Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೈಸೂರು ದಸರಾಗೆ ಬಿಗಿ ಭದ್ರತೆ ಕುರಿತು ಡಿಐಜಿ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳ ಸಭೆ

ಮೈಸೂರು: ಈ ಬಾರಿ ಅದ್ಧೂರಿಯಾಗಿ ನಡೆಯಲಿರುವ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಮೈಸೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಸಲೀಂ ಅವರ ಅಧ್ಯಕ್ಷತೆಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆಯ ಬುಧವಾರ ನಗರದಲ್ಲಿ ನಡೆಯಿತು.ಮೈಸೂರಿನ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಮೈಸೂರು ದಸರಾ ಮಹೋತ್ಸವದ ವೇಳೆ ಕೈಗೊಳ್ಳಬೇಕಾದ ಭದ್ರತಾ ಕ್ರಮಗಳ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳಿಂದ ಡಾ. ಸಲೀಂ ಮಾಹಿತಿ ಪಡೆದುಕೊಂಡರು..ದಸರಾ ಸಂದರ್ಭದಲ್ಲಿ ಅರಮನೆ,…

Read More

ಬಿಜೆಪಿ ಸರ್ಕಾರಗಳ ಅನಾಹುತಗಳಿಂದಾಗಿಯೇ ಆರ್ಥಿಕ ಇಲಾಖೆಯವರು ನಮಗೆ ಪತ್ರ ಬರೆದಿದ್ದಾರೆ: ಸಿಎಂ ಡಿ.ಕೆ.ಶಿವಕುಮಾರ್

ಚುನಾವಣಾ ಆಯೋಗ ಪ್ರಜಾಸತಾತ್ಮಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಚಾಮರಾಜನಗರ ನನಗೆ ಪ್ರಿಯಾವಾದ ಸ್ಥಳ ಚಾಮರಾಜನಗರ : ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.`ಯಡಿಯೂರಪ್ಪನವರು ಬಜೆಟ್ ಮೀರಿ ಯೋಜನೆಗಳ ಕಾಮಗಾರಿ ಪ್ರಾರಂಭಿಸಿದ್ದರು. ಬಿಜೆಪಿ ಸರ್ಕಾರಗಳ ಇಂತಹ ಅನಾಹುತಗಳಿಂದಾಗಿಯೇ ಆರ್ಥಿಕ ಇಲಾಖೆಯವರು ನಮಗೆ ಪತ್ರ ಬರೆದಿದ್ದಾರೆ” ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.ಬುಧವಾರ ಚಾಮರಾಜನಗರ ಜಿಲ್ಲೆಯ ಹನೂರಿನ ಕೆಎಚ್ ಬಿ ಹೆಲಿಪ್ಯಾಡ್ ಬಳಿ, ೩೦ ಸಾವಿರ ಕೋಟಿಗೂ ಅಧಿಕ ಹಣ ಬಿಡುಗಡೆಯಾಗಿಲ್ಲ ಎಂಬ ಗುತ್ತಿಗೆದಾರರ ಪತ್ರದ ಬಗ್ಗೆ ಪ್ರತಿಕ್ರಿಯಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,, ಯಡಿಯೂರಪ್ಪ ಅವರ…

Read More

೨೦೨೮ಕ್ಕೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ; ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಕೆಲವು ಪಕ್ಷದವರು ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದರೆ, ಅದು ಹಗಲು ಕನಸುಚಾಮರಾಜನಗರ : ೨೦೨೮ ಕ್ಕೂ ನಮ್ಮ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಎಲ್ಲ ಗ್ಯಾರಂಟಿಗಳು ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.ಬುಧವಾರ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಕೊಳ್ಳೇಗಾಲ-ಹನೂರು ಕ್ಷೇತ್ರಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, “ಕೆಲವು ಪಕ್ಷದವರು ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದರೆ, ಅದು ಹಗಲುಕನಸು ಎಂದು ಲೇವಡಿ ಮಾಡಿದರು. ಭಾರತ್ ಜೋಡೋ…

