Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೈಸೂರು ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ; ಜಿಲ್ಲಾಧಿಕಾರಿ ಜಿ. ಲಕ್ಷ್ಮಿ ಕಾಂತ ರೆಡ್ಡಿ

ಮೈಸೂರು ; ಈ ಬಾರಿ ಅದ್ಧೂರಿಯಾಗಿ ಜರುಗಲಿರುವ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಕೊನೆ ದಿನ ನಡೆಯುವ ಐತಿಹಾಸಿಕ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ ಜಿ .ಲಕ್ಷ್ಮಿ ಕಾಂತ ರೆಡ್ಡಿ ತಿಳಿಸಿದರು.ಬುಧವಾರ ನಗರದ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಚಲನಚಿತ್ರ ರಂಗದ ಪದಾಧಿಕಾರಿಗಳ ಜೊತೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಆಶಯದಂತೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ನಟ ನಟಿಯರು…

Read More

ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಇರುವುದರಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ನಿಲ್ಲಿಸಿ; ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ

ಮೈಸೂರು; ರಾಜ್ಯ ಬರಕ್ಕೆ ತುತ್ತಾಗಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಇರುವ ಸಂದರ್ಭದಲ್ಲೂ ತಮಿಳುನಾಡಿಗೆ ನೀರು ಹರಿಸುತ್ತಿರುವುದು ಸರಿಯಲ್ಲ, ಕೂಡಲೇ ನಿಲ್ಲಿಸಬೇಕೆಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದರು.ಮಂಗಳವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಬರಕ್ಕೆ ತುತ್ತಾಗಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಇರುವ ಸಂದರ್ಭದಲ್ಲೂ ಕಾವೇರಿ ನಿಯಂತ್ರಣ ಪ್ರಾಧಿಕಾರದ ಸೂಚನೆ ಮೇರೆಗೆ ಕಾವೇರಿ ಜಲಾಶಯಗಳಿಂದ ನೀರು ಹರಿಸುತ್ತಿರುವುದು ರಾಜ್ಯದ ಜನತೆಗೆ ಮಾಡುತ್ತಿರುವ ದ್ರೋಹವಾಗಿದೆ. ಸಂಕಷ್ಟದ ಪರಿಸ್ಥಿತಿಯಲ್ಲಿ…

Read More

ದಸರಾ ಗಜಪಡೆಗಳಿಗೆ ಭಾರ ಹೊರುವ ತಾಲಿಮು*ಗಂಡು ಆನೆಗಳಿಗೆ ಹಂತ, ಹಂತವಾಗಿ ತೂಕ ಹೆಚ್ಚಳ

ಮೈಸೂರು; ಈ ಬಾರಿ ಅದ್ಧೂರಿಯಾಗಿ ಜರುಗಲಿರುವ ವಿಶ್ವಪ್ರಸಿದ್ಧ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲೆಂದು ಕಾಡಿನ ವಿವಿಧ ಶಿಬಿರಗಳಿಂದ ಅರಮನೆ ನಗರಿ ಮೈಸ್ರರಿಗೆ ಬಂದಿರುವ ಗಜಪಡೆಗೆ ಇದೀಗ ಭಾರ ಹೊರೆಸುವ ತಾಲೀಮು ಆರಂಭಿಸಲಾಗಿದೆ.ಗಜಪಯಣದ ಮೂಲಕ ಮೈಸೂರಿಗೆ ಬಂದಿರುವ ಮೊದಲ ಹಂತದ ಗಜಪಡೆಗೆ ನಿತ್ಯವೂ ಎರಡು ಹೊತ್ತು ಅರಮನೆಯಿಂದ ಬನ್ನಿಮಂಟಪದ ತನಕ ತಾಲೀಮು ನಡೆಸಲಾಗುತ್ತಿತ್ತು. ನಾಗರೀಕ ಜೀವನಕ್ಕೆ ಆನೆಗಳು ಹೊಂದಿಕೊಳ್ಳುತ್ತಿದ್ದು, ಎಷ್ಟೇ ಜನರು ಎದುರಿಗೆ ಬಂದರೂ, ಹೋದರೂ ನಿಂತಿದ್ದರೂ ಆನೆಗಳು ಕೊಂಚವೂ ಗಲಿಬಿಲಿಗೊಳ್ಳದೆ ನಿತ್ಯವೂ ತಾಲೀಮು ನಡೆಸುತ್ತಿವೆ….

