ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಇತಿಹಾಸ ಸಮ್ಮೇಳನ
ಮೈಸೂರು; ಪುದುಚ್ಚರಿ ವಿಶ್ವ ಇತಿಹಾಸ ಕಾಂಗ್ರೆಸ್ ಮತ್ತು ಮ್ಯಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಸಹಭಾಗಿತ್ವದಲ್ಲಿ ಜುಲೈ 25 ಮತ್ತು 26 ರಂದು ಅಂತರಾಷ್ಟ್ರೀಯ ಇತಿಹಾಸ ಸಮ್ಮೇಳನವನ್ನು ಆಯೋಜಿಸಲಾಗಿದೆ. ಸಮ್ಮೇಳನವು ಮೈಸೂರಿನ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ನಡೆಯಲಿದ್ದು, ವಿಶ್ವದ ವಿವಿಧ ಭಾಗಗಳಿಂದ ಅನೇಕ ವಿದ್ವಾಂಸರು, ಸಂಶೋಧಕರು ಮತ್ತು ಪ್ರಾಧ್ಯಾಪಕರು ಭಾಗವಹಿಸಲಿದ್ದಾರೆ ಎಂದು ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಅನಿತ ಎಂ.ಎಸ್ ತಿಳಿಸಿದರು.ಶುಕ್ರವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ…