Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಅಷಾಢ ಶುಕ್ರವಾರಕ್ಕಾಗಿ ಜಿಲ್ಲಾಡಳಿತದಿಂದ ಚಾಮುಂಡಿ ಬೆಟ್ಟದಲ್ಲಿ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಲಕ್ಷ್ಮಿ ಕಾಂತ ರೆಡ್ಡಿ ಜಿ

ಮೈಸೂರು: ಅಷಾಢ ಮಾಸದಲ್ಲಿ ಬರುವ ಶುಕ್ರವಾರಗಳಚಿದು ಹಾಗೂ ಚಾಮುಂಡೇಶ್ವರಿ ವರ್ಧಂತಿ ದಿನದಂದು ಚಾಮುಂಡಿ ಬೆಟ್ಟದಲ್ಲಿ ನಾಡ ಶಕ್ತಿ ದೇವತೆ ಚಾಮುಂಡೇಶ್ವರಿ ದರ್ಶನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷಿ÷್ಮಕಾಂತ ರೆಡ್ಡಿ ಜಿ ತಿಳಿಸಿದರು.ಮಂಗಳವಾರ ನಗರದ ಚಾಮುಂಡಿ ಬೆಟ್ಟದಲ್ಲಿ ಅಷಾಢ ಮಾಸದ ಶುಕ್ರವಾರಗಳು ಮತ್ತು ಅಮ್ಮನವರ ಜನ್ನೋತ್ಸವದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜುಲೈ17, 24, 31, ಆಗಸ್ಟ್ 7 ರಂದು 4 ಅಷಾಢ ಶುಕ್ರವಾರ ಹಾಗೂ ಅಗಸ್ಟ್ 4 ರಂದು ಅಮ್ಮನವರ ವರ್ಧಂತಿ…

Read More

ಮೈಸೂರಿನಲ್ಲಿ ಪಾದಚಾರಿ ಮಾರ್ಗ ಅತಿಕ್ರಮಣ ತೆರವು ಕಾರ್ಯಾಚರಣೆ

ಮೈಸೂರು; ನಗರದ ಪಾದಚಾರಿಗಳ ಸಂಚಾರಕ್ಕೆ ಅಡಚಣೆಯಾಗಿದ್ದ ಪುಟ್ ಪಾತ್ ಅತಿಕ್ರಮಣಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಮೈಸೂರು ಮಹಾನಗರ ಪಾಲಿಕೆ ವಲಯ 6 ರವತಿಯಿಂದ ಮಂಗಳವಾರ ವಿಶೇಷ ಕಾರ್ಯಾಚರಣೆ ನಡೆಸಲಾಯಿತು.ಈ ಕಾರ್ಯಾಚರಣೆಗೆ ಪೂರ್ವಭಾವಿಯಾಗಿ ಮೈಕ್ ಮೂಲಕ ವ್ಯಾಪಕ ಪ್ರಚಾರ ನಡೆಸಿ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರಲ್ಲಿ ಅರಿವು ಮೂಡಿಸಲಾಗಿತ್ತು. ಪಾದಚಾರಿ ಮಾರ್ಗಗಳನ್ನು ಅತಿಕ್ರಮಿಸದಂತೆ ಹಾಗೂ ಸ್ವಯಂಪ್ರೇರಿತವಾಗಿ ತೆರವುಗೊಳಿಸಿಕೊಳ್ಳುವಂತೆ ಸೂಚನೆ ನೀಡಲಾಗಿತ್ತು.ನಿಗದಿತ ಕಾರ್ಯಕ್ರಮದಂತೆ ಇಂದು ಮೈಸೂರು ಮಹಾನಗರ ಪಾಲಿಕೆಯ ವಲಯ-6 ವ್ಯಾಪ್ತಿಯ ಆಯುರ್ವೇದಿಕ್ ವೃತ್ತದಿಂದ ಸಬರ್ಬನ್ ಬಸ್ ನಿಲ್ದಾಣದವರೆಗೆ ಇರುವ ಇರ್ವಿನ್ ರಸ್ತೆಯ…

Read More

ಎರಡು ದಿನದ ಕಂಬಳಕ್ಕೆ ಕೆರೆ ಬಲಿ, 150ಕ್ಕೂ ಹೆಚ್ಚು ಮರಗಳಿಗೆ ಕತ್ತರಿ !ಅರಣ್ಯ ಇಲಾಖೆಯಿಂದ ಮೂವರ ವಿರುದ್ಧ ಎಫ್ ಐಆರ್ ದಾಖಲು

