Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಆಧ್ಯಾತ್ಮಿಕ ಮನಸ್ಸಿಗೆ ನೆಮ್ಮದಿ ಸಿಗಲಿದೆ ತಹಸೀಲ್ದಾರ್ ಬಿ ಗಿರಿಜಾ.

ವರದಿ ಜಿ ಬಂಗಾರು ಚಾಮರಾಜನಗರ ;   ದೇವಸ್ಥಾನಗಳಿಗ ಭೇಟಿ ನೀಡಿ ದೇವರ ದರ್ಶನ ಪಡೆದರೆ ಮನಸ್ಸಿಗೆ ನೆಮ್ಮದಿ ಸಿಗಲಿದೆ ಎಂದು ತಹಶೀಲ್ದಾರ್ ಬಿ ಗಿರಿಜಾ ತಿಳಿಸಿದರು ಇತಿಹಾಸ ಪ್ರಸಿದ್ಧವಾಗಿರುವ ಶ್ರೀ ಚಾಮರಾಜೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಗಿರಿಜಾ ಕಲ್ಯಾಣ ಮಹೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಆಧ್ಯಾತ್ಮಿಕ ದಿಂದ ಮನಸ್ಸಿಗೆ ಸುಖ ಶಾಂತಿ ನೆಮ್ಮದಿ ಸಿಗಲಿದೆ ಜೂನ್ 18ರಿಂದ. ಜೂನ್ 23 ವರೆಗೆ ಧಾರ್ಮಿಕ ಕಾರ್ಯಕ್ರಮಗಳು ಸಾಂಸ್ಕೃತಿಕ ಕಾರ್ಯಕ್ರಮಗಳು ವಿಶೇಷ ಹೋಮ ಪೂಜಾ ಕಾರ್ಯಕ್ರಮಗಳು ನಡೆಯಲಿದೆ ಭಕ್ತಾದಿಗಳು…

Read More

ಧರ್ಮೇಂದ್ರ ಪ್ರಧಾನ್ ಅವರ ಅಣುಕು ಶವ ಯಾತ್ರೆ ನಡೆಸಿ ನೀಟ್ ಪರೀಕ್ಷೆ ವಿರುದ್ಧ ಪ್ರತಿಭಟನೆ

ಮೈಸೂರು: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಖಂಡಿಸಿ, ಕಾಂಗ್ರೆಸ್ ಮಾಜಿ ಶಾಸಕ ಸೋಮಶೇಖರ್ ನೇತೃತ್ವದಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪ್ರತಿಕೃತಿಯ ಅಣುಕು ಶವಯಾತ್ರೆ ನಡೆಸಿ ಪ್ರತಿಭಟನೆ ನಡೆಸಲಾಯಿತು.ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಸಚಿವರ ಅಣಕು ಶವಯಾತ್ರೆ ನಡೆಸಿದರು, ಬಳಿಕ ಪ್ರತಿಕೃತಿಗೆ ಬೆಂಕಿ ಹಚ್ಚಿ ಸುಟ್ಟು ಹಾಕಿ ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಎಂ ಕೆ ಸೋಮಶೇಖರ್ , ದೇಶದಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳ…

Read More

ಕೇವಲ 27 ದಿನಗಳಲ್ಲಿ ಮಾದಪ್ಪನಿಗೆ ಭಕ್ತರಿಂದ ಹರಿದು ಬಂತು ದಾಖಲೆಯ 2,73 ಕೋಟಿ ರೂ

ಚಾಮರಾಜನಗರ; ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ ಮತ್ತೆ ಕೋಟಿ ಕೋಟಿ ಹಣ ಸಂಗ್ರಹವಾಗಿದೆ. ವೀಕೆಂಡ್ ಹಾಗೂ ಅಮಾವಾಸ್ಯೆ ಹಿನ್ನೆಲೆಯಲ್ಲಿ ಭಕ್ತರ ಹರಿವು ಹೆಚ್ಚಾಗಿದ್ದು, ಕೇವಲ 27 ದಿನಗಳಲ್ಲಿ ದಾಖಲೆಯ 2,73,57,105 ರೂಪಾಯಿ ನಗದು ಸಂಗ್ರಹವಾಗಿದೆ.ದೇವಸ್ಥಾನದ ಹುಂಡಿಗಳನ್ನು ತೆರೆದು ಅದರ ಎಣಿಕೆ ಕಾರ್ಯವನ್ನು ನಡೆಸಿದಾಗ ಹಣದ ಜೊತೆಗೆ 44 ಗ್ರಾಂ ಚಿನ್ನ ಹಾಗೂ 977 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆಯಾಗಿ ಸಮರ್ಪಿಸಿದ್ದಾರೆ. ವಿಶೇಷವೆಂದರೆ, ಎಣಿಕೆ ವೇಳೆ ಏಳು ವಿದೇಶಿ ನೋಟುಗಳು ಹಾಗೂ…

