Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಅಟಲ್ ಪಿಂಚಣಿ ಯೋಜನೆ ಕಾರ್ಯಾಗಾರ ಯಶಸ್ವಿ

ಮೈಸೂರು: ಅಟಲ್ ಪಿಂಚಣಿ ಯೋಜನೆ(ಎಪಿವೈ) ಪ್ರಚಾರ ಮತ್ತು ರಾಜ್ಯಮಟ್ಟದ ಕಾರ್ಯತಂತ್ರ ಪರಿಶೀಲನಾ ಸಭೆ ಸಂಪನ್ನವಾಯಿತು.ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ(ಪಿಎಫ್‌ಆರ್ಡಿಎ), ಕರ್ನಾಟಕ ರಾಜ್ಯಮಟ್ಟದ ಬ್ಯಾಂಕರ್ಗಳ ಸಮಿತಿ (ಎಸ್‌ಎಲ್ಬಿಸಿ) ಮತ್ತು ಲೀಡ್ ಬ್ಯಾಂಕ್(ಭಾರತೀಯ ಸ್ಟೇಟ್ ಬ್ಯಾಂಕ್) ಸಂಯುಕ್ತಾಶ್ರಯದಲ್ಲಿ ಖಾಸಗಿ ಹೋಟೆಲ್‌ನಲ್ಲಿ ಅಟಲ್ ಪೆನ್ಶನ್ ಯೋಜನೆ ಕುರಿತು ಒಂದು ದಿನದ ಕಾರ್ಯಾಗಾರ ಏರ್ಪಡಿಸಲಾಗಿತ್ತು.ವಿವಿಧ ಬ್ಯಾಂಕ್ ಗಳ ಪ್ರತಿನಿಧಿಗಳು ಹಾಗೂ ರಾಜ್ಯದ ಎಲ್ಲಾ ಜಿಲ್ಲೆಗಳ ಲೀಡ್ ಬ್ಯಾಂಕ್ ವ್ಯವಸ್ಥಾಪಕರ ಕಾರ್ಯಕ್ಷಮತೆ ಕುರಿತು ಸುದೀರ್ಘ ಸಂವಾದ ಮತ್ತು ಪ್ರಗತಿ ಪರಿಶೀಲನೆ ನಡೆಯಿತು.ಕರ್ನಾಟಕ…

Read More

ರಾಜ್ಯ ಮಟ್ಟದ ಯೋಗಾಸನ ಚಾಂಪಿಯನ್‌ಶಿಪ್‌ನಲ್ಲಿ ವಿಜಯ ವಿಠಲ ವಿದ್ಯಾಶಾಲೆಯ ವಿದ್ಯಾರ್ಥಿಗಳ ಸಾಧನೆ

ಮೈಸೂರು; 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಜಿ.ಕೆ. ವಿನ್ಯಾಸ ಯೋಗ ಕೇಂದ್ರವು ಶ್ರೀ ಕೃಷ್ಣ ಯೋಗಸ್ ಸಹಯೋಗದೊಂದಿಗೆ ಆಯೋಜಿಸಿದ್ದ ರಾಜ್ಯ ಶಾಲಾ ಮತ್ತು ಕಾಲೇಜು ಮಟ್ಟದ ಯೋಗಾಸನ ಚಾಂಪಿಯನ್‌ಶಿಪ್-2026 ರಲ್ಲಿ ವಿಜಯ ವಿಠಲ ವಿದ್ಯಾಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ.ಈ ಚಾಂಪಿಯನ್‌ಶಿಪ್‌ನಲ್ಲಿ ವಿಜಯ ವಿಠಲ ವಿದ್ಯಾಶಾಲೆಯ ವಿದ್ಯಾರ್ಥಿಗಳು ಶ್ಲಾಘನೀಯ ಸ್ಥಾನಗಳನ್ನು ಗಳಿಸಿದ್ದಾರೆ. ಲೇಖನಾ ಎನ್. ದ್ವಿತೀಯ ಸ್ಥಾನ, ಕನಿಷ್ಕ ತೃತೀಯ ಸ್ಥಾನ, ಕನ್ನಿಕಾ ವೈ.ಎ. ಮತ್ತು ಅದಿತಿ ಸಿ. ಚತುರ್ಥ ಸ್ಥಾನ ಹಾಗೂ ಪಾವನಿ ಗೌಡ…

