Category: ರಾಜ್ಯ
ಚಾಮರಾಜನಗರದಲ್ಲೂ ರಂಗಾಯಣ ಸ್ಥಾಪನೆಯಾಗಬೇಕು: ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್
ಚಾಮರಾಜನಗರ: ರಾಜ್ಯದ ವಿವಿಧ ಕಡೆ ರಂಗಾಯಣ ಇರುವಂತೆಯೇ ಜಾನಪದ ಕಲೆಗಳ ತವರೂರು ಎನಿಸಿದ ಚಾ.ನಗರದಲ್ಲೂ ರಂಗಾಯಣ ಸ್ಥಾಪಿಸಬೇಕು ಎಂದು ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ ಒತ್ತಾಯಿಸಿದರು.ನಗರದ ಡಾ. ರಾಜಕುಮಾರ್ ರಂಗಮಂದಿರದಲ್ಲಿ, ರಂಗಾಯಣ ಶಿವಮೊಗ್ಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಂಗವಾಹಿನಿ, ರಾಜ್ಯ ರೈತ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೊಳುವಾರು ಮಹಮ್ಮದ್ ಕುಂಇ್ಞು ಅವರ ಕಾದಂಬರಿ ಆಧಾರಿತ ಸ್ವಾತಂತ್ರ್ಯದ ಓಟ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಗಡಿ ಜಿಲ್ಲೆ ಚಾಮರಾಜನಗರ…
ಸಾಲಭಾದೆ ತಾಳದೆ ರೈತ ಆತ್ಮಹತ್ಯೆ
ಪಿರಿಯಾಪಟ್ಟಣ: ಸಾಲ ಭಾದೆ ತಾಳದೆ ರೈತರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಕೊತ್ತವಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಸ್ವಾಮಿ ಗೌಡ (51) ಆತ್ಮಹತ್ಯೆ ಮಾಡಿಕೊಂಡವರು.ಇವರು ತಮ್ಮ ಜಮೀನಿನಲ್ಲಿ ತಂಬಾಕು ನಾಟಿ ಮಾಡಿದ್ದು, ಆ ತಂಬಾಕು ಸಸಿಗಳಿಗೆ ರೋಗ ಹರಡಿತ್ತು. ಅಲ್ಲದೆ ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದಿದ್ದರು. ಇವರು 20 ಲಕ್ಷ ರೂ.ಗಳಿಗೂ ಹೆಚ್ಚು ಸಾಲ ಮಾಡಿದ್ದು, ಕಿತ್ತೂರಿನ ಕಾವೇರಿ ಗ್ರಾಮೀಣ ಬ್ಯಾಂಕಿನಲ್ಲಿ 5 ಲಕ್ಷ ರೂ. ಹಾಗೂ…
ಅಕ್ರಮ ವಲಸಿಗರ ಕುರಿತು ಹಲವು ತಿಂಗಳ ಹಿಂದೆಯೇ ಮಾಹಿತಿ ಲಭ್ಯವಾಗಿದ್ದರೂ, ಸರ್ಕಾರ ಅಗತ್ಯ ಕ್ರಮ ಕೈಗೊಂಡಿಲ್ಲ; ಮಾಜಿ ಸಂಸದ ಪ್ರತಾಪ್ ಸಿಂಹ
ಮೈಸೂರು: ರಾಜ್ಯದ ಆಂತರಿಕ ಸುರಕ್ಷತೆ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಅಕ್ರಮ ವಲಸಿಗರ ಕುರಿತು ಹಲವು ತಿಂಗಳ ಹಿಂದೆಯೇ ಮಾಹಿತಿ ಲಭ್ಯವಾಗಿದ್ದರೂ, ಸರ್ಕಾರ ಅಗತ್ಯ ಕ್ರಮ ಕೈಗೊಂಡಿಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದರು.ಮಂಗಳವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಅಕ್ರಮ ಬಾಂಗ್ಲಾದೇಶಿ ವಲಸಿಗರ ಆಗಮನ ಹೆಚ್ಚಾಗುತ್ತಿರುವುದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿಗಳೇ ಕಾರಣ. ಗೃಹ ಸಚಿವರು ಹಾಗೂ ಬ್ರದರ್ ಎನ್ನುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇರುವವರೆಗೂ, ಈ ರೀತಿ ಅಕ್ರಮ ಬಾಂಗ್ಲಾ ವಲಸಿಗರು…
