Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಿ.ಎಸ್.ಉಗ್ರಪ್ಪರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡಲು ಒತ್ತಾಯ ದ್ಯಾವಪ್ಪ ನಾಯಕ

ಮೈಸೂರು; ಮಾಜಿ ಸಂಸದ ವಿ.ಎಸ್. ಉಗ್ರಪ್ಪರವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಬೇಕೆಂದು ವಾಲ್ಮೀಕಿ ನಾಯಕ ಸಂಘಗಳ ಒಕ್ಕೂಟದ ಅಧ್ಯಕ್ಷ ದ್ಯಾವಪ್ಪ ನಾಯಕ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿ.ಎಸ್. ಉಗ್ರಪ್ಪ ಅವರು, ಸುಮಾರು 35 ವರ್ಷಗಳಿಂದ ಸಕ್ರಿಯವಾಗಿ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದು, ವಿಧಾನ ಪರಿಷತ್ ಸದಸ್ಯರಾಗಿ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ದಕ್ಷತೆಯಿಂದ, ಪ್ರಾಮಾಣಿಕತೆಯಿಂದ ಜನಪರವಾಗಿ ಧ್ವನಿಯೆತ್ತಿದ್ದರು. ನಾಯಕ ಹಾಗೂ ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ಸಮಿತಿಯ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಮಹಿಳೆಯ…

Read More

ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ಸಿಗಲೆಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿಗಳು

ಮೈಸೂರು; ಜಿಲ್ಲೆಯ ಎಚ್.ಡಿ ಕೋಟೆ ಕ್ಷೇತ್ರದ ಶಾಸಕ ಅನೀಲ್ ಚಿಕ್ಕಮಾದುಗೆ ಸಚಿವ ಸ್ಥಾನ ಸಿಗಬೇಕೆಂದು ಅಭಿಮಾನಿಗಳು ಮಂಗಳವಾರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.ಮೈಸೂರಿನ ಅಗ್ರಹಾರದಲ್ಲಿರುವ ಮಹಾಗಣಪತಿ ದೇವಸ್ಥಾನದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿನಗರ ಪಾಲಿಕೆ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿಗಳು ಮಹಾಗಣಪತಿಗೆ ಹಿಡುಗಾಯಿ ಸೇವೆ ಸಲ್ಲಿಸಿದರು.ಈ ವೇಳೆ ಮಾತನಾಡಿದ ನಗರಪಾಲಿಕೆಯ ಮಾಜಿ ಸದಸ್ಯ ಲೋಕೇಶ್ ಪಿಯಾ,ಹಳೆ ಮೈಸೂರು ಭಾಗದಲ್ಲಿ ಏಕೈಕ ನಾಯಕ ಸಮುದಾಯದ ಯುವನಾಯಕರಾದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಕಾಂಗ್ರೆಸ್…

Read More

ನಾಲ್ಮಡಿ ಕೃಷ್ಣರಾಜ ಒಡೆಯರು ಮತ್ತು ಆಧುನಿಕ ಮೈಸೂರು” ಕೃತಿ ಬಿಡುಗಡೆ

ಮೈಸೂರು; ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ, ಜೂನ್ 4 ರಂದು ಮೈಸೂರಿನಲ್ಲಿ “ನಾಲ್ಮಡಿ ಕೃಷ್ಣರಾಜ ಒಡೆಯರು ಮತ್ತು ಆಧುನಿಕ ಮೈಸೂರು” ಕೃತಿ ಬಿಡುಗಡೆ ಮಾಡಲಾಗುವುದು ಎಂದು ಪರಿಷತ್‌ನ ಅಧ್ಯಕ್ಷ ಎಂ.ಪ್ರಕಾಶಮೂರ್ತಿ ತಿಳಿಸಿದರು.ಸೋಮವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ನಾಲ್ಮಡಿ ಅವರ ಕುರಿತು ‘ನಾಲ್ವಡಿ ಕೃಷ್ಣರಾಜ ಒಡೆಯರು ಮತ್ತು ಆಧುನಿಕ ಮೈಸೂರು’ ಎಂಬ ಪುಸ್ತಕ ಪ್ರಕಟಿಸಿ, ಬೆಂಗಳೂರಿನಲ್ಲಿ ಜನಾರ್ಪಣೆ ಮಾಡಿ ಅವರಿಗೆ ಕೃತಜ್ಞತೆ ಮತ್ತು ಗೌರವಗಳನ್ನು…