Read More

ಯುವ ದಸರಾ ಉದ್ಘಾಟನೆಗೆ ಖ್ಯಾತ ನಟ, ನೃತ್ಯ ನಿರ್ದೇಶಕ ಪ್ರಭುದೇವ ಅವರಿಗೆ ಅಧಿಕೃತ ಆಹ್ವಾನ

ಮೈಸೂರು: ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾದ ಪ್ರಮುಖ ಆಕರ್ಷಣೆಯಲ್ಲಿ ಒಂದಾದ ಯುವ ದಸರಾ 2026ರ ಉದ್ಘಾಟನಾ ಕಾರ್ಯಕ್ರಮಕ್ಕೆ ಭಾರತದ ಖ್ಯಾತ ನೃತ್ಯಗಾರ, ನೃತ್ಯ ನಿರ್ದೇಶಕ, ನಟ ಹಾಗೂ ಚಿತ್ರ ನಿರ್ದೇಶಕರಾದ ಪ್ರಭುದೇವ ಅವರನ್ನು ಅಧಿಕೃತವಾಗಿ ಆಹ್ವಾನಿಸಲಾಗಿದೆ.ಯುವ ದಸರಾ ಸಮಿತಿಯ ಕಾರ್ಯಧ್ಯಕ್ಷ ಸೋಮಶೇಖರ್, ಕಾರ್ಯದರ್ಶಿಗಳಾದ ಅರುಣ್ ಹಾಗೂ ಸತ್ಯಮೂರ್ತಿ ಅವರು ಚೆನ್ನೆöÊನಲ್ಲಿರುವ ಪ್ರಭುದೇವ ಅವರ ನಿವಾಸಕ್ಕೆ ತೆರಳಿ, ಮೈಸೂರು ದಸರಾದಲ್ಲಿ ನಡೆಯುವ ಯುವ ದಸರಾ ಕಾರ್ಯಕ್ರಮಕ್ಕೆ ಆಗಮಿಸುವಂತೆ ಅಧಿಕೃತವಾಗಿ ಆಹ್ವಾನಿಸಿದರು.ಆಹ್ವಾನವನ್ನು ಸಂತೋಷದಿAದ ಸ್ವೀಕರಿಸಿದ ಪ್ರಭುದೇವ ಅವರು, ಯುವ…

Read More

ಕೊನೆಗೂ ಈ ಬಾರಿಯ ದಸರಾದಲ್ಲಿ ಭಾಗವಹಿಸಲು ಗಜಪಡೆಯ ಮಾಜಿ ಕ್ಯಾಪ್ಟನ್ ಅಭಿಮನ್ಯುಗೆ ಸಿಕ್ತು ಅವಕಾಶ

*ಜಂಬೂಸವಾರಿಯ ನಿಶಾನೆ ಆನೆಯಾಗಿ ಭಾಗವಹಿಸಲಿದ್ದಾನೆ ಅಭಿಮನ್ಯು ; ಈ ಕುರಿತು ಅರಣ್ಯ ಸಚಿವರಿಂದಲೇ ಹೊರಬಿತ್ತು ಮಾಹಿತಿಮೈಸೂರು: ಈ ಬಾರಿ ಅದ್ಧೂರಿಯಾಗಿ ನಡೆಯಲಿರುವ ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾದಲ್ಲಿ ಗಜಪಡೆಯ ಮಾಜಿ ಕ್ಯಾಪ್ಟನ್ ಅಭಿಮನ್ಯ ಭಾಗವಹಿಸಬೇಕು, ದಸರಾಗೆ ಅಭಿಮನ್ಯವನ್ನು ಕರೆತರಬೇಕೆಂಬ ಜನರ ಆಗ್ರಹಕ್ಕೆ ರಾಜ್ಯ ಸರ್ಕಾರ, ಅರಣ್ಯ ಇಲಾಖೆಯ ಕೊನೆಗೂ ಮಣಿದಿದೆ. ಸಾಮಾಜಿಕ ಜಾಲತಾಣ ಬಳಕೆದಾರರು ಹಾಗೂ ಜನರ ತೀವ್ರ ಆಗ್ರಹ ಹಾಗೂ ಪ್ರತಿಭಟನೆಯಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಅರಣ್ಯ ಇಲಾಖೆ, ಸೇವೆಯಿಂದ ನಿವೃತ್ತಿಯಾಗಿರುವ ಗಜಪಡೆ…