ಮೈಸೂರು: ಈ ಬಾರಿ ವಿಜೃಂಭಣೆಯಿAದ ಜರುಗಲಿರುವ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಎರಡು ದಿನಗಳ ಕಾಲ ಕಂಬಳ ಕ್ರೀಡೋತ್ಸವವನ್ನು ಪ್ರದರ್ಶನ ಆಯೋಜಿಸಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮೈಸೂರಿನ ಹೊರವಲಯದಲ್ಲಿ ಕಂಬಳಕ್ಕಾಗಿ ನಿಗದಿಪಡಿಸಲಾದ ಜಾಗದಲ್ಲಿ ಸಿದ್ಧತೆಗಳು ಭರದಿಂದ ನಡೆಯುತ್ತಿವೆ.ಮೈಸೂರಿನ ಹೊರವಲಯದ ಸಾತಗಳ್ಳಿ ಬಳಿ ಇರುವ 20 ಎಕರೆ ವಿಸ್ತೀರ್ಣದ ಜಾಗದಲ್ಲಿ ಮಣ್ಣನ್ನು ಸಮತಟ್ಟು ಮಾಡುವ ಕಾರ್ಯ ಈಗಾಗಲೇ ಶುರುವಾಗಿದೆ. 10ಕ್ಕೂ ಹೆಚ್ಚು ಜೆಸಿಬಿ ಯಂತ್ರಗಳನ್ನು ಬಳಸಿ ಇಡೀ ಜಾಗವನ್ನು ಕಂಬಳ ನಡೆಸುವುದಕ್ಕಾಗಿ ಸಜ್ಜುಗೊಳಿಸಲಾಗುತ್ತಿದೆ.ಕಂಬಳ ನಡೆಸಲು…

Read More

ಅಣಬೆ ಬೇಸಾಯವು ಗ್ರಾಮೀಣ ಯುವಕರು, ಮಹಿಳೆಯರಿಗೆ ಉತ್ತಮ ಆದಾಯದ ಮಾರ್ಗವಾಗಿದೆ

ಮೈಸೂರು; ಅಣಬೆ ಬೇಸಾಯವು ಗ್ರಾಮೀಣ ಯುವಕರು ಮತ್ತು ಮಹಿಳೆಯರಿಗೆ ಉತ್ತಮ ಆದಾಯದ ಮಾರ್ಗವಾಗಿದೆ ಎಂದು ಹಾರ್ಟ್ ಸಂಸ್ಥೆಯ ಅಧ್ಯಕ್ಷ ಶಿವಕುಮಾರ್ ಹೇಳಿದರು.ಮೈಸೂರಿನ ಹಾರ್ಟ್ ಸಂಸ್ಥೆಯ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಅಣಬೆ ಬೇಸಾಯ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆಯ ಮೂಲಕ ಸಮಾಜದ ಆರ್ಥಿಕ ಸಬಲೀಕರಣ ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಕಡಿಮೆ ಬಂಡವಾಳ, ಕಡಿಮೆ ಸ್ಥಳ ಮತ್ತು ಕಡಿಮೆ ಅವಧಿಯಲ್ಲಿ ಉತ್ತಮ ಆದಾಯಗಳಿಸಬಹುದಾದ ಅಣಬೆ ಬೇಸಾಯವನ್ನು ಯುವಕರು ಹಾಗೂ ಮಹಿಳೆಯರು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ…

Read More

ಯೋಗದ ಪ್ರಯೋಜನಗಳು ಪ್ರತಿಯೊಬ್ಬ ವ್ಯಕ್ತಿಗೂ ತಲುಪಿಸುವುದು ನಮ್ಮೇಲ್ಲರ ಜವಾಬ್ದಾರಿ: ಶಾಸಕ ದರ್ಶನ್ ಧ್ರುವನಾರಾಯಣ್

ನಂಜನಗೂಡು: ಮೈಸೂರು ಜಿಲ್ಲೆಯು ಈಗಾಗಲೇ ವಿಶ್ವದಾದ್ಯಂತ ಯೋಗದ ತವರೂರಾಗಿ ಗುರುತಿಸಿಕೊಂಡಿದೆ. ಈ ಪ್ರಾಯೋಗಿಕ ಅಧ್ಯಯನಕ್ಕಾಗಿ ನಂಜನಗೂಡು ತಾಲ್ಲೂಕನ್ನು ಆಯ್ಕೆ ಮಾಡಿರುವುದು ಇಡೀ ಜಿಲ್ಲೆಗೆ ಹೆಮ್ಮೆಯ ವಿಷಯ ಎಂದು ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.ರಾಷ್ಟ್ರೀಯ ಆಯುಷ್ ಮಿಷನ್ ಯೋಜನೆಯಡಿ ಮೈಸೂರು ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಗೊಳ್ಳಲಿರುವ ಮಹತ್ವಾಕಾಂಕ್ಷಿ ಯೋಗ ಹಬ್ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕಾಗಿ ನಂಜನಗೂಡು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯೋಗದ ಪ್ರಯೋಜನಗಳನ್ನು ತಾಲ್ಲೂಕಿನ ಕಟ್ಟಕಡೆಯ ವ್ಯಕ್ತಿಗೂ…

