3Kaala News

ಸುಭಾಷಿತ 

ಭೌತಿಕ ಬದುಕಿಗೆ ಆಧ್ಯಾತ್ಮದ ಜ್ಞಾನ ಅವಶ್ಯಕ. ಮನುಷ್ಯ ಧರ್ಮದಿಂದ ವಿಮುಖನಾದರೇ, ಜೀವನ ಅಶಾಂತಿಯ ಕಡಲಾಗುತ್ತದೆ. ಮನುಷ್ಯನ ಬದುಕು ಇನ್ನೊಬ್ಬರಿಗೆ ಮಾದರಿಯಾಗಬೇಕಲ್ಲದೆ, ಮಾರಕವಾಗಬಾರದು.  ಸುಳ್ಳು ಹೇಳಲು ಹಲವು ದಾರಿ, ಆದರೆ ಸತ್ಯಕ್ಕೆ ಇರುವುದೊಂದೇ ದಾರಿ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಗಣಪತಿ ಶ್ರೀಗಳ 84ನೇ ಜನ್ಮದಿನೋತ್ಸವ ಪ್ರಯುಕ್ತ ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರಿಗೆ ವಿವಿಧ ನೆರವು ವಿತರಣೆ

ಮೈಸೂರು: ಅವಧೂತ ದತ್ತ ಪೀಠದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ¥ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 84ನೇ ಜನ್ಮದಿನೋತ್ಸವವನ್ನು ಭಾಗವಾಗಿ ಶನಿವಾರ ಆಶ್ರಮದ ವತಿಯಿಂದ ಸಮಾಜದ ವಿಶೇಷಚೇತನರು ಹಾಗೂ ಹಿರಿಯ ನಾಗರಿಕರಿಗೆ ವಿವಿಧ ನೆರವು ನೀಡುವುದರ ಜತೆಗೆ ವೈದ್ಯಕೀಯ ಉಪಕರಣಗಳನ್ನು ಶ್ರೀಗಳು ವಿತರಿಸಿದರು.ಮೈಸೂರು ವಿಭಾಗದ ವಿಶೇಷಚೇತನರು ಮತ್ತು ಹಿರಿಯ ನಾಗರಿಕರ ಇಲಾಖೆ, ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಹಾಗೂ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಂಸ್ಥೆಗಳ ಜಂಟಿ ಸಲಹೆ ಮತ್ತು ಸಹಯೋಗದೊಂದಿಗೆ ಅರ್ಹ…

Read More

ಪಿಎಂ ಸೂರ್ಯ ಘರ್ ಯೋಜನೆಯ ಪ್ರಚಾರ ವಾಹನಕ್ಕೆ ಚಾಲನೆ

ಮೈಸೂರು : ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯಡಿ ಗೃಹಬಳಕೆದಾರರ ಮನೆಯ ಛಾವಣಿಯಲ್ಲಿ ಸೌರಫಲಕಗಳನ್ನು ಸ್ಥಾಪಿಸುವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಪ್ರಚಾರ ವಾಹನಕ್ಕೆ ಶುಕ್ರವಾರ ನಗರದಲ್ಲಿ ಚಾಲನೆ ನೀಡಲಾಯಿತು.ಇಲ್ಲಿನ ವಿಜಯನಗರ 2ನೇ ಹಂತದಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ) ಪ್ರದಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಲ್‌ಇಡಿ ಪರದೆ ಅಳವಡಿಸಿರುವ ವಾಹನದ ಮೂಲಕ ಪ್ರಚಾರ ಕಾರ್ಯಕ್ಕೆ ಚಾವಿಸನಿನಿ ತಾಂತ್ರಿಕ ನಿರ್ದೇಶಕರಾದ ಶರಣಮ್ಮ ಎಸ್. ಜಂಗಿನ ಹಾಗೂ ಚಾವಿಸನಿನಿ ಮೈಸೂರು ವೃತ್ತದ ಮುಖ್ಯ ಇಂಜಿನಿಯರ್ ಎಲ್….

