ಹಸು ಸಾಕಾಣಿಕೆ ಮತ್ತು ಗುಣಮಟ್ಟದ ಹಾಲು ಉತ್ಪಾದನೆ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ
ಮೈಸೂರು: ಹಾರ್ಟ್ ಸಂಸ್ಥೆ ವತಿಯಿಂದ ರೈತರು, ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು, ಯುವಕರು ಹಾಗೂ ಹೈನುಗಾರಿಕೆ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರಿಗಾಗಿ “ಹಸು ಸಾಕಾಣಿಕೆ ಮತ್ತು ಗುಣಮಟ್ಟದ ಹಾಲು ಉತ್ಪಾದನೆ” ವಿಷಯದ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.ಈ ತರಬೇತಿ ಕಾರ್ಯಕ್ರಮವು ಜೂನ್ 14ರಂದು ಬೆಳಿಗ್ಗೆ 10 ರಿಂದ ಸಂಜೆ 4.00 ಗಂಟೆಯವರೆಗೆ ಮೈಸೂರು ತಾಲೂಕಿನ , ಕೋಟೆಹುಂಡಿಯಲ್ಲಿರುವ ಹಾರ್ಟ್ ಸಂಸ್ಥೆಯಲ್ಲಿ ನಡೆಯಲಿದೆ.ಕಾರ್ಯಾಗಾರದಲ್ಲಿ ಪಶುಸಂಗೋಪನಾ ಮತ್ತು ಹೈನುಗಾರಿಕೆ ತಜ್ಞರು ಭಾಗವಹಿಸಿ ಹಸುಗಳ ವೈಜ್ಞಾನಿಕ ಸಾಕಾಣಿಕೆ, ಉತ್ತಮ ತಳಿಗಳ…