದ ಪರಿಸರವನ್ನು ಅನುಭವಿಸಿದ್ದರು. ಆದರೆ ಪ್ರಸ್ತುತ ದಿನಗಳಲ್ಲಿ ನಮಗೆ ಅಂತಹ…

Read More