Read More

ಸಾಧನೆಯ ಶಿಖರಗಳು’ ಕೃತಿ ಲೋಕಾರ್ಪಣೆ

ಮೈಸೂರು: ಹಿರಿಯ ಪತ್ರಕರ್ತ ಕೂಡ್ಲಿ ಗುರುರಾಜ ಅವರ ಲೇಖನ ಸಂಕಲನಸಾಧನೆಯ ಶಿಖರಗಳು (ಸ್ಫೂರ್ತಿದಾಯಕ ವ್ಯಕ್ತಿ ಚಿತ್ರಗಳು)’ ಕೃತಿಯು ಇಂದು ಮೈಸೂರಿನ ಕಲಾಮಂದಿರ ಆವರಣದ ಕಿರು ರಂಗಮAದಿರದಲ್ಲಿ ನಡೆದ ಸಮಾರಂಭದಲ್ಲಿ ಲೋಕಾರ್ಪಣೆಗೊಂಡಿತು.ಭಾರತೀ ಪ್ರಕಾಶನ, ಮೈಸೂರು ವತಿಯಿಂದ ಪ್ರಕಟಿತ ಈ ಕೃತಿಯನ್ನು ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಎಸ್. ಹೊರಟ್ಟಿ ಅವರು ಬಿಡುಗಡೆ ಮಾಡಿದರು. ಬಳಿಕ ಮಾತನಾಡಿ, ವ್ಯಕ್ತಿಗಳ ಸಾಧನೆಗಳನ್ನು ದಾಖಲಿಸಿ ಸಮಾಜಕ್ಕೆ ಸ್ಫೂರ್ತಿ ನೀಡುವ ಇಂತಹ ಕೃತಿಗಳು ಯುವಜನತೆಗೆ ಮಾರ್ಗದರ್ಶಿಯಾಗುತ್ತವೆ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಿಧಾನ ಪರಿಷತ್…

Read More

ಡಾ.ಹೆಚ್.ಸಿ.ಮಹದೇವಪ್ಪಗೆ ಡಿಸಿಎಂ ಸ್ಥಾನ ನೀಡಲು ಆಗ್ರಹಿಸಿ ಬೃಹತ್ ಪ್ರತಿಭಟನೆ

*ದಲಿತರಿಗೆ ಸಮರ್ಪಕ ಸ್ಥಾನಮಾನಗಳನ್ನು ಒದಗಿಸಿದಿದ್ದರೆ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುವ ಎಚ್ಚರಿಕೆಮೈಸೂರು: ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ಪ್ರಬಲ ಖಾತೆ ಜತೆಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಹೈಕಮಾಂಡ್‌ನ್ನು ಒತ್ತಾಯಿಸಿ ಸೋಮವಾರ ಮೈಸೂರಿನಲ್ಲಿ ಅಖಿಲ ಕರ್ನಾಟಕ ಡಾ.ಎಚ್.ಸಿ.ಮಹದೇವಪ್ಪ ಅಭಿಮಾನಿ ಬಳಗದಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.ನಗರದ ಪುರಭವನ ಎದುರಿನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಎದುರು ಜಮಾಯಿಸಿದ ನೂರಾರು ಕಾರ್ಯಕರ್ತರು ಮೈಸೂರು ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಪರವಾಗಿ ನಾನಾ ಘೋಷಣೆಗಳನ್ನು ಕೂಗಿದರು. ಸ್ವಾತಂತ್ರ÷್ಯ ಬಂದ ದಿನಗಳಿಂದಲೂ…

