Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮಹಾರಾಜನಂತೆ ಪೇಟ ಧರಿಸಿ ಅರಮನೆಗೆ ಆಗಮಿಸಿದ ಅಭಿಮನ್ಯಗೆ ಅದ್ಧೂರಿ ಸ್ವಾಗತ

ಮೈಸೂರು: ಈ ಬಾರಿಯ ನಾಡಹಬ್ಬ ಮೈಸೂರು ದಸರಾದಲ್ಲಿ ಜಂಬೂಸವಾರಿ ಮೆರವಣಿಗೆಯಲ್ಲಿ ನಿಶಾನೆ ಆನೆಯಾಗಿ ಭಾಗವಹಿಸಲೆಂದು ಸೋಮವಾರ ಮೈಸೂರಿನ ಅಂಬಾವಿಲಾಸ ಅರಮನೆಗೆ ಮಹಾರಾಜನಂತೆ ಆಗಮಿಸಿದ ಗಜಪಡೆಯ ಮಾಜಿ ಕ್ಯಾಪ್ಟನ್ ಅಭಿಮನ್ಯುವನ್ನು ಅದ್ಧೂರಿಯಾಗಿ ಸ್ವಾಗತಿಸಿ, ರಾಜ ಮರ್ಯಾದೆ, ಗೌರವವನ್ನು ನೀಡಲಾಯಿತು.ಈ ಬಾರಿ ನಾಡಹಬ್ಬ ಮೈಸೂರು ದಸರಾದಲ್ಲಿ ಭಾಗವಹಿಸಲು ವಯಸ್ಸಿನ ಕಾರಣದಿಂದ ಜಂಬೂಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿಯನ್ನು ಹೊರಲು ಅಭಿಮನ್ಯು ಆನೆಯನ್ನು ಆಯ್ಕೆ ಮಾಡಿರಲಿಲ್ಲ. ಆದರೆ ಅಭಿಮಾನಿಗಳ ತೀವ್ರ ಒತ್ತಾಯದಿಂದ ಸರ್ಕಾರದ ಆದೇಶದ ಮೇರೆಗೆ ಅಭಿಮನ್ಯು ಆನೆಯನ್ನು ಈ ಬಾರಿ ದಸರಾದಲ್ಲಿ…

Read More

ವ ಮೈಸೂರು ದಸರಾ ಮಹೋತ್ಸವ ಉದ್ಘಾಟಿಸಲು ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರಿಗೆ ಮೈಸೂರು ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ

ಮೈಸೂರು: ಈ ಬಾರಿ ಅದ್ಧೂರಿಯಾಗಿ ಜರುಗಲಿರುವ ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠಕ್ಕೆ ತೆರಳಿ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರಿಗೆ ಭಾನುವಾರ ಮೈಸೂರು ದಸರಾ ಮಹೋತ್ಸವ ಸಮಿತಿ ಅಧಿಕೃತವಾಗಿ ಆಹ್ವಾನ ಪತ್ರಿಕೆ ನೀಡುವ ಮೂಲಕ ದಸರಾ ಉದ್ಘಾಟನೆಗೆ ಆಹ್ವಾನಿಸಿದೆ.ದಸರಾ ಮಹೋತ್ಸವದ ವಿಶೇಷಾಧಿಕಾರಿಯಾದ ಮೈಸೂರು ಜಿಲ್ಲಾಧಿಕಾರಿ ಲಕ್ಷಿ÷್ಮಕಾಂತ ರೆಡ್ಡಿ ಜಿ ಅವರು ದಸರಾ ಸ್ವಾಗತ ಸಮಿತಿಯೊಂದಿಗೆ ಕೊಪ್ಪಳದ ಗವಿಮಠಕ್ಕೆ ತೆರಳಿ, ಅಭಿನವ ಗವಿಸಿದ್ದೇಶ್ವರ ಸ್ವಾಮ್ಭಿಜಿಯವರನ್ನು ಭೇಟಿ ಮಾಡಿ, ಮೈಸೂರು ದಸರಾ…

Read More

ಸಮಾಜದ ಒಳಿತಿಗೆ ತಂತ್ರಜ್ಞಾನ ಬಳಕೆಯಾಗಲಿ; ನವೀನತೆಯ ಮೂಲಕ ಸುಸ್ಥಿರ ಕರ್ನಾಟಕ ನಿರ್ಮಿಸಿ: ಸಚಿವ ಚಲುವರಾಯಸ್ವಾಮಿ