Read More

ಕರ್ನಾಟಕ ಕಾಂಗ್ರೆಸ್ ಮುಕ್ತ ಆಗೋದು ಗ್ಯಾರಂಟಿ; ಛಲವಾದಿ ನಾರಾಯಣಸ್ವಾಮಿ

ಮೈಸೂರು: ಕರ್ನಾಟಕ ಕಾಂಗ್ರೆಸ್ ಮುಕ್ತ ಆಗೋದು ಗ್ಯಾರಂಟಿಯಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಸೇರಿ ಎನ್.ಡಿ.ಎ. ಮುಂದೆ ಸುಭದ್ರ ಸರ್ಕಾರವನ್ನು ಕರ್ನಾಟಕದಲ್ಲಿ ಕೊಡುತ್ತೇವೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.ಮಂಗಳವಾರ ಮೈಸೂರಿನ ಚಾಮರಾಜಪುರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ರೈತರ ಪರವಾಗಿ ನಿಲ್ಲುವಂತ ಪರಿಸ್ಥಿತಿಯಲ್ಲಿ ಈ ಸರ್ಕಾರ ಇಲ್ಲ.ಇದು ಒಂದು ದರಿದ್ರ ಸರ್ಕಾರ. ಇದು ದಿವಾಳಿ ಸರ್ಕಾರ. ಇವರಲ್ಲಿ ಹಣ ಇಲ್ಲ ಅನ್ನೋದು ನೇರವಾಗಿ ಗೊತ್ತಾಗಿದೆ. ಅದಕ್ಕೆ ಹಣಕಾಸು ಇಲಾಖೆ ಈಗಾಗಲೇ ನೋಟೀಸ್…

Read More

ಶೀಘ್ರದಲ್ಲೇ ಮುಡಾದಿಂದ ಅಕ್ರಮವಾಗಿ ಹಂಚಿಕೆಯಾಗಿರುವ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಈ ಹಿಂದಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿರುವ ೫೦:೫೦ ಅನುಪಾದ ಸೈಟ್ ಹಂಚಿಕೆಯಲ್ಲಿ ನಡೆದಿರುವ ಅಕ್ರಮ ಸೈಟ್‌ಗಳ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡುತ್ತೇವೆ ಎಂದು ನಗರಾಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ತಿಳಿಸಿದರು.ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನ ಕೆ.ಆರ್. ಕ್ಷೇತ್ರದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಅವರು ಮುಡಾದಿಂದ ಅಕ್ರಮವಾಗಿ ಹಂಚಿಕೆಯಾಗಿರುವ ನಿವೇಶನಗಳ ಪಟ್ಟಿಯನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಮನವಿ ನೀಡಿದ್ದಾರೆ. ಅದರ ಆಧಾರದ ಮೇಲೆ ಪಟ್ಟಿಯನ್ನು ಸಿದ್ಧಪಡಿಸುತ್ತಿದ್ದು, ಶೀಘ್ರವೇ…

Read More

ಇದೇ ಮೊದಲ ಬಾರಿ ದಸರಾ ಕಾರ್ಯಕ್ರಮಗಳ ಉಸ್ತುವಾರಿಗೆ ೨೨ ಮಂದಿ ಸಚಿವರುಗಳ ನೇಮಕ*೧೦ ದಿನಗಳ ದಸರಾದ ಕಾರ್ಯಕ್ರಮಗಳಿಗೆ ಪ್ರತಿ ದಿನ ಇಬ್ಬರು ಸಚಿವರುಗಳ ಉಸ್ತುವಾರಿಮೈಸೂರು: ಇದೇ ಮೊದಲ ಬಾರಿ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರತಿಯೊಂದು ದಿನವೂ ಒಂದೊAದು ಕಾರ್ಯಕ್ರಮಕ್ಕೆ ಸಚಿವರುಗಳನ್ನು ಉಸ್ತುವಾರಿಯಾಗಿ ಹಂಚಿಕೆ ಮಾಡಲಾಗಿದೆ.ಒಟ್ಟು ೧೮ ಕಮಿಟಿಗಳಿವೆ. ಹಲವು ಕಾರ್ಯಕ್ರಮಗಳು ನಡೆಯಲಿವೆ. ೧೦ ದಿನಗಳ ಕಾಲ ಪ್ರತಿ ದಿನ, ಇಬ್ಬರು ಸಚಿವರು ಕಾರ್ಯಕ್ರಮಗಳ ಉಸ್ತುವಾರಿ ವಹಿಸಲಿದ್ದಾರೆ. ದಸರಾ ಚೆನ್ನಾಗಿ ಆಗಬೇಕೆಂದು ಮುಖ್ಯಮಂತ್ರಿಗಳು ಈ ಕ್ರಮ…

