3Kaala News

ಸುಭಾಷಿತ 

ಭೌತಿಕ ಬದುಕಿಗೆ ಆಧ್ಯಾತ್ಮದ ಜ್ಞಾನ ಅವಶ್ಯಕ. ಮನುಷ್ಯ ಧರ್ಮದಿಂದ ವಿಮುಖನಾದರೇ, ಜೀವನ ಅಶಾಂತಿಯ ಕಡಲಾಗುತ್ತದೆ. ಮನುಷ್ಯನ ಬದುಕು ಇನ್ನೊಬ್ಬರಿಗೆ ಮಾದರಿಯಾಗಬೇಕಲ್ಲದೆ, ಮಾರಕವಾಗಬಾರದು.  ಸುಳ್ಳು ಹೇಳಲು ಹಲವು ದಾರಿ, ಆದರೆ ಸತ್ಯಕ್ಕೆ ಇರುವುದೊಂದೇ ದಾರಿ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಲೇಖನ/ ಕಥೆ /ಕವನ.

Health Care: ಬೆಳಗ್ಗೆ ಬಿಡಿ, ರಾತ್ರಿ ಹೊತ್ತು ಒಂದು ಗ್ಲಾಸ್​ ಬಿಸಿನೀರು ಕುಡಿಯಿರಿ; ಈ ಎಲ್ಲಾ ಲಾಭಗಳನ್ನು ಪಡೆಯಿರಿ!

Gnews5 June 17, 2026

ಇತ್ತೀಚಿನ ದಿನಗಳಲ್ಲಿ ಆರೋಗ್ಯದ (Health) ಬಗ್ಗೆ ಜನರು ಹೆಚ್ಚಾಗಿ ಕಾಳಜಿವಹಿಸಲು ಶುರು ಮಾಡಿದ್ದಾರೆ. ವಿಶೇಷವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಅನೇಕ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಹೀಗಾಗಿ  ಆಯುರ್ವೇದ ವಿಧಾನಗಳ ಮೊರೆ ಹೋಗುತ್ತಿದ್ದಾರೆ. ಅದರಲ್ಲೂ ಕೆಲವರು ಆರೋಗ್ಯದ ದೃಷ್ಟಿಯಿಂದ ಬೆಳಗ್ಗೆ ಎದ್ದ ತಕ್ಷಣ ಬೆಚ್ಚಗಿನ ನೀರನ್ನು (Hot Water) ಕುಡಿಯುವ ಅಭ್ಯಾಸ ಮಾಡಿಕೊಂಡಿದ್ದಾರೆ. ಬೆಚ್ಚಗಿನ ನೀರು ಕುಡಿಯುವುದು ದೇಹಕ್ಕೆ ತುಂಬಾ ಒಳ್ಳೆಯದು ಎನ್ನಲಾಗುತ್ತದೆ. ಆದರೆ ಎದ್ದ ನಂತರ ಅಲ್ಲ, ರಾತ್ರಿ ಮಲಗುವ (Night Sleep) ಮುನ್ನ ಬೆಚ್ಚಗಿನ ನೀರು ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳನ್ನು ಪಡೆಯಬಹುದು ಎಂದು ತಜ್ಞರು ಹೇಳುತ್ತಾರೆ