ಪೊಲೀಸರು ಗೃಹ ಸಚಿವರನ್ನು ಓಲೈಸುವ ಸಲುವಾಗಿ ಹಿಂದೂ ಪರ ಸಂಘಟನೆ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿದ್ದಾರೆ; ಸಂಸದ ಯದುವೀರ್
ಮೈಸೂರು: ಮೈಸೂರಿನ ರೈಲು ನಿಲ್ದಾಣದಲ್ಲಿ ರೈಲಿನಿಂದ ಬಂದ ಕೆಲವರನ್ನು ಬಾಂಗ್ಲಾ ದೇಶದ ಪ್ರಜೆಗಳೆಂದು ಶಂಕಿಸಿ ತಡೆದು, ಪರಿಶೀಲನೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ಗೃಹ ಸಚಿವರನ್ನು ಓಲೈಸುವ ಸಲುವಾಗಿ ಹಿಂದೂ ಪರ ಸಂಘಟನೆ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.ಮೈಸೂರು ರೈಲ್ವೆ ಪೆÇಲೀಸರು ಹಿಂದೂ ಪರ ಸಂಘಟನೆ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿರುವ ಬಗ್ಗೆ ಪ್ರತಿಕ್ರಿಯಿಸಿ ಮಂಗಳವಾರ ಮಾತನಾಡಿದ ಅವರು, ಅಕ್ರಮ ಬಾಂಗ್ಲಾ ವಲಸಿಗರು ಮೈಸೂರಿಗೆ…
ಟಾಟಾ ಎಲೆಕ್ಟ್ರಿಕ್ ಸಫ್ಟ್ ಕಂಪೆನಿಗೆ ವಿತರಣಾ ಪರವಾನಗಿ ನೀಡಿಕೆಗೆ ಆಕ್ಷೇಪಣೆ, ಸಲಹೆಗಳ ನೀಡಿಕೆ:ಲಿಂಗರಾಜು
ಮೈಸೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಅಧಿಸೂಚನೆಗೆ ಸಂಬಂಧಿಸಿದಂತೆ ವಿದ್ಯುತ್ ವಿತರಣಾ ಸಂಸ್ಥೆಗಳ ಕಾರ್ಯವ್ಯಾಪ್ತಿಯ ಪ್ರದೇಶಗಳಲ್ಲಿ ಟಾಟಾ ಎಲೆಕ್ಟ್ರಿಕ್ ಸಫ್ಟ್ ಕಂಪೆನಿಗೆ ವಿತರಣಾ ಪರವಾನಗಿ ನೀಡುವ ಕುರಿತು ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ನೀಡಿದೆ ಎಂದು ಸಂಸ್ಥೆಯ ಅಧ್ಯಕ್ಷ ಕೆ.ಬಿ. ಲಿಂಗರಾಜು ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,ವಿದ್ಯುತ್ ಹೆಚ್ಚುವರಿ ವಿತರಣಾ ಪರವಾನಗಿದಾರರ ಪ್ರವೇಶದಿಂದ ಸ್ಪರ್ಧಾತ್ಮಕ ವಾತಾವರಣ ನಿರ್ಮಾಣವಾಗಿ ಕಾರ್ಯಕ್ಷಮತೆ, ಸೇವಾ ಗುಣಮಟ್ಟ ಹಾಗೂ ಗ್ರಾಹಕ ಸ್ನೇಹಿ ಆಡಳಿತದಲ್ಲಿ ಸುಧಾರಣೆ…
ವಿದ್ಯುತ್ ಖಾಸಗೀಕರಣವನ್ನು ಕೈಬಿಡದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ
ಮೈಸೂರು : ವಿದ್ಯುತ್ ವಲಯವನ್ನು ಖಾಸಗೀಕರಣ ಮಾಡುವುದು ರೈತರ ಮರಣ ಶಾಸನ ಬರೆದಂತೆ. ಹಾಗಾಗಿ ವಿದ್ಯುತ್ ಖಾಸಗೀಕರಣವನ್ನು ಕೈಬಿಡದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತಸಂಘದ (ರೈತಬಣ) ಅಧ್ಯಕ್ಷ ಇಂಗಲಗುಪ್ಪೆ ಕೃಷ್ಣೇಗೌಡ ಎಚ್ಚರಿಕೆ ನೀಡಿದರು.ಮಂಗಳವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ರೈತರ ಹೆಸರೇಳಿ ಅಧಿಕಾರಕ್ಕೆ ಬಂದವರು ಈಗ ಖಾಸಗಿ ಕಂಪನಿ ಜತೆ ಕೈ ಜೋಡಿಸಿ ರೈತರ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು. ರಾಜ್ಯದಲ್ಲಿ ಸರ್ಕಾರಿ ಸ್ವಾಮ್ಯದಲ್ಲಿರುವ…