Read More

ಸಕ್ಕರೆ, ಸಿಲಿಂಡರ್ ಅಕ್ರಮ ದಾಸ್ತಾನು ಬಗ್ಗೆ ದಾಳಿ ನಡೆಸಿ, ಕಾನೂನು ಕ್ರಮ ಕೈಗೊಳ್ಳಿ: ಸಚಿವ ರಿಜ್ವಾನ್ ಅರ್ಷದ್

ಮೈಸೂರು: ಸಕ್ಕರೆಯ ಬೆಲೆಯಲ್ಲಿ ದಿಢೀರ್ ಏರಿಕೆಯಾಗಿದ್ದು, ಅಕ್ರಮವಾಗಿ ದಾಸ್ತಾನು ಮಾಡಿಕೊಂಡಿದ್ದಲ್ಲಿ ಪರಿಶೀಲನೆ ನಡೆಸಬೇಕು. ಎಲ್.ಪಿ.ಜಿ ಸಿಲೆಂಡರ್ ಗಳು ನಿಗದಿತ ಸಂಖ್ಯೆಕ್ಕಿAತ ಹೆಚ್ಚಿನ ಸಂಖ್ಯೆಯಲ್ಲಿ ಸಂಗ್ರಹಣೆಯಾಗಿದ್ದಲ್ಲಿ ಕಾನೂನು ರೀತ್ಯ ಕ್ರಮ ಕೈಗೊಳ್ಳಿ ಎಂದು ಇಲಾಖೆಯ ಅಧಿಕಾರಿಗಳಿಗೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ರಿಜ್ವಾನ್ ಅರ್ಷದ್ ತಿಳಿಸಿದರು.ಬುಧವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮೈಸೂರು ವಿಭಾಗ ಮಟ್ಟದ ಆಹಾರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದ ಅವರು, ಅಕ್ರಮ ಆಹಾರ ದಾಸ್ತಾನು…

Read More

ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗದಂತೆ ಕಠಿಣ ಕ್ರಮ; ಆಹಾರ ಇಲಾಖೆ ಸಚಿವ ರಿಜ್ವಾನ್ ಅರ್ಷದ್

• ಆದಾಯ ತೆರಿಗೆ ಪಾವತಿಸುತ್ತಿದ್ದ ಕಾರಣಕ್ಕೆ ಸುಮಾರು ೪.೫ ಲಕ್ಷ ಪಡಿತರ ಚೀಟಿಗಳನ್ನು ರದ್ದುಮೈಸೂರು: ಆದಾಯ ತೆರಿಗೆ ಪಾವತಿಸುತ್ತಿದ್ದ ಕಾರಣಕ್ಕೆ ಸುಮಾರು ೪.೫ ಲಕ್ಷ ಪಡಿತರ ಚೀಟಿಗಳನ್ನು ರದ್ದುಗೊಳಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವ ರಿಜ್ವಾನ್ ಅರ್ಷದ್ ತಿಳಿಸಿದರು.ಬುಧವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಜಿಲ್ಲಾ ಪತ್ರಕರ್ತರ ಸಂಘದಿAದ ಏರ್ಪಡಿಸಲಾಗಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಸ್ತುತ ಸುಮಾರು ೪.೫ ಕೋಟಿ ಜನರು ಪಡಿತರ ವ್ಯವಸ್ಥೆಯ ವ್ಯಾಪ್ತಿಯಲ್ಲಿದ್ದು, ಮುಂದಿನ…