Read More

ಜೆಎಸ್‌ಎಸ್ ಮೈಸೂರು ಅರ್ಬನ್ ಹಾತ್‌ನಲ್ಲಿ ಗುಜರಾತ್ ಕರಕುಶಲ ಉತ್ಸವಕ್ಕೆ ಭರ್ಜರಿ ಸ್ಪಂದನೆ

• 100ಕ್ಕೂ ಹೆಚ್ಚು ಗುಜರಾತ್ ಕರಕುಶಲ ಕಲಾವಿದರ ವೈವಿಧ್ಯಮಯ ಕಲಾಕೃತಿಗಳು ಮೈಸೂರು: ನಗರದ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿರುವ ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ ನಡೆಯುತ್ತಿರುವ ಗುಜರಾತ್ ಕರಕುಶಲ ಉತ್ಸವ 2026ಕ್ಕೆ ಸಾರ್ವಜನಿಕರಿಂದ ಭರ್ಜರಿ ಸ್ಪಂದನೆ ದೊರೆಯುತ್ತಿದ್ದು, ಉತ್ಸವ ಎಲ್ಲರ ಕಣ್ಮನ ಸೆಳೆಯುತ್ತಿದೆ.ಜುಲೈ 3ರಂದು ಆರಂಭಗೊAಡಿರುವ ಈ ಉತ್ಸವವು ಜುಲೈ 12ರವರೆಗೆ ನಡೆಯಲಿದ್ದು, ಗುಜರಾತ್‌ನ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ 100ಕ್ಕೂ ಹೆಚ್ಚು ಕರಕುಶಲ ಕಲಾವಿದರು ತಮ್ಮ ಅಪರೂಪದ ಕೈಮಗ್ಗ, ಕರಕುಶಲ ಹಾಗೂ ಸಾಂಪ್ರದಾಯಿಕ ಉತ್ಪನ್ನಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕೆ ಇಟ್ಟಿದ್ದಾರೆ.ಉತ್ಸವದಲ್ಲಿ…

Read More

ಕೆಎಸ್ಒಯು ಪಿರಿಯಾಪಟ್ಟಣ ಪ್ರಾದೇಶಿಕ ಕೇಂದ್ರದಲ್ಲಿ ವಿವಿಧ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

ಪಿರಿಯಾಪಟ್ಟಣ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ಸರ್ಟಿಫಿಕೇಟ್ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಾದೇಶಿಕ ನಿರ್ದೇಶಕ ಅರುಣ್ ಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ 2026-27 ನೇ ಸಾಲಿನಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಲ್ಲಿ ದೂರ ಶಿಕ್ಷಣದಲ್ಲಿ ಪಡೆಯಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪಿರಿಯಾಪಟ್ಟಣ ಪ್ರಾದೇಶಿಕ ಕೇಂದ್ರದಲ್ಲಿ ವಿವಿಧ ಯುಜಿ, ಪಿಜಿ ಕೋರ್ಸ್‌ಗಳಾದ ಎಂ.ಎ., ಎಂ.ಕಾಂ, ಎಂ.ಬಿ.ಎ., ಎಂ.ಸಿ.ಎ.,…