Read More

ರಾಜ್ಯದಲ್ಲಿ ಸದ್ಯಕ್ಕೆ ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ: ಸಚಿವ ಕೆ.ಜೆ.ಜಾರ್ಜ್

ಮೈಸೂರು: ರಾಜ್ಯದಲ್ಲಿ ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಪ್ರಶ್ನೆಯೇ ಇಲ್ಲ, ಆದರೆ ಮುಂದಿನ ದಿನಗಳಲ್ಲಿ ನಪರಿಸ್ಥಿತಿ ಕೈಮೀರಿದರೆ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ತೀರ್ಮಾನ ಮಾಡುತ್ತೇವೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.ಭಾನುವಾರ ನಗರದ ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ ಭೇಟಿ ನೀಡಿ, ಅಲ್ಲಿ ದಸರಾಗೆ ಕೈಗೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ. ಆದರೆ ಸುಮಾರು ಒಂದು ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ. ಕಳೆದ ಏಳು ತಿಂಗಳಿAದ ವಿದ್ಯುತ್ ಕೊರತೆ…

Read More

ಮಾಜಿ ಸಂಸದ ಪ್ರತಾಪ್‌ಸಿಂಹಗೆ ಮಧ್ಯಂತರ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಣೆ

ಮೈಸೂರು; ಜಿಲ್ಲೆಯ ಟಿ.ನರಸೀಪುರದಲ್ಲಿ ಗಣೇಶ ವಿಸರ್ಜನೆ ವೇಳೆ ದಲಿತ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇಲೆ ದಾಖಲಾಗಿರುವ ಜಾತಿ ನಿಂದನೆ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಗೆ ಮಧ್ಯಂತರ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಿಸಿದೆ.ಟಿ.ನರಸೀಪುರದಲ್ಲಿ ಸೆ.18ರಂದು ನಡೆದ ಗಣೇಶ ವಿಸರ್ಜನೆ ಶೋಭಾಯಾತ್ರೆ ವೇಳೆ ದಲಿತ ಸಂಘಟನೆಗಳ ಹೋರಾಟಗಾರರನ್ನು ಅವಮಾನ ಮಾಡಿ ಮತ್ತು ದಲಿತ ಸಮುದಾಯದ ಸಾಂಸ್ಕತಿಕ ಅಸ್ಮಿತೆಯಾದ ನೀಲಿ ಶಾಲಿನ ಬಗ್ಗೆ ಅವಹೇಳನ ಮಾಡಿದ ಆರೋಪದಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಪ್ರತಾಪ್…

Read More

ಮೈಸೂರು ದಸರಾ ಕವಿಗೋಷ್ಠಿ ಉದ್ಘಾಟಿಸಲಿರುವ ಹಿರಿಯ ಲೇಖಕಿ ವೈದೇಹಿ ಅವರಿಗೆ ಸಮಿತಿಯಿಂದ ಅಧಿಕೃತ ಆಹ್ವಾನ