Read More

ಗಾನ ಸಾಮ್ರಾಜ್ಞಿ ಎಸ್. ಜಾನಕಿ ಅಸ್ತಂಗತ ಸಾಂಸ್ಕೃತಿಕ ಲೋಕಕ್ಕೆ ಆದ ಬಹುದೊಡ್ಡ ನಷ್ಟವಾಗಿದೆ; ಸುತ್ತೂರು ಶ್ರೀ

ಮೈಸೂರು; ದಕ್ಷಿಣ ಭಾರತದ ಚಲನಚಿತ್ರ ರಂಗದ ಅನಭಿಷಕ್ತ ಗಾನಸಾಮ್ರಾಜ್ಞಿ ಎಸ್. ಜಾನಕಿಯವರ ಅಗಲುವಿಕೆ ಸಾಂಸ್ಕೃತಿಕ ಲೋಕಕ್ಕೆ ಆದ ಬಹುದೊಡ್ಡ ನಷ್ಟವಾಗಿದೆ ಎಂದು ಸುತ್ತೂರು ಮಠದ ಪೀಠಾಧಿಪತಿಗಳಾದ ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮೀಜಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೂಲತಃ ಆಂಧ್ರಪ್ರದೇಶದವರಾದ ಶ್ರೀಮತಿ ಜಾನಕಿಯವರು ಕನ್ನಡ, ತಮಿಳು, ಹಿಂದಿ, ತೆಲುಗು, ಮಲಯಾಳಂ ಮೊದಲಾದ ದೇಶ ವಿದೇಶಗಳ ಹಲವಾರು ಭಾಷೆಗಳ ಸುಮಾರು 48,000ಕ್ಕೂ ಹೆಚ್ಚು ಗೀತೆಗಳಿಗೆ ಅವರ ಸುಮಧುರ ಕಂಠದಿAದ ಜೀವ ತುಂಬಿದ ಅಪ್ರತಿಮ ಕಲಾವಿದರು ಎಂದು…

Read More

ವಿದ್ಯಾರ್ಥಿಗಳು ತಂದೆ ತಾಯಿ, ಗುರು, ಸಮಾಜದ ಋಣವನ್ನು ತೀರಿಸುವ ಕೆಲಸ ಮಾಡಬೇಕು:  ಪ್ರಾಂಶುಪಾಲ ನಾಗರಾಜ್ ರಾವ್ ಕಲ್ಕಟ್ಟೆ

ಪಿರಿಯಾಪಟ್ಟಣ : ವಿದ್ಯಾರ್ಥಿಗಳು ತಂದೆ ತಾಯಿ ಹಾಗೂ ಗುರುಗಳ ಋಣದ ಜೊತೆಗೆ ಸಮಾಜದ ಋಣವನ್ನು ತೀರಿಸುವ ಕೆಲಸ ಮಾಡಬೇಕು ಎಂದು ಕಳಸಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನಾಗರಾಜ್ ರಾವ್ ಕಲ್ಕಟ್ಟೆ ತಿಳಿಸಿದರು   ತಾಲೂಕಿನ ಬೆಟ್ಟದಪುರದ ಎಸ್ಎಂಎಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ 2ನೇ ಘಟಕ ಉದ್ಘಾಟನೆ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಉಪನ್ಯಾಸಕರು ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಯಾಗಿ ರೂಪಿಸುವಲ್ಲಿ ಹೆಚ್ಚಿನ ಶ್ರಮ ವಹಿಸುತ್ತಾರೆ. ಆ…