Read More

ತೆಂಗು, ಅಡಿಕೆ ಮತ್ತು ಬಾಳೆ ಬೆಳೆಗಳ ನಿರ್ವಹಣೆ’’ ಕುರಿತು ತರಬೇತಿ ಕಾರ್ಯಕ್ರಮ

ಮೈಸೂರು: ಜಿಲ್ಲಾ ಕೃಷಿ ತರಬೇತಿ ಕೇಂದ್ರ, ನಾಗನಹಳ್ಳಿ, ವತಿಯಿಂದ 2026-27ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಮೈಸೂರು ತಾಲ್ಲೂಕು ಇಲವಾಲ ಹೋಬಳಿಯ ದಡದಕಲ್ಲಹಳ್ಳಿ ಗ್ರಾಮದಲ್ಲಿ “ತೆಂಗು, ಅಡಿಕೆ ಮತ್ತು ಬಾಳೆ ಬೆಳೆಗಳ ನಿರ್ವಹಣೆ’’ ಕುರಿತು ಆಯೋಜಿಸಿದ್ದ ಒಂದು ದಿನದ ಹೊರಾಂಗಣ ತರಬೇತಿಗೆ ಕಾರ್ಯಕ್ರಮವನ್ನು ಅಧಿಕಾರಿಗಳು ಮತ್ತು ರೈತರು ಉದ್ಘಾಟಿಸಿದರು.ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಕೃಷಿ ಅಧಿಕಾರಿ ಮಂಜುಳ ಎಂ.ಬಿ. ಪ್ರಾಸ್ತಾವಿಕ ನುಡಿಯಲ್ಲಿ ಮಾತನಾಡಿ, ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ನೆಡೆಯುವ ತರಬೇತಿಗಳಲ್ಲಿ ರೈತರು ಹೆಚ್ಚು ಭಾಗವಹಿಸಿ,…

Read More

ಅಮೀರ್ ಖಾನ್ ಚಿತ್ರಗಳನ್ನು ಬಹಿಷ್ಕರಿಸಿ ಡಾ. ಹೇಮ ನಂದೀಶ್ ಒತ್ತಾಯ

ಮೈಸೂರು: ಹಿಂದೂ ಮಹಿಳೆಯರನ್ನು ಮದುವೆಚಿiÀiÁಗಿ, ಮತ್ತೆ ಕೆಲ ವರ್ಷಗಳ ನಂತರ ತಲಾಕ್ ನೀಡುವುದರೊಂದಿಗೆ, ಹಿಂದೂ ಹೆಣ್ಣುಮಕ್ಕಳನ್ನು ಸಂಪೂರ್ಣವಾಗಿ ದುರುಪಯೋಗ ಪಡಿಸಿಕೊಳ್ಳುತ್ತಿರುವ ಚಿತ್ರನಟ ಅಮೀರ್ ಖಾನ್ ಚಿತ್ರಗಳನ್ನು ಕೂಡಲೇ ಬಹಿಷ್ಕರಿಸಬೇಕು ಎಂದು ಹಿಂದೂ ಪರ ಮುಖಂಡರಾದ ಡಾ. ಹೇಮಾನಂದೀಶ್ ಒತ್ತಾಯಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ ಕಾಯ್ದೆ ಏಕೆ ಜಾರಿಯಾಗಬೇಕು ಎಂಬುದಕ್ಕೆ ವ್ಯವಸ್ಥಿತವಾಗಿ ಲವ್ ಜಿಹಾದ್ ಎಸಗುತ್ತಿರುವ ಆಮೀರ್ ಖಾನ್‌ನೇ ಒಂದು ದೊಡ್ಡ ಉದಾಹರಣೆ. ತಮ್ಮ ಇಸ್ಲಾಮಿನ ಕಾನೂನನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವುದು ಕಂಡು…