Read More

45 ಕೋಟಿ ರೂ ವೆಚ್ಚದ ಬಾಕ್ಸ್ ಡ್ರೆöÊನ್ ಹಾಗೂ ರಸ್ತೆ ಕಾಮಗಾರಿಗೆ ಶಾಸಕ ಟಿ.ಎಸ್. ಶ್ರೀವತ್ಸ ಚಾಲನೆ

ಮೈಸೂರು; ಇಲ್ಲಿನ ಕೆ ಆರ್ ಕ್ಷೇತ್ರದಲ್ಲಿ 45 ಕೋಟಿ ರೂಗಳ ವೆಚ್ಚದ ಬಾಕ್ಸ್ ಡ್ರೆöÊನ್ ಹಾಗೂ ರಸ್ತೆ ಕಾಮಗಾರಿಗೆ ಶಾಸಕ ಟಿ.ಎಸ್. ಶ್ರೀವತ್ಸ ಅವರು ಶುಕ್ರವಾರ ಚಾಲನೆ ನೀಡಿದರು.ಮಹಾತ್ಮ ಗಾಂಧಿ ನಗರ ವಿಕಾಸ್ ಯೋಜನೆ ಅಡಿ ಕೆ.ಆರ್. ಕ್ಷೇತ್ರದ ವಲಯ ಕಚೇರಿ ಎರಡು ಹಾಗೂ ಮೂರರ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂಬರ್ 57.59. 60. 62. 64. 65 ರಲ್ಲಿ ಬಾಕ್ಸ್ ಟ್ರೆöÊನ್ ಮತ್ತು ರಸ್ತೆ ಡಾಂಬರೀಕರಣ ಸುಮಾರು 20 ಕೋಟಿ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿದರು.ಈ…

Read More

ಸರ್ವರ್ ಸಮಸ್ಯೆಯಿಂದ ಪಡಿತರ ವಿತರಣೆಗೆ ಅಡ್ಡಿ: ಕ್ರಮಕ್ಕೆ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಒತ್ತಾಯ

ಮೈಸೂರು; ಆಹಾರ, ನಾಗರಿಕ ಸರಬರಾಜು ಇಲಾಖಾ ವತಿಯಿಂದ ನ್ಯಾಯಬೆಲೆ ಅಂಗಡಿ ಗಳ ಮೂಲಕ ವಿತರಣೆ ಮಾಡಲಾಗುತ್ತಿರುವ ಪಡಿತರ ಅಕ್ಕಿಯು ಸರ್ವರ್ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕೆಂದು ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕ ಒತ್ತಾಯಿಸಿದೆ.ಈ ಕುರಿತು ಮೈಸೂರಿನ ಸಿದ್ದಾರ್ಥ ನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಕರ್ನಾಟಕ ಸರಕಾರದ ಆಹಾರ, ನಾಗರಿಕ ಸರಬುರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ಡಾ. ಮಂಟೇಸ್ವಾಮಿ ರವರಿಗೆ ಲಿಖಿತ ಮನವಿ ಸಲ್ಲಿಸಿರುವ ಘಟಕದ ಮುಖಂಡರುಗಳು, ಸರ್ವರ್ ಸಮಸ್ಯೆಯಿಂದಾಗಿ ಗ್ರಾಹಕರು ತಮ್ಮ ಪಡಿತರ…

Read More

ಮೈಸೂರು ಸಂಸ್ಥಾನದ ಸಂಗೀತ ಪರಂಪರೆಯನ್ನು ಶ್ರೀಮಂತಗೊಳಿಸುವಲ್ಲಿ ವಾಸುದೇವಾಚಾರ್ಯರ ಕೊಡುಗೆ ಅಪಾರ; ಸಂಸದ ಯದುವೀರ್

ಮೈಸೂರು: ಮೈಸೂರು ಸಂಸ್ಥಾನದ ಸಂಗೀತ ಪರಂಪರೆಯನ್ನು ಶ್ರೀಮಂತಗೊಳಿಸುವಲ್ಲಿ ವಾಸುದೇವಾ ಚಾರ್ಯರ ಕೊಡುಗೆ ಅಪಾರವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.ನಗರದ ನಾರಾಯಣಶಾಸ್ತಿç ರಸ್ತೆಯ ಲ್ಲಿರುವ ಬಿಡಾರಂ ಕೃಷ್ಣಪ್ಪನವರ ಶ್ರೀ ಪ್ರಸನ್ನ ಸೀತಾರಾಮ ಮಂದಿರದಲ್ಲಿ ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಸಹಯೋಗ ದಲ್ಲಿ ನಡೆದ ಅರಮನೆ ನಗರಿ ಮೈಸೂರಿನ ಸಂಗೀತ ಪರಂಪರೆಯನ್ನು ವಿಶ್ವಕ್ಕೆ ಪರಿಚಯಿಸಿದ ಮಹಾನ್ ವಾಗ್ಗೇಯಕಾರ, ಸಂಗೀತ ಕಲಾನಿಧಿ ಮೈಸೂರು ಕೆ.ವಾಸುದೇವಾಚಾರ್ಯ, ಅವರ 192ನೇ ಜನ್ಮ ದಿನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೈಸೂರು…

Read More

ಗಣಪತಿ ಸಚ್ಚಿದಾನಂದ ಆಶ್ರಮದ ಸಪ್ತರ್ಷಿ ಸರೋವರದಲ್ಲಿ ವೆಂಕಟೇಶ್ವರ ಸ್ವಾಮಿಗೆ ತೆಪ್ಪೋತ್ಸವ

ಮೈಸೂರು; ಶ್ರೀ ದತ್ತ ವೆಂಕಟೇಶ್ವರ ಕ್ಷೇತ್ರದ 27ನೇ ಬ್ರಹ್ಮೋತ್ಸವ ಅಂಗವಾಗಿ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದ ಸಪ್ತರ್ಷಿ ಸರೋವರದಲ್ಲಿ ವೆಂಕಟೇಶ್ವರ ಸ್ವಾಮಿಗೆ ತೆಪ್ಪೋತ್ಸವ ವಿಜೃಂಭಣೆಯಿAದ ನಡೆಯಿತು.ವಿದ್ಯುತ್ ದೀಪಾಲಂಕಾರದಿAದ ಕಂಗೊಳಿಸುತ್ತಿದ್ದ ತೆಪ್ಪದಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಮಂಗಳವಾದ್ಯ, ವೇದಘೋಷಗಳೊಂದಿಗೆ ಸರೋವರದಲ್ಲಿ ಮೂರು ಸುತ್ತು ಪ್ರದಕ್ಷಿಣೆ ಮಾಡಿಸಲಾಯಿತು. ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ತೆಪ್ಪೋತ್ಸವವನ್ನು ಕಣ್ತುಂಬಿಕೊಳ್ಳಲು ನೂರಾರು ಭಕ್ತರು ಆಶ್ರಮಕ್ಕೆ ಆಗಮಿಸಿದ್ದರು.ಶ್ರೀಗಣಪತಿ ಸಚ್ಚಿದಾನಂದಸ್ವಾಮಿಯವರು ತೆಪ್ಪೋತ್ಸವದಲ್ಲಿದ್ದು ಭಕ್ತರಿಗೆ ಆಶೀರ್ವಚನ ನೀಡಿದರು. ನೆರೆದಿದ್ದ ಭಕ್ತರು ತೆಪ್ಪೋತ್ಸವ ವೀಕ್ಷಿಸಿದರು.

Read More

ಶಾಸಕ ಸಿ.ಪುಟ್ಟರಂಗಶೆಟ್ಟಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಮೈಸೂರು ಜಿಲ್ಲಾ ಭಗೀರಥ ಉಪ್ಪಾರರ ಸಂಘ ಒತ್ತಾಯ

ಮೈಸೂರು; ಹಿಂದುಳಿದ ವರ್ಗಗಳ ಕೋಟಾದಲ್ಲಿ ಚಾಮರಾಜನಗರ ಕ್ಷೇತ್ರದಿಂದ ಸತತವಾಗಿ 4ನೇ ಭಾರಿಗೆ ಕಾಂಗ್ರೆಸ್ ಪಕ್ಷದ ಶಾಸಕರಾಗಿ ಕೆಲಸ ಮಾಡುತ್ತಿರುವ ಮಾಜಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿಗೆ ರವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಮೈಸೂರು ಜಿಲ್ಲಾ ಭಗೀರಥ ಉಪ್ಪಾರ ಸಂಘ ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಒತ್ತಾಯಿಸಿದೆ.ಗುರುವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಎಸ್. ಯೋಗಿಶ ಉಪ್ಪಾರ, ಇಡೀ ರಾಜ್ಯದಲ್ಲಿ 224 ಕ್ಷೇತ್ರಗಳಲ್ಲಿ ಉಪ್ಪಾರ ಸಮಾಜವು 25 ರಿಂದ 30 ಲಕ್ಷ ಮತದಾರರಿದ್ದು,…

Read More

ಬ್ರಿಟಿಷರ ನಾಡಿನಲ್ಲಿಯೇ ನುಗ್ಗಿ ಅವರ ವಿರುದ್ಧ ಹೋರಾಟ ನಡೆಸಿದ ಸಾವರ್ಕರ್ ನಿಜವಾದ ವೀರ: ಸಂಸದ ಯದುವೀರ್

