ದೇಶದ ವ್ಯಾಪಾರಿಗಳಿಗೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ ಶಾಕ್.

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.೧ರಿಂದ ಜಾರಿಗೆ ಬರುವಂತೆ ೯೯೩ರೂ ಹೆಚ್ಚಳ ಮಾಡಲಾಗಿದೆ. ಇದರಿಂದಾಗಿ ವ್ಯಾಪಾರಿಗಳು, ಉದ್ಯಮಿಗಳು ಮಾತ್ರವಲ್ಲ ದೇಶದ ಜನರು ಕೂಡ ಬೆಲೆ ಏರಿಕೆಗೆ ತಕ್ಕ ಬೆಲೆ ತೆರೆಬೇಕಾದ ಪರಿಸ್ಥಿತಿ ಎದುರಾಗಿದೆ. ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿದ್ದರೂ ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂಬುದೇ ಸಮಾಧಾನಕರ ವಿಷಯ
ಬೆಂಗಳೂರಿನಲ್ಲಿ ೯೯೧ ರೂಪಾಯಿ ಏರಿಕೆಯಾಗಿದ್ದು, ಇಂದಿನಿAದ ಒಂದು ಕಮರ್ಷಿಯಲ್ ಸಿಲಿಂಡರ್ ಬೆಲೆ ಬರೋಬ್ಬರಿ ೩೧೫೨ ರೂ ಆಗಿದೆ.
ಜಾಗತಿಕ ಇಂಧನ ಬೆಲೆಗಳ ಏರಿಕೆ ಮತ್ತು ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಈ ದರ ಪರಿಷ್ಕರಣೆ ಮಾಡಲಾಗಿದೆ.
ಈ ಏರಿಕೆಯು ಹೋಟೆಲ್, ರೆಸ್ಟೋರೆಂಟ್ ಮತ್ತು ಸಣ್ಣ ವ್ಯಾಪಾರಿಗಳ ಮೇಲೆ ಹೆಚ್ಚಿನ ಆರ್ಥಿಕ ಹೊರೆಯನ್ನು ಉಂಟು ಮಾಡಲಿದ್ದು, ಆಹಾರ ಪದಾರ್ಥಗಳ ಬೆಲೆ ಮತ್ತಷ್ಟು ಏರಿಕೆಯಾಗಲಿದೆ. ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭಗೊAಡ ಬಳಿಕ ೩ನೇ ಬಾರಿಗೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ ಮಾಡಲಾಗಿದೆ. ಮಾರ್ಚ್ನಲ್ಲಿ ೧೪೪ ರೂ, ಏಪ್ರಿಲ್‌ನಲ್ಲಿ ೨೦೦ ರೂ ಹಾಗೂ ಇದೀಗ ಮೂರನೇ ಬಾರಿಗೆ ೯೯೩ ರೂ ಹೆಚ್ಚಳ ಮಾಡಲಾಗಿದೆ. ಹೀಗಾಗಿ ಎಲ್ಲೆಡೆ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಇತ್ತ ರಾಜ್ಯದಲ್ಲಿ ಕೂಡ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆಯ ಎಫೆಕ್ಟ್ ತಟ್ಟಿದ್ದು, ಹೋಟೆಲ್ ಮಾಲೀಕರಿಂದ ವಿರೋಧ ವ್ಯಕ್ತವಾಗಿದ್ದು, ಮೊದಲಿನ ದರ ಮುಂದುವರೆಸುವAತೆ ಕೇಂದ್ರಕ್ಕೆ ಆಗ್ರಹಿಸಿದ್ದಾರೆ.