Read More

65 ಲಕ್ಷರೂಗಳ ಯುಜಿಡಿ ಕಾಮಗಾರಿಗೆ ಶಾಸಕ ಟಿ.ಎಸ್ ಶ್ರೀವತ್ಸ ಚಾಲನೆ

ಮೈಸೂರು; ಕೆಆರ್ ಕ್ಷೇತ್ರದ ವಾರ್ಡ್ ನಂಬರ್ 62 ವ್ಯಾಪ್ತಿಯಲ್ಲಿ ಬರುವ ದೇವರಾಜ ಅರಸ್ ಕಾಲೋನಿ, ಹೊಸೂರು ಹಾಗೂ ನಾಚನಹಳ್ಳಿಪಾಳ್ಯ ಈ ಭಾಗಗಳಲ್ಲಿ ಸುಮಾರು 65 ಲಕ್ಷಗಳ ಯುಜಿಡಿ ಕಾಮಗಾರಿಗೆ ಶಾಸಕ ಟಿ.ಎಸ್ ಶ್ರೀವತ್ಸ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ನಗರ ಪಾಲಿಕೆಯ ಮಾಜಿ ಸದಸ್ಯೆ ಶಾಂತಮ್ಮ ವಡಿವೇಲು, ವಾರ್ಡ್ ಅಧ್ಯಕ್ಷ ರಾಘವೇಂದ್ರ ಎಂ. ಬಿಜೆಪಿ ಮುಖಂಡರಾದ ಎಂ ವಡಿವೇಲು, ಚಂದ್ರಣ್ಣ. ಪ್ರದೀಪ್ ಕುಮಾರ್, ಕಿಶೋರ್, ಮಹಾದೇವ, ನಾಗರಾಜು, ನವೀಂದ್ರ, ನವೀನ್ ಕುಮಾರ್, ಸಿದ್ದರಾಜು, ಮಹದೇವ,…

Read More

ಇಲವಾಲದ ಕರ್ನಾಟಕ ಪಬ್ಲಿಕ್ ಶಾಲೆಗೆ ಮಿನಿ ವಿಜ್ಞಾನ ಪ್ರಯೋಗಾಲಯ, ಡಿಜಿಟಲ್ ಸ್ಮಾರ್ಟ್ ಬೋರ್ಡ್ ಹಾಗೂ ಶೈಕ್ಷಣಿಕ ಕಿಟ್‌ಗಳ ಕೊಡುಗೆ

ಮೈಸೂರು: ಸಮರ್ಥನಂ ಟ್ರಸ್ಟ್ ಫಾರ್ ದಿ ಡಿಸೇಬಲ್ಡ್ ಹಾಗೂ ಐ.ಐ.ಎಫ್.ಎಲ್. ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ, ಸಿ.ಎಸ್.ಆರ್. ಯೋಜನೆಯಡಿ ಮೈಸೂರಿನ ಇಲವಾಲದ ಕರ್ನಾಟಕ ಪಬ್ಲಿಕ್ ಶಾಲೆಗೆ ಮಿನಿ ವಿಜ್ಞಾನ ಪ್ರಯೋಗಾಲಯ, ಡಿಜಿಟಲ್ ಸ್ಮಾರ್ಟ್ ಬೋರ್ಡ್ ಹಾಗೂ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಿಟ್‌ಗಳನ್ನು ಕೊಡುಗೆಯಾಗಿ ನೀಡಿ ಶಾಲೆಯ ಶೈಕ್ಷಣಿಕ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸಲಾಯಿತು.ಕಾರ್ಯಕ್ರಮದ ಶಾಲೆಯ ಪ್ರಭಾರ ಉಪಪ್ರಾಂಶುಪಾಲ ಶಂಕರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಮರ್ಥನಂ ಟ್ರಸ್ಟ್ ಹಾಗೂ ಐ.ಐ.ಎಫ್.ಎಲ್. ಫೌಂಡೇಶನ್ ವತಿಯಿಂದ ದೊರೆತಿರುವ ಮಿನಿ ವಿಜ್ಞಾನ ಪ್ರಯೋಗಾಲಯ ಮತ್ತು ಡಿಜಿಟಲ್ ಸ್ಮಾರ್ಟ್ ಬೋರ್ಡ್…