ಮೈಸೂರು: ಸಮಾಜದ ಒಳಿತಿಗೆ ತಂತ್ರಜ್ಞಾನ ಬಳಕೆಯಾಗಲಿ; ನವೀನತೆಯ ಮೂಲಕ ಸುಸ್ಥಿರ ಕರ್ನಾಟಕ ನಿರ್ಮಿಸಿ ಎಂದು ಜಲ ಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.ಶನಿವಾರ ನಗರದ ಜೆ.ಎಲ್.ಬಿ. ರಸ್ತೆಯಲ್ಲಿರುವ ಸರ್ ಎಂ.ವಿ. ಸಭಾಂಗಣದಲ್ಲಿ ಇನ್‌ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ವತಿಯಿಂದ ಆಯೋಜಿಸಿದ್ದ ೪೧ನೇ ನ್ಯಾಷನಲ್ ಕನ್ವೆನ್ಷನ್ ಆಫ್ ಸಿವಿಲ್ ಇಂಜಿನಿಯರಿAಗ್’ ( ರಾಷ್ಟಿçÃಯ ಸಮಾವೇಶ) ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂಜಿನಿಯರ್ ಎಂದರೆ ಕೇವಲ ಕಟ್ಟಡ ಕಟ್ಟುವ ವ್ಯಕ್ತಿಯಲ್ಲ, ದೇಶದ ಭವಿಷ್ಯ ಕಟ್ಟುವ ಶಿಲ್ಪಿ. ಹೀಗಾಗಿ ಸುಭದ್ರ ಭವಿಷ್ಯ ನಿರ್ಮಾಣದಲ್ಲಿ…

Read More

ಮೊದಲ ಹಂತದಲ್ಲಿ ೫ ಲಕ್ಷ ಬಡವರಿಗೆ ನಿವೇಶನ ನೀಡಲು ತೀರ್ಮಾನ; ಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಮೈಸೂರು: ನಿವೇಶನರಹಿತರು ಅರ್ಜಿಗಳನ್ನು ನೀಡುತ್ತಿದ್ದು, ಜಿಲ್ಲಾಧಿಕಾರಿಗಳು ಸರ್ಕಾರಿ ಜಮೀನುಗಳನ್ನು ಗುರುತಿಸಬೇಕು. ಅದಿಲ್ಲದಿದ್ದರೆ ಖಾಸಗಿ ಜಮೀನು ಅಥವಾ ಹೊಸ ಬಡಾವಣೆಗಳನ್ನು ನಿರ್ಮಾಣ ಮಾಡಿ ಎಂದು ಸೂಚಿಸಲಾಗಿದೆ. ಮೊದಲ ಹಂತದಲ್ಲಿ ಸೂರು ಕೊಡಬೇಕೆಂದು ೫ ಲಕ್ಷ ಬಡವರಿಗೆ ನಿವೇಶನ ನೀಡಲು ತೀರ್ಮಾನ ಮಾಡಲಾಗಿದೆ” ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಶನಿವಾರ ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಆಯೋಜಿಸಲಾಗಿದ್ದ ಪ್ರಜಾಸೇವೆ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಜಾಸೇವೆ ಇಲಾಖೆಯ ಮೂಲಕ ಜನರ ಸಮಸ್ಯೆ ಆಲಿಸಿ ಪರಿಹಾರ ಒದಗಿಸಲು ಇಡೀ ಸರ್ಕಾರ ನಿಮ್ಮ…

Read More

ರಾಜ್ಯದ ಬರ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದಿದ್ದೇನೆ, ಕೇಂದ್ರ ಸರ್ಕಾರ ರಾಜ್ಯಕ್ಕೆ ಹೆಚ್ಚಿನ ಪರಿಹಾರವನ್ನು ಕೊಡುವ ವಿಶ್ವಾಸ ಇದೆ; ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಮೈಸೂರು: ರಾಜ್ಯದ ಬರ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದಿದ್ದೇವೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಹೆಚ್ಚಿನ ಪರಿಹಾರವನ್ನು ಕೊಡುವ ವಿಶ್ವಾಸ ಇದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.ಶನಿವಾರ ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ೧೨೫ ವರ್ಷಗಳಲ್ಲೇ ಈ ರೀತಿಯ ಬರ ಪರಿಸ್ಥಿತಿ ರಾಜ್ಯದಲ್ಲಿ ಇರಲಿಲ್ಲ. ರಾಜ್ಯದ ಪರಿಸ್ಥಿತಿಯನ್ನು ಕೇಂದ್ರದ ಗಮನಕ್ಕೆ ತಂದಿದ್ದೇವೆ. ಕೇಂದ್ರದಿAದ ಮೂರು ತಂಡಗಳು ಪ್ರವಾಸ ಮಾಡುತ್ತವೆ. ಹೆಚ್ಚಿನ ಪರಿಹಾರವನ್ನು ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ನೀಡಬಹುದೆಂದು ನಿರೀಕ್ಷಿಸುತ್ತಿದ್ದೇವೆ. ನಾವು ಅವಸರದ…