Read More

ಪೀಳಿಗೆಯ ಆರೋಗ್ಯಕರ ಹಾಗೂ ಸಂಸ್ಕಾರಯುತ ಬೆಳವಣಿಗೆಗೆ ಶ್ರೀಗರ್ಭ ಗರ್ಭಸಂಸ್ಕಾರವು ಅತ್ಯಗತ್ಯ

ಮೈಸೂರು; ಶ್ರೀಗರ್ಭ ಗರ್ಭಸಂಸ್ಕಾರವು ಸನಾತನ ಪರಂಪರೆಯಿAದ ಬಂದ ಅಮೂಲ್ಯ ಸಂಸ್ಕಾರವಾಗಿದ್ದು, ಮುಂದಿನ ಪೀಳಿಗೆಯ ಆರೋಗ್ಯಕರ ಹಾಗೂ ಸಂಸ್ಕಾರಯುತ ಬೆಳವಣಿಗೆಗೆ ಇದು ಅತ್ಯಂತ ಅನಿವಾರ್ಯವೆಂದು ಆಯುಷ್ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಲಕ್ಷಿö್ಮ ನಾರಾಯಣ ಹೇಳಿದರು.ಸೋಮವಾರ ನಗರದ ಪತ್ರಕರ್ತರ ಭವನದಲ್ಲಿ ಪರಮಹಂಸ ಯೋಗ ಮಹಾವಿದ್ಯಾಲಯದ ಸಹಭಾಗಿತ್ವದಲ್ಲಿ ನಡೆದ ಶ್ರೀಗರ್ಭ ಗರ್ಭಸಂಸ್ಕಾರ ಮಹಾವಿದ್ಯಾಲಯದ ಪ್ರಥಮ ವಾರ್ಷಿಕೋತ್ಸವ ಹಾಗೂ ಗ್ರಾಜುಯೇಷನ್ ಡೇ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ಶ್ರೀಗರ್ಭ ಸಂಸ್ಥಾಪಕರಾದ ಡಾ. ಕಾವ್ಯಾ ಎಸ್ ಅವರು ಗರ್ಭ ಸಂಸ್ಕಾರದ ಮಹತ್ವವನ್ನು ವೈಜ್ಞಾನಿಕ ಹಾಗೂ ಸಂಸ್ಕಾರಯುತ ದೃಷ್ಟಿಕೋನದಿಂದ…

Read More

ಜಿಲ್ಲೆಯಲ್ಲಿ ಆರಂಭವಾದ ಶಾಲೆಗಳಲ್ಲಿ ಮಕ್ಕಳ ಕಲರವ

*ಶಾಲೆಗೆ ಬಂದ ಮಕ್ಕಳಿಗೆ ಅದ್ಧೂರಿ ಸ್ವಾಗತ, ಆರತಿ ಬೆಳಗಿದರು, ಪುಸ್ತುಗಳು, ಹೂವುಗಳನ್ನು ನೀಡಿ ಸ್ವಾಗತಿಸಿದರು. ಸರ್ಕಾರಿ ಶಾಲೆಗಳು ಇಂದು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುತ್ತಿವೆ: ಶಾಸಕ ಟಿ.ಶ್ರೀವತ್ಸಮೈಸೂರು: ಜಿಲ್ಲೆಯಲ್ಲಿ ಶಾಲೆಗಳು ಆರಂಭವಾಗಿದ್ದು, ಮಕ್ಕಳ ಕಲರವ ಶುರುವಾಗಿದೆ. ಸೋಮವಾರ ಶಾಲೆಗಳ ಬಾಗಿಲು ತೆರೆಯುತ್ತಿದ್ದಂತೆ ಶಾಲೆಗಳಿಗೆ ಆಗಮಿಸಿದ ಮಕ್ಕಳಿಗೆ ಶಾಸಕರು, ಅಧಿಕಾರಿಗಳು, ಶಾಲಾಭಿವೃದ್ಧಿ ಸಮಿತಿಯವರು, ವಿವಿಧ ಸಂಘ, ಸಂಸ್ಥೆಗಳವರು ಭರ್ಜರಿ ಸ್ವಾಗತವನ್ನು ನೀಡಿ, ಬರಮಾಡಿಕೊಂಡರು. ಕೆಲವಡೆ ಮಕ್ಕಳಿಗೆ ಆರತಿ ಬೆಳಗಿ, ಹೂವುಗಳನ್ನು ನೀಡಿದರೆ, ಮತ್ತೆ ಹಲವಡೆ ಮಕ್ಕಳಿಗೆ ಪುಸ್ತಕ, ಸಿಹಿಯನ್ನು…

Read More

ಸಂಗೀತ ಮತ್ತು ಕಲೆಗಳು ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ; ಶ್ರೀನಿವಾಸನ್ ಎನ್.

