Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಹರಕೆ ತೀರಿಸಿದ ಅಭಿಮಾನಿಗಳು

ಮೈಸೂರು; ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಆಯ್ಕೆಯಾದ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ಡಿಕೆ ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಭಾನುವಾರ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಹರಕೆ ತೀರಿಸಲಾಯಿತು.ಚಾಮುಂಡಿ ಬೆಟ್ಟದಲ್ಲಿ ಡಿಕೆ ಶಿವಕುಮಾರ್ ಭಾವಚಿತ್ರ ಹಿಡಿದು 101 ತೆಂಗಿನಕಾಯಿ ಹೊಡೆದು ನಂತರ ಚಾಮುಂಡಮ್ಮನ ತೇರು ಸೇವೆ ನೆರೆವೇರಿಸುವ ಮೂಲಕ ಅಭಿಮಾನಿಗಳು ಹರಕೆ ತೀರಿಸಿದರು,ಆರು ತಿಂಗಳ ಹಿಂದೆ ಡಿಕೆ ಶಿವಕುಮಾರ್ ರವರು ಮುಖ್ಯಮಂತ್ರಿ ಆಗಲಿ ಎಂದು ಅಭಿಮಾನಿಗಳು ಚಾಮುಂಡಮ್ಮನ ಮೊರೆ ಹೋಗಿ, ಹರಕೆ ಮಾಡಿಕೊಂಡಿದ್ದರು, ಇಂದು ಭಾನುವಾರ ಚಾಮುಂಡಿ ಬೆಟ್ಟದಲ್ಲಿ ಹರಕೆ…

Read More

ಜೂನ್ 3 ರಂದು ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕಾರ

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಜೂನ್ 3 ರಂದು ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.ಶನಿವಾರ ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗಪಕ್ಷದ ಸಭೆಯಲ್ಲಿ ಡಿಕೆ ಶಿವಕುಮಾರ್ ಅವರ ಹೆಸರನ್ನ ಹಂಗಾಮಿ ಸಿಎಂ ಸಿದ್ದರಾಮಯ್ಯ ಪ್ರಸ್ತಾಪಿಸಿದರು. ಸಿದ್ದರಾಮಯ್ಯ ಪ್ರಸ್ತಾಪಕ್ಕೆ ಹಿರಿಯ ಶಾಸಕರು ಅನುಮೋದನೆ ನೀಡಿದರು.ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಲು ಎಲ್ಲಾ ಶಾಸಕರು ಒಪ್ಪಿಗೆ ಸೂಚಿಸಿದ್ದು, ಈ ಮೂಲಕ ಸಿಎಲ್ ಪಿ ನಾಯಕರಾಗಿ ಆಯ್ಕೆಯಾಗಿದ್ದಾರೆ. ಸಿಎಲ್‌ಪಿ ನಾಯಕನಾಗಿ ಆಯ್ಕೆಯಾದ ಬಳಿಕ…

Read More

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿದ್ದರಾಮಯ್ಯನವರ ನಡೆ ಮಾದರಿಯಾಗಿದೆ; ಮಾಜಿ ಸಚಿವ ದಿನೇಶ್ ಗುಂಡೂರಾವ್

ಮೈಸೂರು: ಪಕ್ಷದ ಹೈಕಮಾಂಡ್ ತೀರ್ಮಾನದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ಅವರ ನಡೆ ನಿಜಕ್ಕೂ ಎಲ್ಲರಿಗೂ ಮಾದರಿಯಾಗಿದೆ. ಅವರು ನಮ್ಮ ಪ್ರಶ್ನಾತೀತ ನಾಯಕರು ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಶುಕ್ರವಾರ ಮೈಸೂರಿನ ಖಾಸಗಿ ಹೋಟೆಲ್ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಬದಲಾವಣೆ ಇದೊಂದು ಪ್ರಕ್ರಿಯೆ. ಹೈಕಮಾಂಡ್ ತೀರ್ಮಾನದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ಈ ಹಿಂದೆಯೂ ಅವರು ನಾನು ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಹೇಳಿದ್ದರು. ಅದರಂತೆ ನಡೆದುಕೊಂಡಿದ್ದಾರೆ. ಅವರ…