Read More

ಸಕಲ ಸಿದ್ಧತೆಗಳೊಂದಿಗೆ ದಸರಾಗೆ ಸಜ್ಜಾಗುತ್ತಿದೆ ಕರಾವಳಿಯ ಜಾನಪದ ಕ್ರೀಡೆ ಕಂಬಳ

ಮೈಸೂರು: ವಿಶ್ವ ಪ್ರಸಿದ್ಧ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಮೊದಲ ಬಾರಿಗೆ ವಿಶೇಷವಾಗಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.ಶುಕ್ರವಾರ ದಸರಾ ಮಹೋತ್ಸವದ ಅಂಗವಾಗಿ ನಗರದಲ್ಲಿ ನಡೆದ ಕಂಬಳ ಆಯೋಜನೆಯ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು,ಈ ಬಾರಿಯ ದಸರಾ ಉತ್ಸವಕ್ಕೆ ಹೊಸ ರೂಪ ಮತ್ತು ಸ್ಪರ್ಶ ನೀಡುವ ಉದ್ದೇಶದಿಂದ ಕರಾವಳಿಯ ಜನಪ್ರಿಯ ಜಾನಪದ ಕ್ರೀಡೆಯಾದ ಕಂಬಳವನ್ನು…

Read More

ಕೇರಳ ರಾಜ್ಯದ ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶ ಅಧಿಕೃತವಾಗಿ ಮೈಸೂರು ವಿಭಾಗಕ್ಕೆ ಸೇರ್ಪಡೆ

ಮೈಸೂರು; ಕೇರಳ ರಾಜ್ಯದ ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಗುರುವಾರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ವರ್ಗಾಯಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮೈಸೂರು ವಿಭಾಗದ ಎಡಿಆರ್‌ಎಂ ಶಮ್ಮಾಸ್ ಹಮೀದ್ ಅವರು ವ್ಯವಸ್ಥೆಗಳನ್ನು ಪರಿಶೀಲಿಸಿ, ಸುಗಮ ವರ್ಗಾವಣೆ ಹಾಗೂ ರೈಲು ಕಾರ್ಯಾಚರಣೆಗಳು ಯಾವುದೇ ಅಡಚಣೆಯಿಲ್ಲದೆ ಮುಂದುವರಿಯಲು ಅಗತ್ಯ ಕ್ರಮಗಳನ್ನು ಕೈಗೊಂಡರು.ಮೈಸೂರು ವಿಭಾಗದ ಇತರ ಶಾಖಾಧಿಕಾರಿಗಳೊಂದಿಗೆ ಮಂಗಳೂರು ಸೆಂಟ್ರಲ್, ಮಂಗಳೂರು ಜಂಕ್ಷನ್, ಪಣಂಬೂರು ಮತ್ತು ಜೋಕಟ್ಟೆ ಸೇರಿದಂತೆ ಮಂಗಳೂರು ಪ್ರದೇಶದ ಪ್ರಮುಖ ರೈಲು ಕೇಂದ್ರಗಳಿಗೆ ಭೇಟಿ ನೀಡಿ, ಅಲ್ಲಿನ ಕಾರ್ಯಾಚರಣಾ…

Read More

ಮೈಸೂರು ದಸರಾಗೆ ಬರುವಂತೆ ರಾಜ್ಯಪಾಲರು, ಮುಖ್ಯಮಂತ್ರಿ, ಗೃಹಸಚಿವರಿಗೆ, ಸಚಿವರು, ಶಾಸಕರುಗಳಿಗೆ ಅಧಿಕೃತ ಆಹ್ವಾನ

ಮೈಸೂರು; ಈ ಬಾರಿ ಅದ್ಧೂರಿಯಾಗಿ ನಡೆಯಲಿರುವ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಕೋರಿ ಮೈಸೂರು ದಸರಾ ಮಹೋತ್ಸವ ಸಮಿತಿಯಿಂದ ಗುರುವಾರ ರಾಜ್ಯಪಾಲರು, ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು, ವಿವಿಧ ಇಲಾಕೆಗಳ ಸಚಿವರು, ಶಾಸಕರುಗಳು, ನಿಗಮ ಮಂಡಳಿಗಳ ಅಧ್ಯಕ್ಷರುಗಳು ಹಾಗೂ U್ಪಣ್ಯರಿಗೆ ಅಧಿಕೃತ ಆಹ್ವಾನವನ್ನು ನೀಡಲಾಯಿತು.ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಯತೀಂದ್ರ ಸಿದ್ದರಾಮಯ್ಯ ನೇತೃತ್ವದಲ್ಲಿ ಸಮಿತಿಯ ಸದಸ್ಯರು, ಬೆಂಗಳೂರಿನ ರಾಜಭವನದಲ್ಲಿ ಮೈಸೂರಿನಲ್ಲಿ ನಡೆಯುವ ದಸರಾ ನಾಡಹಬ್ಬಕ್ಕೆ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ…