Read More

ಮಣ್ಣಿನ ಆರೋಗ್ಯವನ್ನು ಕಾಪಾಡುವುದರ ಮೂಲಕ ಬೆಳೆಗಳ ಉತ್ಪಾದಕತೆ ಹಾಗೂ ಗುಣಮಟ್ಟವನ್ನು ಹೆಚ್ಚಿಸಬಹುದು

ಮೈಸೂರು ಹಾಗೂ ಹೆಚ್.ಡಿ. ಕೋಟೆತಾಲೂಕಿನಲ್ಲಿ ಖೇತ್ ಬಚಾವ್ ಅಭಿಯಾನ ಕಾರ್ಯಕ್ರಮ ಮೈಸೂರು; ಜಿಲ್ಲೆಯ ಎಚ್.ಡಿಕೋಟೆ ತಾಲ್ಲೂಕಿನ ಕಂದೇಗಾಲ ಗ್ರಾಮ ಹಾಗೂ ಮೈಸೂರು ತಾಲ್ಲೂಕಿನ ಬರಡನಪುರ ಗ್ರಾಮದಲ್ಲಿ ಸುತ್ತೂರಿನ ಐಸಿಎಆರ್–ಜೆಎಸ್‌ಎಸ್ ಕೃಷಿವಿಜ್ಞಾನ ಕೇಂದ್ರವು ಮೈಸೂರಿನ ಕೃಷಿ ಇಲಾಖೆ ಸಹಯೋಗದೊಂದಿಗೆ“ಖೇತ್‌ಬಚಾವೋಅಭಿಯಾನ”ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರಾದ ಡಾ. ಜ್ಞಾನೇಶ್ ಬಿ.ಎನ್. ರವರು “ಖೇತ್ ಬಚಾವೋ ಅಭಿಯಾನ”ದ ಮಹತ್ವವನ್ನು ವಿವರಿಸಿ, ಕೃಷಿ ಭೂಮಿ ಹಾಗೂ ಮಣ್ಣಿನ ಪುನಶ್ಚೇತನದ ಅಗತ್ಯತೆಯನ್ನು ತಿಳಿಸಿದರು. ಮಣ್ಣಿನ ಆರೋಗ್ಯವನ್ನು ಕಾಪಾಡುವುದರ ಮೂಲಕ ಬೆಳೆಗಳ ಉತ್ಪಾದಕತೆ ಹಾಗೂ ಗುಣಮಟ್ಟವನ್ನು…

Read More

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಹೋಂಗಾರ್ಡ್ ಸಾವು, ಮತ್ತೊಬ್ಬನಿಗೆ ಗಾಯ

ಹುಣಸೂರು; ರಾತ್ರಿ ಪಾಳಿ ಕರ್ತವ್ಯ ನಿರ್ವಹಿಸಿ ಮನೆಗೆ ವಾಪಸ್ ಅಗುವ ವೇಳೆ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ವಿದ್ಯುತ್‌ಕಂಬಕ್ಕೆ ಡಿಕ್ಕಿ ಹೊಡೆದು ಹೋಂಗಾರ್ಡ್ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ಸೇರಿರುವ ಘಟನೆ ಹುಣಸೂರು ತಾಲೂಕಿನ ವಡೇರಹೊಸಹಳ್ಳಿಯಲ್ಲಿ ಗುರುವಾರ ಮುಂಜಾನೆ ನಡೆದಿದೆ.ಹುಣಸೂರು ತಾಲೂಕಿನ ವಡೇರಹೊಸಹಳ್ಳಿಯ ದಾಸೇಗೌಡರ ಪುತ್ರ ಹುಣಸೂರು ಘಟಕದ ಹೊಂಗಾರ್ಡ್ ವಿ.ಡಿ. ಹರೀಶ (33) ಸಾವನ್ನಪ್ಪಿದವರು . ಇವರಿಗೆ ತಂದೆ-ತಾಯಿ. ಪತ್ನಿ. ಒಬ್ಬ ಮಗ ಇದ್ದಾನೆ. ಬೈಕ್ ಸವಾರ ಪ್ರಕಾಶ್ ಗಾಯಗೊಂಡು ಬಿಳಿಕೆರೆ ಸೂರ್ಯ…