Read More

ಮೇಕೆದಾಟು ಯೋಜನೆಯ ವಿಚಾರವಾಗಿ ಪ್ರಧಾನಿ ಮೋದಿ ಅವರು ಮಧ್ಯಪ್ರವೇಶ ಮಾಡಿ, ರಾಜ್ಯಕ್ಕೆ ನ್ಯಾಯ ಒದಗಿಸಬೇಕು; ಸಿ. ಎನ್. ಮಂಜೇಗೌಡ

ಮೈಸೂರು; ರಾಜ್ಯ ಸರ್ಕಾರ ಕುಡಿಯುವ ನೀರಿನ ಸಂಗ್ರಹಣೆಗಾಗಿ ಕೈಗೆತ್ತಿಕೊಂಡಿರುವ ಮೇಕೆದಾಟು ಯೋಜನೆಯ ಜಾರಿ ವಿಚಾರವಾಗಿ ಪ್ರಧಾನಿ ಮೋದಿ ಅವರು ಮಧ್ಯಪ್ರವೇಶ ಮಾಡಿ, ಕರ್ನಾಟಕ ರಾಜ್ಯಕ್ಕೆ ನ್ಯಾಯ ಒದಗಿಸಬೇಕು ಎಂದು ಕಾವೇರಿ ಕ್ರಿಯಾ ಸಮಿತಿ ಗೌರವಾಧ್ಯಕ್ಷರೂ ಆದ ವಿಧಾನ ಪರಿಷತ್ ಸದಸ್ಯ ಸಿ. ಎನ್. ಮಂಜೇಗೌಡ ಆಗ್ರಹಿಸಿದರು.ಗುರುವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ತಮಿಳುನಾಡು ಮುಖ್ಯಮಂತ್ರಿಯಾದ ಚಿತ್ರ ನಟ ಜೋಸೆಫ್ ವಿಜಯ್ ಅವರು, ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ, ಕರ್ನಾಟಕ ರಾಜ್ಯ ಕೈಗೆತ್ತಿಕೊಂಡಿರುವ…

Read More

ಕರ್ನಾಟಕ ರಾಜಕಾರಣಕ್ಕೆ ‘ವಿಕಾಸಶೀಲ ಇನ್ಸಾನ್ ಪಾರ್ಟಿ’ ಎಂಟ್ರಿ

ಮೈಸೂರು: ಕರ್ನಾಟಕದ ರಾಜಕೀಯ ರಣರಂಗಕ್ಕೆ ಮತ್ತೊಂದು ಹೊಸ ರಾಜಕೀಯ ಪಕ್ಷ ಅಧಿಕೃತವಾಗಿ ಪದಾರ್ಪಣೆ ಮಾಡಿದೆ ಎಂದು ವಿಐಪಿ ಪಕ್ಷದ ರಾಜ್ಯ ಉಪಾಧ್ಯಕ್ಷ ಮೋಹನ್ ಕುಮಾರ್ ಬಿ.ಕೆ ತಿಳಿಸಿದರು.ಗುರುವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ, ಅಂಬಿಗರ ಚೌಡಯ್ಯ, ಬಸವಣ್ಣ, ಬುದ್ಧ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವಗಳಡಿ ಪಕ್ಷವನ್ನು ಮುನ್ನಡೆಸಲಾಗುವುದು ಎಂದು ಹೇಳಿದರು.“ರಾಜ್ಯದಲ್ಲಿ ಕೋಲಿ, ಗಂಗಾಮತ ಹಾಗೂ ಬೆಸ್ತ ಸಮಾಜದವರೇ ನಮ್ಮ ಪಕ್ಷದ ಮೂಲ ಮತದಾರರು. ನಮ್ಮ ಸಮಾಜದ ಜನಸಂಖ್ಯೆ ರಾಜ್ಯದಲ್ಲಿ ಬರೋಬ್ಬರಿ…