Read More

ದಸರಾದ ಜಂಬೂಸವಾರಿಯಲ್ಲಿ ಭಾಗವಹಿಸಲು ಜಾನಪದ ಕಲಾತಂಡಗಳಿ0ದ ಅರ್ಜಿ ಆಹ್ವಾನ

ಮೈಸೂರು: ಈ ಬಾರಿ ಅದ್ಧೂರಿಯಾಗಿ ನಡೆಯಲಿರುವ ವಿಶ್ವ ಪ್ರಸಿದ್ಧ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಜ್ಯದ ಎಲ್ಲಾ ಜಿಲ್ಲೆಗಳ ಜಾನಪದ ಕಲಾತಂಡಗಳಿAದ ಅರ್ಜಿ ಆಹ್ವಾನಿಸಲಾಗಿದ್ದು, ಸೆ. ೧೬ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಮೆರವಣಿಗೆಯಲ್ಲಿ ಭಾಗವಹಿಸಲು ಬಯಸುವ ಕಲಾತಂಡಗಳು ಅರ್ಜಿ ಸಲ್ಲಿಸುವಾಗ ತಮ್ಮ ತಂಡದ ಉತ್ತಮ ಭಾವಚಿತ್ರದೊಂದಿಗೆ ತಂಡದ ಸದಸ್ಯರುಗಳ ವಿವರ, ಅಂಚೆ ವಿಳಾಸ ಮತ್ತು ತಂಡದ ಮುಖ್ಯಸ್ಮರ ಮೊಬೈಲ್, ದೂರವಾಣಿ ಸಂಖ್ಯೆ ವಿವರವನ್ನು ಒಳಗೊಂಡAತೆ ಅರ್ಜಿಯನ್ನು ಸಮನ್ವಯಾಧಿಕಾರಿಗಳು, ದಸರಾ…

Read More

ಕೇಂದ್ರದ ನಿಯಮಗಳಡಿ ೧೦೧ ತಾಲೂಕುಗಳು ಬರ ಪೀಡಿತ ಎಂದು ಘೋಷಣೆ ; ಇನ್ನೊಂದು ವಾರದಲ್ಲಿ ಮತ್ತೆ ಪರಿಶೀಲನೆ; ಡಿಸಿಎಂ ಡಾ.ಜಿ.ಪರಮೇಶ್ವರ

ರಾಜ್ಯದ ಕಾನೂನಿನಡಿಯಲ್ಲಿ ಬರ ಘೋಷಿಸಿದರೆ ಪರಿಹಾರ ಸಿಗುವುದಿಲ್ಲ; • ರೈತರ ಕೈತಪ್ಪಿದ ಬೆಳೆ ; ಪರಿಹಾರ ಕುರಿತು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಹುಣಸೂರು: ರಾಜ್ಯದ ಕಾನೂನಿನಡಿಯಲ್ಲಿ ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದರೆ, ಪರಿಹಾರ ಸಿಗುವುದಿಲ್ಲ. ಹಾಗಾಗಿ ಕೇಂದ್ರ ಸರ್ಕಾರದ ನಿಯಮಗಳಡಿಯಲ್ಲೇ ಘೋಷಣೆ ಮಾಡಬೇಕು. ಹಾಗಾಗಿ ೧೦೧ ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿದ್ದೇವೆ. ಇನ್ನೊಂದು ವಾರ ಬಿಟ್ಟು ಪರಿಶೀಲನೆ ನಡೆಸಿ, ಆಗ ಈ ವರ್ಗಕ್ಕೆ ಸೇರುವ ಪ್ರದೇಶಗಳನ್ನು ಬರಪೀಡಿತ ಎಂದು ಘೋಷಿಸಲಾಗುವುದು ಎಂದು ಉಪ…

Read More

ಮಳೆ ಕೊರತೆ: ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದ ಡಿಸಿಎಂ ಡಾ. ಜಿ. ಪರಮೇಶ್ವರ್

• ಕೇಂದ್ರ ಸರ್ಕಾರಕ್ಕೆ ರಾಜ್ಯದಲ್ಲಿನ ಬರ ಪರಿಸ್ಥಿತಿಯ ಕುರಿತು ಜ್ಞಾಪನಾ ಪತ್ರವನ್ನು ಸಲ್ಲಿಸಲಾಗುವುದು.• ರೈತರಿಗೆ ಕಿರುಕುಳ ನೀಡದಂತೆ ಮೈಕ್ರೋಫೈನಾನ್ಸ್ ಸಂಸ್ಥೆಗಳಿಗೆ ಎಚ್ಚರಿಕೆ ಮೈಸೂರು; ರಾಜ್ಯದಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯನ್ನು ಪರಿಶೀಲಿಸುವ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು, ಮಂಗಳವಾರ ಮೈಸೂರು ಜಿಲ್ಲೆಯ ವಿವಿಧ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿದರು.ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಕಂಚುಗಾರನ ಕೊಪ್ಪಲು ಗ್ರಾಮದಲ್ಲಿ ಬರವೀಕ್ಷಣೆಯ ಸಂದರ್ಭದಲ್ಲಿ ರೈತರೊಂದಿಗೆ ನೇರವಾಗಿ ಮಾತುಕತೆ ನಡೆಸಿ,…

Read More