ಮೈಸೂರು: ಸಂಗೀತ ಮತ್ತು ಕಲೆಗಳು ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಮೈಸೂರಿನ ವಿಜಯನಗರದಲ್ಲಿರುವ ಶ್ರೀಯೋಗಾನರಸಿಂಹಸ್ವಾಮಿ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸನ್ ಎನ್. ತಿಳಿಸಿದರು.ನಗರದ ಹೂಟಗಳ್ಳಿ ಹೌಸಿಂಗ್ ಬೋರ್ಡ್ನ ಶ್ರೀ ಅನಂತೇಶ್ವರ ಭವನದಲ್ಲಿ ಸರ್ವಕಲಾ ಸೇವಾ ಟ್ರಸ್ಟ್ ಹಾಗೂ ಪಂಚಾಯತ್ ಗ್ರಾಮೀಣಾಭಿವೃದ್ಧಿ ರೈತರ ಸೇವಾ ಸಮಿತಿ ಮೈಸೂರು ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟç ಮಟ್ಟದ ಸುಗ್ಗಿಯರ ಕಲೋತ್ಸವ ಗಾಯನ ಸೀಸನ್ 3 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಯುವ ಪ್ರತಿಭೆಗಳಿಗೆ…

Read More

ಸೇವೆಯಿಂದ ನಿವೃತ್ತರಾದ ಪೊಲೀಸ್ ಅಧಿಕಾರಿಗಳಿಗೆ ಬೀಳ್ಕೋಡುಗೆ

ಮೈಸೂರು; ಪೊಲೀಸ್ ಇಲಾಖೆಯಲ್ಲಿ ಸುಧೀರ್ಘ ಅವಧಿಯವರೆಗೆ ಪ್ರಾಮಾಣಿಕತೆ ಹಾಗೂ ಕರ್ತವ್ಯಪರತೆಯಿಂದ ಸೇವೆ ಸಲ್ಲಿಸಿ ವಯೋ ನಿವೃತ್ತಿಗೊಂಡ ಪೊಲೀಸ್ ಅಧಿಕಾರಿಗಳನ್ನು ಸನ್ಮಾನಿಸಿ ಬೀಳ್ಕೋಡಲಾಯಿತು.ಪಿಎಸ್‌ಐಗಳಾದ ಭಾಸ್ಕರ್ ಕೆ.ಎಸ್, ಗೋಪಾಲಕೃಷ್ಣ ಕೆ, ಎಆರ್‌ಎಸ್‌ಐಗಳಾದ ಚಿಕ್ಕಮಲ್ಲಪ್ಪ, ನಂಜುAಡಯ್ಯ ಸಿ.ಎಂ , ಪ್ರಶಾಂತ್ ಎಎಸ್‌ಐಗಳಾದ ಮನೋಹರ್, ರಾಮಸ್ವಾಮಿ ಹೆಚ್.ಜಿ ಹಾಗೂ ಮುಖ್ಯಪೇದೆ ಮಿತ್ರಕುಮಾರ್ ರವರನ್ನು ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಅಪರ ಪೊಲೀಸ್ ಅಧೀಕ್ಷಕ ಮಲ್ಲಿಕ್ ಸಿ ರವರು, ನಿವೃತ್ತ ಅಧಿಕಾರಿಗಳ ಸೇವೆಯನ್ನು ಸ್ಮರಿಸಿ, ಅವರ ಮುಂದಿನ ನಿವೃತ್ತ ಜೀವನವು…

Read More

ಕಠಿಣ ಪರಿಶ್ರಮದಿಂದ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಿ; ಶಾಸಕ ಹರೀಶ್‌ಗೌಡ

ಮೈಸೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಠಿಣ ಅಭ್ಯಾಸ ಮತ್ತು ಪರಿಶ್ರಮದಿಂದ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ಹುಣಸೂರು ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದರು.ಮೈಸೂರಿನ ಮಾನಸಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಏರ್ಪಡಿಸಿದ್ದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಹಿರಿಯ ಪತ್ರಕರ್ತರಿಗೆ ಅಭಿನಂದನೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಠ್ಯ ಅಭ್ಯಾಸದೊಂದಿಗೆ ಲೋಕಜ್ಞಾನವನ್ನು ವಿದ್ಯಾರ್ಥಿಗಳು ಗಳಿಸಬೇಕು. ಯಾವ ವಿದ್ಯಾರ್ಥಿ ಸಾಮಾನ್ಯ ಜ್ಞಾನವನ್ನು ಸಂಪಾದಿಸುವುದಿಲ್ಲವೋ, ಆತ…

Read More