Read More

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲೆAದು ವಿಶೇಷ ಪೂಜೆ ಸಲ್ಲಿಸಿ, 101 ತೆಂಗಿನಕಾಯಿ ಒಡೆದ ಅಭಿಮಾನಿಗಳು

ಮೈಸೂರು; ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲೆಂದು ಆಶಿಸಿ ಅಖಿಲ ಕರ್ನಾಟಕ ಒಕ್ಕಲಿಗರ ಸಂಘ, ಮೈಸೂರು ಜಿಲ್ಲಾ ಘಟಕದ ವತಿಯಿಂದ ಗುರುವಾರ ಅಗ್ರಹಾರದ 101 ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿಸಿ, 101 ತೆಂಗಿನ ಕಾಯಿ ಹಿಡುಗಾಯಿ ಒಡೆಯಲಾಯಿತು.ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ, ಆಪತ್ಭಾಂದವನಾಗಿ ಕೆಲಸವನ್ನು ಮಾಡಿಕೊಂಡು ಬರುತ್ತಿರುವ ಡಿ.ಕೆ.ಶಿವಕುಮಾರ್ ಅವರು , ಪಕ್ಷದ ರಾಜ್ಯಾಧ್ಯಕ್ಷನಾಗಿ ಕಾಂಗ್ರೆಸ್ 135 ಕ್ಕಿಂತ ಹೆಚ್ಚು ಸೀಟುಗಳು ಬರುವಂತೆ ಕಾರ್ಯ ನಿರ್ವಹಿಸಿದ್ದಾರೆ. ಮೂಲ ಕಾಂಗ್ರೆಸ್ಸಿಗರಾದ ಡಿಕೆ…

Read More

ಕಾಂಗ್ರೆಸ್ ದಲಿತರನ್ನು ಮುಖ್ಯಮಂತ್ರಿ ಮಾಡದೆ ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ

ಮೈಸೂರು: ಕಾಂಗ್ರೆಸ್ ದಲಿತರನ್ನು ವೋಟ್ ಬ್ಯಾಂಕ್ ಮಾಡಿಕೊಂಡಿದೆ. ಆದರೆ ದಲಿತರನ್ನು ಮುಖ್ಯಮಂತ್ರಿ ಮಾಡದೆ ವಂಚಿಸುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಕಿಡಿಕಾರಿದರು.ಬುಧವಾರ ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾದರೆ ನಮ್ಮ ತಕರಾರು ಇಲ್ಲ. ಆದರೆ, ದಲಿತರನ್ನು ಸಿಎಂ ಮಾಡುತ್ತೇವೆ ಎಂದು ಕಾಂಗ್ರೆಸ್ ಕಳೆದ ೭೦ ವರ್ಷದಿಂದ ವಂಚನೆ ಮಾಡುತ್ತಿದೆ. ಹಾಗಾಗಿ, ಕಾಂಗ್ರೆಸ್‌ನಲ್ಲಿರುವ ದಲಿತ ನಾಯಕರು ಸೀಡ್‌ಲೆಸ್ ಮತ್ತು ಶುಗರ್ ಲೆಸ್ ರೀತಿ ಆಗಿದ್ದಾರೆ. ಯಾರಿಗೂ ನಮಗೆ…