Read More

ಪುಸ್ತಕಗಳಲ್ಲಿ ಒಂದು ತಲೆಮಾರಿನ ಅನುಭವ ಮತ್ತು ಜ್ಞಾನ ಹುದುಗಿರುತ್ತದೆ

ಮೈಸೂರು : ‘ಹೆತ್ತವರು ತಮ್ಮ ಮಕ್ಕಳಿಗೆ ಆಸ್ತಿ ಮತ್ತು ಆಭರಣ ಸಂಗ್ರಹಿಸಿಕೊಡುವದಕ್ಕೆ ನೀಡುವಷ್ಟೇ ಹೆಚ್ಚಿನ ಮುತುವರ್ಜಿಯನ್ನು, ಅವರಿಗೆ ಸಾಹಿತ್ಯದ ಉತ್ತಮ ಪುಸ್ತಕಗಳನ್ನು ಸಂಗ್ರಹಿಸಿಕೊಡುವ ದಿಕ್ಕಿನಲ್ಲಿಯೂ ವಹಿಸಬೇಕಾದ ಅಗತ್ಯ ತುಂಬಾ ಇದೆ ಎಂದು ಸಾಹಿತಿ ಟಿ. ಸತೀಶ್ ಜವರೇಗೌಡ ಹೇಳಿದರು.ನಗರದ ಶ್ರೀರಾಂಪುರದಲ್ಲಿರುವ ಕಾಲೇಜಿನ ಸಭಾಂಗಣದಲ್ಲಿ ದೀಪ್ತಿ ಸಾಂಸ್ಕöÈತಿಕ ವೇದಿಕೆ ಹಾಗೂ ಗೋವಿಂದರಾವ್ ಮೆಮೋರಿಯಲ್ ಪಿಯು ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ವತಿಯಿಂದ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ‘ಪುಸ್ತಕಗಳಲ್ಲಿ ಒಂದು ತಲೆಮಾರಿನ…

Read More

ಆಷಾಢ ಮಾಸದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದ ಮೆಟ್ಟಲು ಹಾಗೂ ಗೋಪುರ ಗಳಿಗೆ ಸುಣ್ಣ- ಬಣ್ಣ

ಮೈಸೂರು: ಆಷಾಢ ಮಾಸದ ಹಿನ್ನೆಲೆಯಲ್ಲಿ ಲಕ್ಷಾಂತರ ಜನರು ನಗರದ ಚಾಮುಂಡಿಬೆಟ್ಟದ ಮೆಟ್ಟಲುಗಳ ಮೂಲಕ ತಾಯಿ ಚಾಮುಂಡೇಶ್ವರಿಯ ದರ್ಶನ ಆಗಮಿಸುವ ಹಿನ್ನೆಲೆಯಲ್ಲಿ ಮೆಟ್ಟಲುಗಳು ಹಾಗೂ ಗೋಪುರಗಳು ಸುಂದರ ಕಾಣಲು ಶ್ರೀ ಚಾಮುಂಡೇಶ್ವರಿ ಅರಳಿಕಟ್ಟೆ ಸೇವಾ ಟ್ರಸ್ಟ್ ಯುವಕರು ಮೆಟ್ಟಲುಗಳಿಗೆ ಹಾಗೂ ಗೋಪುರಗಳಿಗೆ ಸುಣ್ಣ, ಬಣ್ಣ ಬಳಿಯುವ ಮೂಲಕ ಸ್ವಚ್ಛಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದಅಧ್ಯಕ್ಷ ಯದುನಂದನ್ ಜಿ, ಭಕ್ತಾದಿಗಳು ಸ್ವಚ್ಛತೆ ಕಾಪಾಡಲು ಮನವಿ ಮಾಡಿದರು, ಸ್ನೇಹಿತರಲ್ಲ ಸೇರಿತಾಯಿ ಚಾಮುಂಡೇಶ್ವರಿ ಅಮ್ಮನ ಸೇವೆ ಮಾಡುವ ಮೂಲಕ ಒಂದು ಅಳಿಲು ಸೇವೆ ಮಾಡುತ್ತಿದ್ದೇವೆ…

Read More

ಭಗವಾನ್ ರಮಣ ಮಹರ್ಷಿಗಳ 146ನೇ ಜಯಂತಿ ಆಚರಣೆ

*ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಧನಸಹಾಯ, ಪುಸ್ತಕ ಮತ್ತು ಲೇಖನಿ ಸಾಮಗ್ರಿಗಳು ವಿತರಣೆಮೈಸೂರು: ಇಲ್ಲಿನ ಕುವೆಂಪು ನಗರದ ಆದಿಚುಂಚನಗಿರಿ ರಸ್ತೆಯಲ್ಲಿರುವ ಶ್ರೀ ರಮಣ ಜ್ಞಾನ ಕೇಂದ್ರ ಟ್ರಸ್ಟ್ ಆವರಣದಲ್ಲಿ ಭಗವಾನ್ ರಮಣ ಮಹರ್ಷಿಗಳ 146 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಪೂಜೆ ಮತ್ತು ಪುಷ್ಪ ನಮನ ಸಲ್ಲಿಸಲಾಯಿತು. ನಂತರ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 1 ಲಕ್ಷ ರೂ ವರೆಗೂ ಧನಸಹಾಯ ಮಾಡಿದರು ಹಾಗೂ 100ಕ್ಕೂ ಹೆಚ್ಚು ಮಕ್ಕಳಿಗೆ ಪುಸ್ತಕ ಮತ್ತು ಲೇಖನಿ ಸಾಮಗ್ರಿಗಳು ವಿತರಿಸಲಾಯಿತು.ಈ ಸಂದರ್ಭದಲ್ಲಿ ಮಾನಸ…

Read More