Read More

ರೈತರಿಗೆ ಸೂಕ್ತಪರಿಹಾರ ನೀಡದ ಕೆ.ಆರ್.ನಗರ ಪುರಸಭೆಯ ಪೀಠೋಪಕರಣ ಜಪ್ತಿ

ಕೆ.ಆರ್.ನಗರ ; ಒಳಚರಂಡಿ ಟ್ರೀಟ್‌ಮೆಂಟ್ ಪ್ಲಾಂಟ್‌ಗೆ ಜಮೀನು ನೀಡಿದ್ದ ರೈತರಿಗೆ ಸೂಕ್ತಪರಿಹಾರ ನೀಡದ ಹಿನ್ನೆಲೆಯಲ್ಲಿ ಜಿಲ್ಲಾನ್ಯಾಯಾಲಯ ಆದೇಶದ ಮೇರೆಗೆ ಕೆ.ಆರ್.ನಗರ ಪುರಸಭೆಯ ಚರಾಸ್ಥಿಯನ್ನು ಜಪ್ತಿ ಮಾಡಲಾಯಿತು.ಬುಧವಾರ ಬೆಳಿಗ್ಗೆ ರೈತರೊಡಗೂಡಿ ವಕೀಲರು ಮತ್ತು ಕೋರ್ಟ್ ಅಮೀನುದಾರರು ಪುರಸಭೆಗೆ ಆಗಮಿಸಿ, ಜಪ್ತಿ ಆದೇಶದೊಂದಿಗೆ ಕಂಪ್ಯೂಟರ್, ವ್ಹೀಲ್‌ಚೇರ್, ಚೇರ್ ಸೇರಿದಂತೆ ಹಲವರು ವಸ್ತುಗಳನ್ನು ಪುರಸಭೆಯಿಂದ ಹೊರತೆಗೆದು ಲಾರಿಗೆ ತುಂಬಿದರು.ಈ ಹಿಂದೆ ಎರಡು ಜಪ್ತಿ ಆದೇಶದೊಂದಿಗೆ ಬಂದರೂ ಪುರಸಭೆ ಅಧಿಕಾರಿಗಳು ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ ಕಾರಣ ಜಪ್ತಿಯನ್ನು ಮಂದೂಡಲಾಗಿತ್ತು. ಅಂತೆಯೆ…

Read More

ನಾಡ ಶಕ್ತಿ ದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದ ಖ್ಯಾತ ಚಿತ್ರ ನಟ ರಜಿನಿಕಾಂತ್

ಮೈಸೂರು: ಕಳೆದ ಎರಡು ದಿನಗಳಿಂದ ಮೈಸೂರು ಜಿಲ್ಲೆಯ ತಿ. ನರಸೀಪುರ ಭಾಗದಲ್ಲಿ ತಮಿಳು ಚಿತ್ರವೊಂದರ ಚಿತ್ರೀಕರಣದಲ್ಲಿ ಭಾಗವಹಿಸಲು ಆಗಮಿಸಿರುವ ಖ್ಯಾತ ಚಿತ್ರ ನಟ ತಲೈವಾ ರಜನಿಕಾಂತ್ ಮೈಸೂರಿನಲ್ಲೇ ವಾಸ್ತವ್ಯ ಹೂಡಿದ್ದು, ಬುಧವಾರ ಚಿತ್ರೀಕರಣಕ್ಕೆ ತೆರಳುವ ಮುನ್ನ ನಗರದ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು, ಪ್ರಾರ್ಥನೆ ಸಲ್ಲಿಸಿದರು. ಯಾವುದೇ ಮಾಹಿತಿ ನೀಡದೇ ದಿಢೀರನೆ ಚಾಮುಂಡಿಬೆಟ್ಟಕ್ಕೆ ಆಗಮಿಸಿದ ಸೂಪರ್ ಸ್ಟಾರ್ ರಜನಿಕಾಂತ್ ಚಾಮುಂಡೇಶ್ವರಿಯ ದರ್ಶನ ಪಡೆದರು. ಬಳಿಕ ದೇವಾಲಯದ ಒಳಗಿರುವ ವಿನಾಯಕ ಹಾಗೂ…

Read More