Read More

ರಾಜ್ಯಸಭೆಗೆ ಹೋಗಲು ನಾನು ಕೂಡ ಆಕಾಂಕ್ಷಿಯಾಗಿದ್ದೇನೆ; ಮಾಜಿ ಸಿಎಂ ಸದಾನಂದ ಗೌಡ

ಮೈಸೂರು; ರಾಜ್ಯಸಭೆಗೆ ಹೋಗಲು ನಾನು ಕೂಡ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದರು.ಸೋಮವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾವು ಮತ್ತು ಜೆಡಿಎಸ್ ಒಂದೇ ಮೈತ್ರಿಕೂಟದಲ್ಲಿ ಇದ್ದೇವೆ. ನಮಗೆ ೬೩ ಮತ್ತು ಜೆಡಿಎಸ್ಸಿಗೆ ೧೭ ಸ್ಥಾನವಿದ್ದರೂ, ನನ್ನನ್ನು ರಾಜ್ಯಸಭೆಗೆ ಕಳುಹಿಸುವ ವಿಚಾರವನ್ನು ರಾಷ್ಟಿçÃಯ ನಾಯಕರು ನೋಡಿಕೊಳ್ಳುತ್ತಾರೆ. ನಾನು, ರಾಜ್ಯಸಭೆಗೆ ಆಯ್ಕೆಯಾಗಲು ಆಕಾಂಕ್ಷಿಯಾಗಿದ್ದೇನೆ. ಚುನಾವಣಾ ರಾಜಕಾರಣದಲ್ಲಿ ಇರುವುದಿಲ್ಲ ಎಂದು ಲೋಕಸಭಾ ಚುನಾವಣೆಯ ವೇಳೆಯೇ ಹೇಳಿದ್ದೇನೆ. ಪಕ್ಷ ಕೊಡುವ ಯಾವುದೇ ಜವಾಬ್ದಾರಿಯನ್ನು ನಿಭಾಯಿಸಲು ಸಿದ್ಧನಿದ್ದೇನೆ ಎಂದರು.ನಮ್ಮಲ್ಲಿ…

Read More

ಹೈಕಮಾಂಡ್‌ನಿಂದ ಸಿಎಂ ಸಿದ್ದರಾಮಯ್ಯಗೆ ದೆಹಲಿ ಬುಲಾವ್​​ ಯಾಕೆ?: ಇಲ್ಲಿದೆ ಅಸಲಿ ಕಾರಣ

ಹೈಕಮಾಂಡ್​​ ಬುಲಾವ್​​ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಇಂದು ದೆಹಲಿಗೆ ತೆರಳಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಾಳೆ ಮಹತ್ವದ ಸಭೆ ನಡೆಯಲಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಕೂಡ ಈ ವೇಳೆ ಉಪಸ್ಥಿತರಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ನಿಖರವಾಗಿ ಯಾವ ವಿಷಯದ ಸಂಬಂಧ ಸಭೆ ಕರೆಯಲಾಗಿದೆ ಎಂಬ ಬಗ್ಗೆ ಮಾಹಿತಿ ಇಲ್ಲ. ಮೂಲಗಳ ಪ್ರಕಾರ ರಾಜ್ಯಸಭಾ ಮತ್ತು ಪರಿಷತ್​​ ಚುನಾವಣೆ ಸೇರಿ, ಸಂಪುಟ ಪುನಾರಚನೆ ಹಾಗೂ ನಾಯಕತ್ವ ಬದಲಾವಣೆ ವಿಚಾರವಾಗಿಯೂ ಮಾತುಕತೆಯ ನಿರೀಕ್ಷೆ…

Read More

ಅರಮನೆ ದ್ವಾರದಲ್ಲಿ ಮದ್ಯದ ಪಾರ್ಟಿ!

ಜಯಮಾರ್ತಾಂಡ ಗೇಟ್ ಬಳಿ ತಡರಾತ್ರಿ ಸಾರ್ವಜನಿಕ ಮದ್ಯಪಾನಕ್ಕೆ ಆಕ್ರೋಶ ಮೈಸೂರು/ಮೈಸೂರು: ದೊಡ್ಡಕೆರೆ ಮೈದಾನದತ್ತ ಮುಖ ಮಾಡಿರುವ ಮೈಸೂರು ಅರಮನೆಯ ಜಯಮಾರ್ತಾಂಡ ಗೇಟ್ ಬಳಿಯ ಆವರಣವು ಸಾರ್ವಜನಿಕರು ತಡರಾತ್ರಿ

Read More