ಮೈಸೂರು; ಈ ಬಾರಿ ನಡೆಯಲಿರುವ ವಿಶ್ವ ಪ್ರಸಿದ್ಧ ನಾಡ ಹಬ್ಬ ಮೈಸೂರಿನ ದಸರಾ ಮಹೋತ್ಸವದ ಅಂಗವಾಗಿ ನಡೆಯುವ ದಸರಾ ಕವಿಗೋಷ್ಠಿ ಉದ್ಘಾಟಿಸಲಿರುವ ಹಿರಿಯ ಲೇಖಕಿ ವೈದೇಹಿ ಅವರನ್ನು ಉಡುಪಿ ಜಿಲ್ಲೆಯ ಮಣಿಪಾಲದ ಅವರ ನಿವಾಸದಲ್ಲಿ ಶುಕ್ರವಾರ ಸನ್ಮಾನಿಸುವ ಮೂಲಕ ಆಹ್ವಾನಿಸಲಾಯಿತು.ವಿಜಯನಗರ ಸಾಮ್ರಾಜ್ಯ ಕಾಲದಿಂದ ದಸರಾ ಮಹೋತ್ಸವದ ರಥ ಸಾಗುತ್ತಿದೆ. ಅದು ಕನ್ನಡದ ರಥವಾಗಿದ್ದು, ಮುಂದೆಯೂ ಸಾಂಗವಾಗಿ ಸಾಗಲಿ ಎಂದು ಹಿರಿಯ ಲೇಖಕಿ ವೈದೇಹಿ ಅಭಿಪ್ರಾಯಪಟ್ಟರು.ಮೈಸೂರಿನಿಂದ ದಸರಾ ಕವಿಗೋಷ್ಠಿ ಉಪಸಮಿತಿಯ ಆಹ್ವಾನ ಸ್ವೀಕರಿಸಿ ಮಾತನಾಡಿದ ಅವರು,ಐದು ಕವಿಗೋಷ್ಠಿಗಳಿಗೆ ಜನರು…

Read More

ಎಂಡಿಎ 50:50 ಅಕ್ರಮ, ರದ್ದಾದ ನಿವೇಶನಗಳ ಪಟ್ಟಿ ಪ್ರಕಟಿಸಿ

*ಎಂಡಿಎ ಆಯುಕ್ತರು, ಜಿಲ್ಲಾಧಿ ಕಾರಿಗಳಿಗೆ ಸರಕಾರ ಸೂಚನೆ*ಶಾಸಕ ಟಿ.ಎಸ್. ಶ್ರೀವತ್ಸ ಅವರ ಪತ್ರಕ್ಕೆ ಸರಕಾರದ ಸ್ಪಂದನೆ ಮೈಸೂರು: ಇಲ್ಲಿನ ಕೆ.ಆರ್. ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ಅವರ ಮನವಿಗೆ ಸ್ಪಂದಿಸಿರುವ ಸರಕಾರ ಮೈಸೂರು ಅಭಿವೃದ್ಧಿ ಪ್ರಾಧಿ ಕಾರದಲ್ಲಿ (ಎಂಡಿಎ) ಶೇ.50:50 ಅನುಪಾತದಡಿ ರದ್ದುಗೊಂಡಿರುವ ನಿವೇಶನಗಳ ಸಂಪೂರ್ಣ ಪಟ್ಟಿಯನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು ಹಾಗೂ ಸಾರ್ವಜನಿಕರ ನೆರವಿಗಾಗಿ ಪ್ರತ್ಯೇಕ ಸಹಾಯವಾಣಿ ಆರಂಭಿಸಬೇಕು ಎಂದು ಎಂಡಿಎ ಆಯುಕ್ತರು ಹಾಗೂ ಜಿಲ್ಲಾಧಿ ಕಾರಿಗಳಿಗೆ ಪತ್ರ ಬರೆದು ಸೂಚನೆ ನೀಡಿದೆ.ಶಾಸಕ ಟಿ.ಎಸ್.ಶ್ರೀವತ್ಸ ಅವರು ನಗರಾಭಿವೃದ್ಧಿ…

Read More