ಬ್ರಿಟಿಷರ ನಾಡಿನಲ್ಲಿಯೇ ನುಗ್ಗಿ ಅವರ ವಿರುದ್ಧ ಹೋರಾಟ ನಡೆಸಿದ ಸಾವರ್ಕರ್ ನಿಜವಾದ ವೀರ: ಸಂಸದ ಯದುವೀರ್ಮೈಸೂರು; ದೇಶದ ಸ್ವಾತಂತ್ರ÷್ಯಕ್ಕಾಗಿ ವಿನಾಯಕ ದಾಮೋದರ ಸಾವರ್ಕರ್ ಅವರು, ತಮ್ಮ ಜೀವಿತಾವಧಿಯ ಬಹುಪಾಲು ಜೈಲಿನಲ್ಲಿ ಸವೆದು ತಮ್ಮನ್ನು ತಾವೇ ಸಮರ್ಪಿಸಿಕೊಂಡರು ಎಂದು ಸಂಸದ ಯದುವೀರ್ ಕೃಷ್ಣದತ್ತಚಾಮರಾಜ ಒಡೆಯರ್ ತಿಳಿಸಿದರು.ಸಾವರ್ಕರ್ ಪ್ರತಿಷ್ಠಾನ ಮೈಸೂರು ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತದಲ್ಲಿ ಆಯೋಜಿಸಲಾಗಿತ್ತು.ಸ್ವಾತಂತ್ರ÷್ಯ ವೀರ ನಾಯಕ ದಾಮೋದರ ಸಾವರ್ಕರ್ ರವರ 143ನೇ ಜಯಂತಿಯನ್ನು ಸಾವರ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಉದ್ಘಾಟಿಸಿ ಮಾತನಾಡಿದ ಅವರು,…

Read More

ರಸಗೊಬ್ಬರ, ಡೀಸೆಲ್, ಪೆಟ್ರೋಲ್ ದರ ಏರಿಕೆ ಹಿಂತೆಗೆದುಕೊಳ್ಳಲು ಆಗ್ರಹಿಸಿ ರೈತರಿಂದ ಪ್ರತಿಭಟನೆ

ಮೈಸೂರು: ರಸಗೊಬ್ಬರ, ಡೀಸೆಲ್, ಪೆಟ್ರೋಲ್ ದರ ಏರಿಕೆಯನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು, ರೈತರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ಮೈಸೂರು ತಾಲೂಕು ಘಟಕದ ವತಿಯಿಂದ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ನಗರದ ನಜರ್‌ಬಾದ್‌ನಲ್ಲಿರುವ ತಹಶೀಲ್ದಾರ್ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಕೆಲಕಾಲ ಧರಣಿ ನಡೆಸಿ ನಾನಾ ಘೋಷಣೆಗಳನ್ನು ಕೂಗಿದರು.ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ ಮರಂಕಯ್ಯ ಮಾತನಾಡಿ ಕೇಂದ್ರ ಮತ್ತು ರಾಜ್ಯ ಸರಕಾರ ರೈತರು ಮತ್ತು ಜನಸಾಮಾನ್ಯರ ಜೀವನದಲ್ಲಿ ಚೆಲ್ಲಾಟವಾಡುತ್ತಿದ್ದು, ಬೆಲೆ ಏರಿಕೆಯಿಂದ ರೈತರು…

Read More

ಸಂಗೀತ ಕಲಾನಿಧಿ ವಾಸುದೇವಾಚಾರ್ಯರ ಜನ್ಮದಿನಾಚರಣೆ ಮಹೋತ್ಸವ : ಶಾಸಕ ಟಿ.ಎಸ್.ಶ್ರೀವತ್ಸ

ಮೈಸೂರು; ಇದೇ ಮೊದಲ ಬಾರಿಗೆ ಸಂಗೀತ ಕಲಾನಿಧಿ ವಾಸುದೇವಾಚಾರ್ಯರ ಜನ್ಮದಿನಾಚರಣೆ ಮಹೋತ್ಸವವನ್ನು ಮೇ 28 ರಂದು ನಗರದಲ್ಲಿ ಏರ್ಪಡಿಸಲಾಗಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ತಿಳಿಸಿದರು.ಮಂಗಳವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ನಡೆದ ದಸರಾದ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯ ವೇಳೆ ಸಂಗೀತ ಕಲಾನಿಧಿ ವಾಸುದೇವಾಚಾರ್ಯರ ಜನ್ಮದಿನಾಚರಣೆ ಮಹೋತ್ಸವವನ್ನು ಸರ್ಕಾರದಿಂದ ಆಚರಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೆ. ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿಗಳು ವಾಸುದೇವಚಾರ್ಯರ ಜನ್ಮ ದಿನಾಚರಣ ಮಹೋತ್ಸವಕ್ಕೆ ಒಪ್ಪಿಗೆ ನೀಡಿದ್ದಾರೆ. ಹಾಗಾಗಿ…

Read More