Read More

ಕೆ ಆರ್ ಕ್ಷೇತ್ರದಲ್ಲಿ ಗೋ ಹತ್ಯೆಗೆ ಅವಕಾಶ ಇಲ್ಲ ; ಶಾಸಕ ಟಿ.ಎಸ್.ಶ್ರೀವತ್ಸ

ಮೈಸೂರು; ಕೆ ಆರ್ ಕ್ಷೇತ್ರದಲ್ಲಿ ಗೋ ಹತ್ಯೆಗೆ ಅವಕಾಶ ಇಲ್ಲ ಎಂದು ಶಾಸಕ ಟಿ.ಎಸ್. ಶ್ರೀವತ್ಸ ಹೇಳಿದರು. ಮೈಸೂರಿನ ನಾಚನಹಳ್ಳಿ ಪಾಳ್ಯದ ಪಕ್ಕದಲ್ಲಿರುವ ಪ್ರಕೃತಿ ಬಡಾವಣೆಯಲ್ಲಿ ಕಡೆದು ಹಾಕಿದ್ದ ಹಸುವಿನ ಅವಶೇಷಗಳನ್ನು ಹಾಕಿದ್ದ ಸ್ಥಳಕ್ಕೆ ಭೇಟಿ ನೀಡಿ ಸ್ಥಳಿಯ ಪೊಲೀಸ್ ನಿರೀಕ್ಷಕ ಯೋಗಾಂಜನಪ್ಪ ರಿಂದ ಮಾಹಿತಿಯನ್ನು ಪಡೆದರು. ರಾತ್ರಿ 10:30 ರಲ್ಲಿ ಹಸುವಿನ ಕತ್ತಿನ ಭಾಗವನ್ನು ಈ ಸ್ಥಳಕ್ಕೆ ತಂದು ಬಿಸಾಡಿರುತ್ತಾರೆ. ಇದು ಹೊರಗಿನಿಂದ ತಂದು ಬಿಸಾಡಿರಬಹುದು ಅಥವಾ ಅಕ್ಕಪಕ್ಕದವರು ಬಿಸಾಡಿರಬಹುದು. ಈಗಾಗಲೇ ಈ ಸಂಬAಧ ಎಫ್.ಐ.ಆರ್…

Read More

ಶ್ರಮದಾನ ಮೂಲಕ ಪ್ಲಾಸ್ಟಿಕ್ ಮುಕ್ತ ಚಾಮುಂಡಿಬೆಟ್ಟಕ್ಕೆ ಜಾಗೃತಿ

ಮೈಸೂರು: ಆಷಾಢ ಮಾಸದ ಶುಕ್ರವಾರಗಳು, ಚಾಮುಂಡೇಶ್ವರಿಯ ಜಯಂತಿ ಪ್ರಯುಕ್ತ ಲಕ್ಷಾಂತರ ಮಂದಿ ಭಕ್ತರು ಚಾಮುಂಡಿಬೆಟ್ಟಕ್ಕೆ ತಾಯಿ ಚಾಮುಂಡೇಶ್ವರಿಯ ದರ್ಶನಕ್ಕೆ ಬರುವ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮೈಸೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಿ.ಕೃಷ್ಣ ಅವರ ನೇತೃತ್ವದಲ್ಲಿ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಸಿಬ್ಬಂದಿಗಳು ಗುರುವಾರ ಶ್ರಮದಾನ ಮಾಡುವ ಮೂಲಕ ಸ್ವಚ್ಛತಾ ಕಾರ್ಯ ನೆರವೇರಿಸಿದರು.ತಾಲ್ಲೂಕು ಪಂಚಾಯಿತಿ ಹಾಗೂ ಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿಯ ಸಹಯೋಗದೊಂದಿಗೆ ಇಂದು ಮುಂಜಾನೆ ಬೆಟ್ಟದ ಪಾದದಿಂದ ದೇವಾಲಯದವರೆಗೂ ಮೆಟ್ಟಿಲುಗಳನ್ನು…

Read More