ಮೈಸೂರು ರೈಲು ನಿಲ್ದಾಣದಲ್ಲಿ ವಶಕ್ಕೆ ತೆಗೆದುಕೊಂಡಿದ್ದ 34 ಮಂದಿ ಬಿಡುಗಡೆ
*ಘಟನೆಗೆ ಸಂಬಂಧಿಸಿದಂತೆ ಆರು ಮಂದಿಯ ವಿರುದ್ಧ ಕೇಸ್ ದಾಖಲುಮೈಸೂರು; ಶಂಕಿತ ಬಾಂಗ್ಲಾ ಪ್ರಜೆಗಳೆಂದು ಮೈಸೂರು ರೈಲು ನಿಲ್ದಾಣದಲ್ಲಿ ವಶಕ್ಕೆ ತೆಗೆದುಕೊಂಡಿದ್ದ 34 ಮಂದಿಯನ್ನು ವಿಚಾರಣೆ, ದಾಖಲೆಗಳ ಪರಿಶೀಲನೆಯ ಬಳಿಕ ಬಿಡುಗಡೆ ಮಾಡಲಾಗಿದೆ.ಜೂನ್ 21 ರಂದು ಬೆಳಿಗ್ಗೆ ಸುಮಾರು 10:30 ಗಂಟೆಗೆ, ರೈಲು ಸಂಖ್ಯೆ 22817 (ಹೌರಾ-ಮೈಸೂರು ಎಕ್ಸ್ಪ್ರೆಸ್) ಮೂಲಕ ಕೆಲವು ಶಂಕಿತ ವ್ಯಕ್ತಿಗಳು ಪ್ರಯಾಣಿಸುತ್ತಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ, ಮೈಸೂರು ಸರ್ಕಾರಿ ರೈಲ್ವೆ ಪೆÇಲೀಸ್ ಹಾಗೂ ರೈಲ್ವೆ ರಕ್ಷಣಾ ಪಡೆ ಅಧಿಕಾರಿಗಳು ರೈಲಿನಲ್ಲಿ ಪ್ರಯಾಣಿಕರ ಗುರುತಿನ…
ಯುವಕನೊಬ್ಬ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಮೈಸೂರು: ಯುವಕನೊಬ್ಬ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಒಂದೇ ಕುಟುಂಬದ ಮೂರು ಜನರು ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಕೆಂಪಯ್ಯನ ಹುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ದಂಪತಿ ಶಿವಣ್ಣ-ನಾಗರತ್ನ ಹಾಗೂ ಅವರ ಮಗಳು ರಕ್ಷಿತಾ ಆತ್ಮಹತ್ಯೆ ಮಾಡಿಕೊಂಡವರು. ಇದೇ ಗ್ರಾಮದ ಯುವಕ ಉಲ್ಲಾಸ್ ಗೌಡ ಎಂಬಾತ ಮಾನಸಿಕವಾಗಿ ಈ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದ ಆರೋಪಿ.ಮುಂದಿನ ಎರಡು ದಿನಗಳಲ್ಲಿ ಯುವತಿಯ ಮದುವೆಗೆ ಸಕಲ ಸಿದ್ಧತೆ…
ಬಿಜೆಪಿ ಎಸ್ ಟಿ ಮೋರ್ಚಾ ವತಿಯಿಂದ ಜುಲೈ 7 ರಂದು ಮೈಸೂರಿನಲ್ಲಿ ಜಾಗೃತಿ ಸಮಾವೇಶ
ಮೈಸೂರು; ರಾಜ್ಯ ಕಾಂಗ್ರೆಸ್ ಸರ್ಕಾರವು ಎಸ್ ಟಿ ಸಮುದಾಯಕ್ಕೆ ಮೀಸಲಾತಿ ವಿಚಾರದಲ್ಲಿ ಮಲತಾಯಿ ಧೋರಣೆ ತೋರುತ್ತ ಬಂದಿದ್ದು, ಎಸ್ ಟಿ ಸಮುದಾಯಕ್ಕೆ ಸಂವಿಧಾನ ಬದ್ಧ ಶೇ 7ರ ಮೀಸಲಾತಿ ಜಾರಿಯಾಗಲೇ ಬೇಕೆಂದು ರಾಜ್ಯ ಬಿಜೆಪಿ ಎಸ್ಟಿ ಮೋರ್ಚಾ ವತಿಯಿಂದ ರಾಜ್ಯಾದ್ಯಂತ ಜಾಗೃತಿ ಸಮಾವೇಶವನ್ನು ಹಮ್ಮಿಕೊಂಡಿದೆ. ಅದರಂತೆ ಮೈಸೂರಿನಲ್ಲಿಯೂ ಜುಲೈ ರಂದು ಸಾಮಾಜಿಕ ನ್ಯಾಯಕ್ಕಾಗಿ ಜಾಗೃತಿ ಸಮಾವೇಶವನ್ನು ಆಯೋಜಿಸಿದೆ. ಅದರ ಹಿನ್ನೆಲೆಯಲ್ಲಿ ಮೈಸೂರು ನಗರ ಹಾಗೂ ಗ್ರಾಮಾಂತರ ಎಸ್ ಟಿ ಮೋರ್ಚಾ ಪದಾಧಿಕಾರಿಗಳ ಮೈಸೂರಿನ ಬಿಜೆಪಿ ಪಕ್ಷದ ಕಛೇರಿಯಲ್ಲಿ…