Read More

ವಿದ್ಯುತ್ ಇಲಾಖೆಯನ್ನು ಖಾಸಗಿಕರಣಗೊಳಿಸದಿರಲು ರೈತ ಸಂಘದ ರೈತ ಪರ್ವ ಒತ್ತಾಯ

ಮೈಸೂರು; ವಿದ್ಯುತ್ ಇಲಾಖೆಯನ್ನು ಖಾಸಗಿಕರಣಗೊಳಿಸಬಾರದು ರೈತ ಸಂಘದ ರೈತ ಪರ್ವದ ರಾಜ್ಯಾಧ್ಯಕ್ಷ ಅರುಣ್ ಕುಮಾರ್ ಟಿ.ವಿ. ಒತ್ತಾಯಿಸಿದರು.ಗುರುವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯುತ್ ವಲಯವನ್ನು ಖಾಸಾಗೀಕರಣ ಗೊಳಿಸುವ ಹಾಗೂ ಟಾಟಾ ವಿದ್ಯುತ್ ಕಂಪನಿಗೆ ವಿದ್ಯುತ್ ವಿತರಣ ಜವಾಬ್ದಾರಿಯನ್ನು ಕರ್ನಾಟಕ ರಾಜ್ಯ ರೈತ ಸಂಘ ರೈತ ಪರ್ವ ಸಂಘಟನೆಯು ವಿರೋಧಿಸುತ್ತದೆ. ವಿದ್ಯುತ್ ಖಾಸಾಗಿಕರಣದಿಂದ ಜನಸಾಮಾನ್ಯರಿಗೆ ಹಾಗೂ ರೈತಾಪಿ ವರ್ಗದವರಿಗೆ ಅರ್ಥಿಕ ಸಂಕಷ್ಟಕ್ಕೆ ಎಡೆ ಮಾಡಿಕೊಡುತ್ತದೆ. ಉಚಿತ ಪಂಪ್‌ಸೆಟ್ ವಿದ್ಯುತ್ ಗೆ…

Read More

ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಆತಂಕ ಬೇಡ: ತಾಲ್ಲೂಕು ಅಧ್ಯಕ್ಷ ಗುರುಸ್ವಾಮಿ

ಮೈಸೂರು: ಬಡವರಿಗೆ ಅನುಕೂಲವಾಗಲೆಂದು ಗ್ಯಾರಂಟಿ ಯೋಜನೆಗಳನ್ನು ನಮ್ಮ ಸರ್ಕಾರ ಅನುಷ್ಠಾನ ಮಾಡಿದ್ದು, ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ. ಆದ್ದರಿಂದ ಫಲಾನುಭವಿಗಳು ಆತಂಕಕ್ಕೆ ಒಳಗಾಗಬಾರದು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ಗುರುಸ್ವಾಮಿ ತಿಳಿಸಿದರು.ಗುರುವಾರ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಯನ್ನು ಅತ್ಯಂತ ಯಶಸ್ವಿಯಾಗಿ ಮುನ್ನಡೆಸುತ್ತಿದೆ ಎಂದು ಹೇಳಿದರು.ಗೃಹಲಕ್ಷಿ÷್ಮ ಯೋಜನೆಯ ಹಣವು…

Read More

ವಿದ್ಯಾರ್ಥಿಗಳು ಸಮಯ ಪರಿಪಾಲನೆಯನ್ನು ಓದಿನಲ್ಲಿ ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು

ಮೈಸೂರು; ವಿದ್ಯಾರ್ಥಿಗಳು ಸಮಯ ಪರಿಪಾಲನೆಯನ್ನು ಓದಿನಲ್ಲಿ ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಶಾರದಾವಿಲಾಸ ಸಂಸ್ಥೆಯ ಗೌರವ ಕಾರ್ಯದರ್ಶಿ ದಿನೇಶ್.ಆರ್ ಹೇಳಿದರು.ಮೈಸೂರಿನ ಶಾರದಾವಿಲಾಸ ಪದವಿಪೂರ್ವಕಾಲೇಜಿನ ಆವರಣದಲ್ಲಿ ಬುಧವಾರ ಏರ್ಪಡಿಸಿದ್ದ ನವಿಶೇಷ ಸಿಇಟಿ ಬೋಧನಾ ತರಗತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಕಾಲೇಜಿನಲ್ಲಿ ಸಿಗುವ ವಿಶೇಷ ಬೋಧನಾ ತರಗತಿಗಳ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಮುಂದೆ ಬರಬೇಕೆಂದು ತಿಳಿಸಿದರು. ತಾಳ್ಮೆಯಿಂದ ಏಕಾಗ್ರತೆಯಲ್ಲಿ ಓದಿನಲ್ಲಿ ತೊಡಗಿದಾಗ ಗುರಿಯನ್ನು ಹಾಗೂ ಜೀವನದಲ್ಲಿ ಯಶಸ್ಸನ್ನು ತಲುಪಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲರೂ ಚಿಂತಿಸಿ ಮುಂಬರುವ…

Read More

14 ಮಂದಿ ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಿರುವ ಕ್ರಮವನ್ನು ಖಂಡಿಸಿ ಪ್ರತಿಭಟನೆ

ಮೈಸೂರು; ನಗರದಲ್ಲಿರುವ ಪೇಂಟ್ಸ್ ಮತ್ತು ವಾರ್ನಿಶ್ ಲಿಮಿಟೆಡ್‌ನಲ್ಲಿ 8-25 ವರ್ಷ ಸೇವೆ ಸಲ್ಲಿಸಿದ 14 ಮಂದಿ ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಿರುವ ಕ್ರಮವನ್ನು ಖಂಡಿಸಿ, ಮೈಸೂರು ಡಿವಿಜನ್ ಯುನೈಟೆಡ್ ಇಂಡಸ್ಟಿçಯಲ್ ವರ್ಕಸ್ ಯೂನಿಯನ್‌ನಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.ಮೈಲ್ಯಾಕ್ ಕಚೇರಿ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು ಕೆಲಕಾಲ ಧರಣಿ ನಡೆಸಿ ಘೋಷಣೆಗಳನ್ನು ಕೂಗಿದರು.ಮೈಸೂರು ಪೇಂಟ್ಸ್ ಮತ್ತು ವಾರ್ನಿಶ್ ಲಿಮಿಟೆಡ್ (ಕರ್ನಾಟಕ ಸರ್ಕಾರದ ಉದ್ದಿಮೆ) ಸಂಸ್ಥೆಯಲ್ಲಿ ಶ್ರೀ ನಿಮಿಷಾಂಬಾ ಸೆಕ್ಯುರಿಟಿ ಬ್ಯೂರೋ & ಯುಟಿಲಿಟಿ ಸರ್ವೀಸಸ್ ಮೂಲಕ ಕಳೆದ 8 ರಿಂದ…

Read More

ನಿರ್ದಿಷ್ಟ ಗುರಿ, ದೃಢ ಸಂಕಲ್ಪವಿದ್ದರೆ ಮಾತ್ರ ಯಶಸ್ಸು ಸಾಧ್ಯ

ಮೈಸೂರು; ನಿರ್ದಿಷ್ಟ ಗುರಿ, ದೃಢ ಸಂಕಲ್ಪವಿದ್ದರೆ ಮಾತ್ರ ಯಶಸ್ಸು ಸಾಧ್ಯ ಎಂದು ಮೈಸೂರು ಜಿಲ್ಲೆ ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತೆ ಟಿ ರಮ್ಯ ಹೇಳಿದರು.ಬುಧವಾರ ಮೈಸೂರಿನ ಜೆಎಸ್‌ಎಸ್ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ 2025-26 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದವರಿಗೆ ಏರ್ಪಡಿಸಲಾಗಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಇಂದು ವಿದ್ಯಾರ್ಥಿಗಳು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದರೆ ಹೇಳಿದ ಅವರು ಯಾವ ಕೋರ್ಸ್ ಆಯ್ಕೆ ಮಾಡಿದರೆ…

Read More